Belagavi news:
ರಾಜ್ಯದಲ್ಲಿ ವರುಣನ ಆರ್ಭಟ ಮುಂದುವರೆದಿದ್ದು, ಬೆಂಗಳೂರು ಸೇರಿದಂತೆ ಹಲವೆಡೆ ಎಂದು ಗುಡುಗು ಸಹಿತ ಭಾರಿ ಮಳೆ ಆಗುವ ಸಾಧ್ಯತೆ ಇದೆ. ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದ್ದು, ಹಾಸನ ಸೇರಿದಂತೆ ನಾಲ್ಕು ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ.
ಹವಾಮಾನ ಇಲಾಖೆ ಮಾಹಿತಿ ಪ್ರಕಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ತುಮಕೂರು, ರಾಮನಗರ ಸೇರಿದಂತೆ ಹಲವಡೆ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು ಮಿಂಚಿನೊಂದಿಗೆ ಮಳೆ ಆಗುವ ಸಾಧ್ಯತೆ ಇದೆ. ಕೆಲವೆಡೆ ಗಾಳಿಯ ವೇಗ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಜನರು ಎಚ್ಚರಿಕೆಯಿಂದ ಇರಬೇಕು ಎಂದು ಸುಚಿಸಲಾಗಿದೆ.
ವಿಶೇಷವಾಗಿ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಹಾಸನ ಕೊಡಗು ಚಿಕ್ಕಮಂಗಳೂರು ಹಾಗೂ ಶಿವಮೊಗ್ಗ ಭಾಗಗಳಲ್ಲಿ ಬಿರುಗಾಳಿಯೊಂದಿಗೆ ಆಲಿಕಲ್ಲು ಮಳೆ ಆಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಹಾಸನ ಸೇರಿದಂತೆ ನಾಲ್ಕು ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ನೀಡಲಾಗಿದ್ದು, ರೈತರು ಹಾಗೂ ಸಾರ್ವಜನಿಕರು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ, ಇಲಾಖೆಯ ಸಲಹೆ ನೀಡಿದೆ.
ಬೆಂಗಳೂರು ನಗರದಲ್ಲಿಯೂ ಕಳೆದ ಕೆಲವು ದಿನಗಳಿಂದ ಸಂಜೆ ವೇಳೆಯಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಇಂದು ಸಹ ಹಲವು ಪ್ರದೇಶಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇರುವುದರಿಂದ ವಾಹನ ಸವಾರರು ಟ್ರಾಫಿಕ್ ಸಮಸ್ಯೆ ಹಾಗೂ ನೀರು ನಿಲ್ಲುವ ಪ್ರದೇಶಗಳಲ್ಲಿ ಎಚ್ಚರಿಕೆಯಿಂದ ಸಂಚರಿಸುವಂತೆ ಸೂಚಿಸಲಾಗಿದೆ.
ಇನ್ನು ಮುಂದಿನ ಮೂರು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ವಾತಾವರಣ ಮುಂದುವರಿಯಲಿದ್ದು, ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಪ್ರದೇಶಗಳಲ್ಲಿ ಹೆಚ್ಚಿನ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಈ ಮಳೆಯ ಪರಿಣಾಮವಾಗಿ ತಾಪಮಾನದಲ್ಲಿ ಸ್ವಲ್ಪ ಇಳಿಕೆ ಕಂಡು ಬರುವ ಸಾಧ್ಯತೆ ಇದ್ದರೂ, ಮಿಂಚು ಗುಡುಗು ಹಾಗೂ ಬಿರುಗಾಳಿಯ ಹಿನ್ನೆಲೆ ಜನರು ಸುರಕ್ಷತಾ ಕ್ರಮಗಳನ್ನು ಪಾಲಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.
ರಾಜ್ಯದ ಹಲವೆಡೆ ಮಳೆ ಆರ್ಭಟ ಮುಂದುವರಿದಿದ್ದು, ಬೆಂಗಳೂರು ಸೇರಿದಂತೆ ಇಂದು ಹಲವಡೆ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಹಾಸನ ಕೊಡಗು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಹಾಲಿ ಕಲ್ಲು ಮಳೆಯಾಗುವ ಸಾಧ್ಯತೆ ಇದ್ದು, ನಾಲ್ಕು ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ.
ಹವಾಮಾನ ಇಲಾಖೆ ಮಾಹಿತಿ ಪ್ರಕಾರ, ಮುಂದಿನ ಮೂರು ದಿನಗಳವರೆಗೆ ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆ ಆಗುವ ಸಾಧ್ಯತೆ ಇದೆ. ನಗರದಲ್ಲಿ ಇಂದು ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದ್ದು ಹಲವಡೆ ಗಾಳಿ ಮಿಂಚು ಸಹಿತ ಮಳೆ ಆಗುವ ನಿರೀಕ್ಷೆಯಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೂಡ ಮಳೆ ಅಬ್ಬರ ಮುಂದುವರೆದಿದ್ದು, ಕೆಲ ಪ್ರದೇಶಗಳಲ್ಲಿ ಆಲಿಕಲ್ಲು ಮಳೆಯ ಸಾಧ್ಯತೆ ಹೆಚ್ಚಿದೆ ಎಂದು ವಿಲಾವಿ ತಿಳಿಸಿದೆ. ಕೊಡಗು, ಹಾಸನ ಸೇರಿದಂತೆ ಒಟ್ಟು ನಾಲ್ಕು ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಜನರು ಎಚ್ಚರಿಕೆಯಿಂದ ಇರಬೇಕು ಎಂದು ಸೂಚಿಸಲಾಗಿದೆ.
ಮಲೆನಾಡು ಹಾಗೂ ದಕ್ಷಿಣ ಕನ್ನಡ ಒಳನಾಡಿನ ಭಾಗಗಳಲ್ಲಿ ಬಿರುಗಾಳಿ ಸಹಿತ ಮಳೆ ಆಗುವ ಸಾಧ್ಯತೆ ಇರುವುದರಿಂದ, ರೈತರು ಬೆಳೆ ಸಂರಕ್ಷಣೆಗಾಗಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸಲಹೆ ನೀಡಲಾಗಿದೆ. ವಾಹನ ಸವಾರರು ಸಹ ದೃಶ್ಯತೆ ಕಡಿಮೆಯಾಗುವ ಸಂದರ್ಭಗಳಲ್ಲಿ ಎಚ್ಚರಿಕೆಯಿಂದ ಸಂಚರಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.
ಮುಂದಿನ ಮೂರು ದಿನಗಳ ಕಾಲ ರಾಜ್ಯದ ಕೆಲವು ಭಾಗಗಳಲ್ಲಿ ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಹವಾಮಾನ ಇಲಾಖೆಯ ಸೂಚನೆಗಳನ್ನು ಅನುಸರಿಸುವಂತೆ ಸೂಚಿಸಲಾಗಿದೆ.
ರಾಜ್ಯದಲ್ಲಿ ವರುಣನ ಆರ್ಭಟ ಮುಂದುವರೆದಿದ್ದು, ಹವಾಮಾನ ಇಲಾಖೆ ಮುಂದಿನ ಮೂರು ದಿನಗಳ ಕಾಲ ಗುಡುಗು ಮಿಂಚು ಹಾಗೂ ಹಾಲಿ ಕಲ್ಲು ಮಳೆಯ ಎಚ್ಚರಿಕೆ ನೀಡಿದೆ. ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ ಇದ್ದು, ಹಲವಡೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ.
ಹವಾಮಾನ ಇಲಾಖೆಯ ಮಾಹಿತಿಯ ಪ್ರಕಾರ, ಕರಾವಳಿಯ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗಂಟೆಗೆ 30 ರಿಂದ 40 ಕಿ.ಮೀ ವೇಗದ ಗಾಳಿಯೊಂದಿಗೆ ಗುಡುಗು ಸಹಿತ ಮಳೆ ಆಗುವ ಸಾಧ್ಯತೆ ಇದೆ. ಆದರೆ ಉತ್ತರ ಕನ್ನಡ ಜಿಲ್ಲೆಯಲ್ಲಿ ತಾತ್ಕಾಲಿಕವಾಗಿ ಶುಷ್ಕ ವಾತಾವರಣ ಮುಂದುವರೆಯಲಿದೆ ಎಂದು ತಿಳಿಸಲಾಗಿದೆ.
ದಕ್ಷಿಣ ಒಳನಾಡಿನಲ್ಲಿ ಮಳೆಯ ಅಬ್ಬರ ಇನ್ನಷ್ಟು ಹೆಚ್ಚು ನಿರೀಕ್ಷೆ ಇದ್ದು, ಹಾಸನ ಮಂಡ್ಯ ಮೈಸೂರು ಕೊಡಗು ಶಿವಮೊಗ್ಗ ಬೆಂಗಳೂರು ಗ್ರಾಮಾಂತರ ಬೆಂಗಳೂರು ನಗರ ಚಿಕ್ಕಮಗಳೂರು ಹಾಗೂ ತುಮಕೂರು ಜಿಲ್ಲೆಗಳಲ್ಲಿ ಗಂಟೆಗೆ 40-50 ಕಿಮೀ ವೇಗದ ಬಿರುಗಾಳಿಯೊಂದಿಗೆ ಗುಡುಗು ಸಹಿತ ಅಲ್ಲಿ ಕಲ್ಲು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರವಳ ನಾಡಿನ ಧಾರವಾಡ, ಹಾವೇರಿ, ಗದಗ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಸಹಗುಡುಗು ಸಹಿತ ಮಳೆ ಆಗುವ ಸಾಧ್ಯತೆ ಇದೆ. ಉಳಿದ ಪ್ರದೇಶಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಹಾಗೂ ತಾತ್ಕಾಲಿಕ ಒಳಹಬೆಯ ಸ್ಥಿತಿ ಇರಲಿದೆ ಎಂದು ತಿಳಿಸಲಾಗಿದೆ.
ಮೇ 7 ಮತ್ತು 8ರಂದು ಬೆಳಗಾವಿ, ಉತ್ತರ ಕನ್ನಡ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗುವ ಸಾಧ್ಯತೆ ಇದ್ದು, ಇವುಗಳನ್ನು ಹೊರತುಪಡಿಸಿ ರಾಜ್ಯದ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದೆ. ಈ ಹಿನ್ನಲೆಯ ಹಲವಡೆ ಎಲ್ಲೋ ಅಲರ್ಟ್ ಜಾರಿಯಲ್ಲಿರುತ್ತದೆ ಎಂದು ಇಲಾಖೆ ತಿಳಿಸಿದೆ.
ಬೀದರ್ , ಕಲ್ಬುರ್ಗಿ, ವಿಜಯಪುರ, ಯಾದಗಿರಿ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಸಾಧಾರಣ ಮಳೆಯ ನಿರೀಕ್ಷೆ ಇದೆ. ಈ ಆರು ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯದ ಉಳಿದ ಎಲ್ಲಾ ಭಾಗಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸ್ಪಷ್ಟಪಡಿಸುತ್ತಿದೆ.
ಇದರಿಂದ ಈ ರೈತರು, ವಾಹನ ಸವಾರರು ಹಾಗೂ ಸಾರ್ವಜನಿಕರು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ. ಗುಡುಗು ಮಿಂಚು ಹಾಗೂ ಬಿರುಗಾಳಿ ಇರುವ ಸಂದರ್ಭಗಳಲ್ಲಿ ಅನಗತ್ಯವಾಗಿ ಹೊರಗೆ ತೆರಳುವುದನ್ನು ತಪ್ಪಿಸುವಂತೆ ಸೂಚಿಸಲಾಗಿದೆ.
Also Read:
Vijay Daughter Divya Sasha: ಶೈಕ್ಷಣಿಕ ಹಿನ್ನೆಲೆ ಏನು? ಇಲ್ಲಿದೆ ಮಾಹಿತಿ