Belagavi News:
ರಾಜ್ಯದಲ್ಲಿ ಮುಂಗಾರು ಮಳೆ ಚುರುಕಾಗಿದ್ದು, ಕರ್ನಾಟಕದ ಹಲವು ಭಾಗಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶೇಷವಾಗಿ ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಮಳೆಯ ಅಬ್ಬರ ಹೆಚ್ಚುವ ನಿರೀಕ್ಷೆ ಇದೆ.
ಹವಾಮಾನ ಇಲಾಖೆಯ ಪ್ರಕಾರ, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ಪ್ರದೇಶಗಳಲ್ಲಿ ಧಾರಾಕಾರ ಮಳೆ, ಬಿರುಗಾಳಿ ಹಾಗೂ ಜಲಾವೃತ ಪರಿಸ್ಥಿತಿ ಉಂಟಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗಿದೆ.
ಇನ್ನು ಮಲೆನಾಡು ಮತ್ತು ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ನೀಡಲಾಗಿದ್ದು, ಮಧ್ಯಮದಿಂದ ಭಾರಿ ಮಳೆ ಆಗುವ ಸಾಧ್ಯತೆ ಇದೆ. ಜೊತೆಗೆ ಬೆಂಗಳೂರು ಸೇರಿದಂತೆ ರಾಜ್ಯದ ಉಳಿದ ಭಾಗಗಳಲ್ಲಿ ಬಿರುಗಾಳಿ ಸಹಿತ ಸಾಧಾರಣ ಮಳೆ ಯಾಗುವ ಮುನ್ಸೂಚನೆ ಇದೆ.
ಮುಂದಿನ ಕೆಲವು ದಿನಗಳ ಕಾಲ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯ ಚುರುಕು ಮುಂದುವರೆಯುವ ಸಾಧ್ಯತೆಯಿದ್ದು, ಜನರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಹಾಗೂ ಸುರಕ್ಷತೆಗೆ ಆದ್ಯತೆ ನೀಡುವಂತೆ ಹವಾಮಾನ ಇಲಾಖೆ ಸೂಚಿಸಿದೆ.
ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ - ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಭಾರಿ ಮಳೆ ಎಚ್ಚರಿಕೆ :
ಕರ್ನಾಟಕದ ಕರಾವಳಿ ಭಾಗದಲ್ಲಿ ಮುಂಗಾರು ಮಳೆ ಮತ್ತಷ್ಟು ತೀವ್ರಗೊಂಡಿದ್ದು, ಹವಾಮಾನ ಇಲಾಖೆ ಮಹತ್ವದ ಎಚ್ಚರಿಕೆ ನೀಡಿದೆ. ರಾಜ್ಯದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಈ ಜಿಲ್ಲೆಗಳಲ್ಲಿ ಮುಂದಿನ ಗಂಟೆಗಳಲ್ಲಿ ಧಾರಾಕಾರ ಮಳೆಯ ಜೊತೆಗೆ ಗಂಟೆಗೆ 30 ರಿಂದ 40 km ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ. ಈ ಹವಾಮಾನ ಪರಿಸ್ಥಿತಿಯಿಂದ ಕಡಲ ತೀರ ಪ್ರದೇಶಗಳಲ್ಲಿ ಜಲಾವೃತ ಮತ್ತು ಅಲೆಗಳ ತೀವ್ರತೆ ಹೆಚ್ಚುವ ಭೀತಿ ಇದೆ.
ಈ ಹಿನ್ನೆಲೆಯಲ್ಲಿ ಕರಾವಳಿ ಭಾಗದ ನಿವಾಸಿಗಳು ಎಚ್ಚರಿಕೆಯಿಂದ ಇರಲು ಸೂಚನೆ ನೀಡಲಾಗಿದೆ. ವಿಶೇಷವಾಗಿ ಮೀನುಗಾರರು ಸಮುದ್ರಕ್ಕೆ ತೆರಳದಂತೆ ಮತ್ತು ಕಡಲ ತೀರ ಪ್ರದೇಶಗಳಲ್ಲಿ ಜಾಗರೂಕರಾಗಿರಲು ಅಧಿಕಾರಿಗಳು ಮನವಿ ಮಾಡಿದ್ದಾರೆ.
ಮುಂದಿನ ದಿನಗಳಲ್ಲಿಯೂ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರೆಯುವ ಸಾಧ್ಯತೆಯಿದ್ದು, ಸಾರ್ವಜನಿಕರು ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ.
ಕರ್ನಾಟಕ ಹವಾಮಾನ ಎಚ್ಚರಿಕೆ - ಹಲವು ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ - ಮಲೆನಾಡಿನಲ್ಲಿ ಭಾರಿ ಮಳೆ ಮುನ್ಸೂಚನೆ :
ಕರ್ನಾಟಕದಲ್ಲಿ ಮುಂಗಾರು ಮಳೆ ಮುಂದುವರಿದಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಎಲ್ಲೋ ಅಲರ್ಟ್ ಘೋಷಿಸಿದೆ. ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯ ಸಾಧ್ಯತೆ ಇದ್ದರೆ, ಇತರ ಪ್ರದೇಶಗಳಲ್ಲಿಯೂ ಬಲವಾದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆ ಆಗುವ ನಿರೀಕ್ಷೆ ಇದೆ.
ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇರುವುದರಿಂದ ಎಲ್ಲೋ ಅಲರ್ಟ್ ನೀಡಲಾಗಿದೆ.
ಇನ್ನು ಬಾಗಲಕೋಟೆ, ಬೀದರ್, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳ ಹಲವು ಭಾಗಗಳಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ.
ಮಲೆನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಚಿಗಳೂರು ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆಯ ಇದ್ದು, ಈ ನಾಲ್ಕು ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ.
ಮುಂದಿನ ದಿನಗಳಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯ ಚುರುಕು ಮುಂದುವರೆಯುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಹವಾಮಾನ ಇಲಾಖೆ ಸೂಚಿಸಿದೆ.
ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಮುನ್ಸೂಚನೆ - ಬಲವಾದ ಗಾಳಿ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ :
ಕರ್ನಾಟಕದಲ್ಲಿ ಮುಂಗಾರು ಮಳೆ ಮುಂದುವರಿದಿದ್ದು, ಬೆಂಗಳೂರು ನಗರ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಆಗುವ ಮುನ್ಸೂಚನೆ ಹವಾಮಾನ ಇಲಾಖೆ ನೀಡಿದೆ. ತೇವಾಂಶ ಭರಿತ ಬಲವಾದ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗಿದೆ.
ಹವಾಮಾನ ಇಲಾಖೆಯ ಪ್ರಕಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಈ ಭಾಗಗಳಲ್ಲಿ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆ ಆಗುವ ನಿರೀಕ್ಷೆಯಿದ್ದು, ಕೆಲವೆಡೆ ತಾತ್ಕಾಲಿಕವಾಗಿ ಗಾಳಿ ವೇಗ ಹೆಚ್ಚಾಗುವ ಸಾಧ್ಯತೆಯೂ ಇದೆ.
ಭಾರಿ ಮಳೆ ಮತ್ತು ಗಾಳಿಯ ಹಿನ್ನೆಲೆಯಲ್ಲಿ ದುರ್ಬಲ ಕಟ್ಟಡಗಳು, ಮರಗಳು ಹಾಗೂ ವಿದ್ಯುತ್ ಕಂಬಗಳಿಂದ ದೂರವಿರಲು ಮತ್ತು ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯಲು ಹವಾಮಾನ ಇಲಾಖೆ ಸೂಚಿಸಿದೆ. ವಾಹನ ಚಾಲಕರು ಜಾಗರೂಕತೆಯಿಂದ ಸಂಚಾರ ನಡೆಸುವಂತೆ ಮನವಿ ಮಾಡಲಾಗಿದೆ.