<?= $pageTitle ?>
Logo
ಮುಖಪುಟ ಓದುವುದು ಕೇಳು
Trending

ಚೆನ್ನಮ್ಮ ಅಂತ್ಯಕ್ರಿಯೆಗೆ ವಾಸ್ತು ಸಲಹೆ: ಬೆಂಗಳೂರಿನಿಂದ ಬಂದ ತಜ್ಞ ಬಹಿರಂಗಪಡಿಸಿದ ಮಾಹಿತಿ

ಚೆನ್ನಮ್ಮ ಅಂತ್ಯಕ್ರಿಯೆಗೆ ವಾಸ್ತು ಸಲಹೆ: ಬೆಂಗಳೂರಿನಿಂದ ಬಂದ ತಜ್ಞ ಬಹಿರಂಗಪಡಿಸಿದ ಮಾಹಿತಿ
Summary: It is said that Chennamma's funeral was held according to Vastu, and Vastu experts who arrived at the scene from Bangalore have given important information in this regard.

belagvi news :

ಹಾಸನ: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್ .ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ದೇವೇಗೌಡ ಅವರ ಅಂತ್ಯಕ್ರಿಯೆ ನಾಳೆ (ಜುಲೈ 20) ಹಾಸನ್ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಹರದನಹಳ್ಳಿ ಗ್ರಾಮದ ಸಮೀಪದ ಕ್ಯಾತನಹಳ್ಳಿ ಗ್ರಾಮದ ಜಮೀನಿನಲ್ಲಿ ನಡೆಯಲಿದೆ.

ಚೆನ್ನಮ್ಮ ದೇವೇಗೌಡ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲು ಸಿದ್ಧತೆಗಳು ನಡೆಯುತ್ತಿವೆ. ಹಾಸನ್ ಜಿಲ್ಲಾಡಳಿತದಿಂದ ಅಂತಿಮ ವಿಧಿವಿಧಾನಗಳಿಗೆ ಅಗತ್ಯವಾದ ಎಲ್ಲಾ ವ್ಯವಸ್ಥೆಗಳನ್ನು ಕೈಗೊಳ್ಳಲಾಗುತ್ತಿದೆ.

ಮಾಹಿತಿಯ ಪ್ರಕಾರ, ಅಂತ್ಯಕ್ರಿಯೆ ಸ್ಥಳದ ಆಯ್ಕೆ ಮತ್ತು ವ್ಯವಸ್ಥೆಗಳನ್ನು ವಾಸ್ತು ನಿಯಮಗಳ ಪ್ರಕಾರ ಮಾಡಲಾಗುತ್ತಿದೆ. ಇದಕ್ಕಾಗಿ ವಾಸ್ತು ತಜ್ಞರ ಸಲಹೆಯನ್ನು ಪಡೆಯಲಾಗಿದೆ ಎನ್ನಲಾಗಿದೆ.

ಅಂತ್ಯಕ್ರಿಯೆಯಲ್ಲಿ ಗಣ್ಯರು, ರಾಜಕೀಯ ಮುಖಂಡರು ಹಾಗೂ ಕುಟುಂಬ ಸದಸ್ಯರು ಭಾಗವಹಿಸುವ ನಿರೀಕ್ಷೆಯಿದ್ದು, ಸ್ಥಳದಲ್ಲಿ ಭದ್ರತೆ ಸೇರಿದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಚೆನ್ನಮ್ಮ ದೇವೇಗೌಡ ಅವರ ನಿಧನಕ್ಕೆ ರಾಜ್ಯದ ಹಲವು ಗಣ್ಯರು ಸಂತಾಪ ಸೂಚಿಸಿದ್ದು, ಅವರ ಅಂತಿಮ ದರ್ಶನ ಮತ್ತು ಅಂತ್ಯಕ್ರಿಯೆಗಾಗಿ ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಪೂರ್ಣಗೊಳಿಸುತ್ತಿದೆ.

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ದೇವೇಗೌಡ ಅವರ ಅಂತ್ಯಕ್ರಿಯೆ ಹಿನ್ನೆಲೆಯಲ್ಲಿ ಕುಟುಂಬದ ಕೋರಿಕೆಯ ಮೇರೆಗೆ ಬೆಂಗಳೂರಿನ ಖ್ಯಾತ ವಸ್ತು ತಜ್ಞ ಹರಿಪ್ರಸಾದ್ ಅವರು ಹರದನಹಳ್ಳಿಗೆ ಭೇಟಿ ನೀಡಿ ಅಂತಿಮ ಸಂಸ್ಕಾರ ನಡೆಯುವ ಸ್ಥಳವನ್ನು ಪರಿಶೀಲನೆ ನಡೆಸಿದ್ದಾರೆ.

ಚೆನ್ನಮ್ಮ ದೇವೇಗೌಡ ಅವರ ಅಂತ್ಯಕ್ರಿಯೆ ಹೊಳೆನರಸೀಪುರ್ ತಾಲೂಕಿನ ಹರದನಹಳ್ಳಿ ಗ್ರಾಮದ ಸಮೀಪದ ಕ್ಯಾತನಹಳ್ಳಿ ಗ್ರಾಮದ ಜಮೀನಿನಲ್ಲಿ ನಡೆಯಲಿದ್ದು, ಸ್ಥಳದಲ್ಲಿ ಯಾವ ಭಾಗದಲ್ಲಿ ಅಂತಿಮ ವಿಧಿವಿಧಾನ ನೆರವೇರಿಸಬೇಕು ಎಂಬುದರ ಕುರಿತು ವಾಸ್ತು ತಜ್ಞರು ಪರಿಶೀಲನೆ ನಡೆಸಿದ್ದಾರೆ.

ಖಾಸಗಿ ಮಾಧ್ಯಮ ಒಂದರಲ್ಲಿ ಮಾತನಾಡಿದ ವಾಸ್ತು ತಜ್ಞ ಹರಿಪ್ರಸಾದ್, ದೇವೇಗೌಡರ ಕುಟುಂಬ ದೇವರು ಮತ್ತು ವಾಸ್ತುವಿನ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತದೆ ಎಂದು ಹೇಳಿದ್ದಾರೆ.

ದೇವೇಗೌಡರ ಕುಟುಂಬ ದೇವರು, ವಾಸ್ತು ಬಿಟ್ಟು ಏನನ್ನೂ ಮಾಡುವುದಿಲ್ಲ. ಇಂತಹ ದೈವ ಭಕ್ತರು ಎಲ್ಲೂ ಸಿಗುವುದಿಲ್ಲ. ಅಂತಿಮ ಸಂಸ್ಕಾರ ನಡೆಯುವ ಸ್ಥಳ ಈಗಾಗಲೇ ನಿಗದಿಯಾಗಿದೆ. ಆದರೆ ಅಲ್ಲಿ ಯಾವ ಭಾಗದಲ್ಲಿ ಅಂತ್ಯಕ್ರಿಯೆ ನಡೆಸಬೇಕು ಎಂಬುದನ್ನು ಪರಿಶೀಲಿಸಲು ಬಂದಿದ್ದೇನೆ" ಎಂದು ಅವರು ತಿಳಿಸಿದ್ದಾರೆ.

ಸ್ಥಳದ ಕುರಿತು ಈ ಹಿಂದೆ ಕುಟುಂಬದೊಂದಿಗೆ ಚರ್ಚೆ ನಡೆದಿತ್ತು. ಇದೀಗ ಖುದ್ದಾಗಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುವುದಾಗಿ ಹರಿಪ್ರಸಾದ್ ಹೇಳಿದ್ದಾರೆ.

ಚೆನ್ನಮ್ಮ ದೇವೇಗೌಡ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲು ಹಾಸನ ಜಿಲ್ಲಾಡಳಿತ ಸಿದ್ಧತೆ ಕೈಗೊಂಡಿದ್ದು, ಭದ್ರತೆ ಸೇರಿದಂತೆ ಅಗತ್ಯ ವ್ಯವಸ್ಥೆಗಳನ್ನು ಮಾಡಿಕೊಳ್ಳುತ್ತಿದೆ.

Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online