BELAGAVI NEWS :
ಗದಗ : ರಾಜ್ಯದ ಮುಖ್ಯಮಂತ್ರಿಯಾಗಿ ಅಭಿವೃದ್ಧಿ ಯೋಜನೆಗಳನ್ನು ರೂಪಿಸಬೇಕು, ರಿಯಲ್ ಎಸ್ಟೇಟ್ ಏಜೆಂಟ್ ನಂತೆ ವರ್ತಿಸಬಾರದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಗದಗ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಡದಿ ಟೌನ್ ಶಿಪ್ ಯೋಜನೆಗೆ ಫಲವತ್ತಾದ ಕೃಷಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಸರ್ಕಾರದ ಕ್ರಮವನ್ನು ಖಂಡಿಸಿದರು. ರೈತರ ಒಪ್ಪಿಗೆ ಇಲ್ಲದೆ ಭೂ ಸ್ವಾಧೀನ ಮಾಡುವುದು ಸರಿಯಲ್ಲ. ರೈತರು ಸ್ವಯಂ ಪ್ರೇರಿತವಾಗಿ ಒಪ್ಪಿಗೆ ನೀಡಿದರೆ ಮಾತ್ರ ಯೋಜನೆ ಜಾರಿಯಾಗಬೇಕು, ಒತ್ತಡ ಹೇರಿ ಭೂಸ್ವಾಧೀನ ಮಾಡಬಾರದು ಎಂದು ಆಗ್ರಹಿಸಿದರು.
ರಾಜ್ಯಕ್ಕೆ ಎರಡನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಅಗತ್ಯ ಎಂಬುದಕ್ಕೆ ಬಿಜೆಪಿಯೂ ಬೆಂಬಲ ನೀಡುತ್ತದೆ. ಆದರೆ ಅದನ್ನು ಕನಕಪುರದಲ್ಲಿ ಸ್ಥಾಪಿಸುವ ನಿರ್ಧಾರ ಪ್ರಶ್ನಾರ್ಹವಾಗಿದೆ ಎಂದು ವಿಜಯೇಂದ್ರ ಅಭಿಪ್ರಾಯ ಪಟ್ಟರು.
ಅವರ ಪ್ರಕಾರ, ವಿಮಾನ ನಿಲ್ದಾಣವನ್ನು ತುಮಕೂರು ಭಾಗದಲ್ಲಿ ನಿರ್ಮಿಸಿದ್ದರೆ ಮಧ್ಯ ಕರ್ನಾಟಕ ಮತ್ತು ಉತ್ತರ ಕರ್ನಾಟಕದ ಜನರಿಗೆ ಹೆಚ್ಚಿನ ಅನುಕೂಲವಾಗುತ್ತಿತ್ತು,ಅಭಿವೃದ್ಧಿ ಯೋಜನೆಗಳು ರಾಜಕೀಯ ಲಾಭಕ್ಕಿಂತ ಜನಹಿತವನ್ನು ಗಮನದಲ್ಲಿಟ್ಟುಕೊಂಡು ರೂಪಿಸಬೇಕು ಎಂದು ಅವರು ಸರ್ಕಾರಕ್ಕೆ ಸಲಹೆ ನೀಡಿದರು.
ಬಿಡದಿ ಟೌನ್‌ಶಿಪ್ ಯೋಜನೆ, ರೈತರ ಭೂಸ್ವಾಧೀನ ಹಾಗೂ ಎರಡನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸ್ಥಳ ಆಯ್ಕೆ ವಿಚಾರಗಳು ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿವೆ.
ಬಿಡದಿ ಟೌನ್ಶಿಪ್ ಯೋಜನೆಗೆ ನಮ್ಮ ವಿರೋಧವಿಲ್ಲ. ಆದರೆ ಶೇ.70ರಷ್ಟು ರೈತರು ಸ್ವಯಂ ಪ್ರೇರಿತವಾಗಿ ಒಪ್ಪಿಗೆ ನೀಡಿದರೆ ಮಾತ್ರ ಯೋಜನೆ ಜಾರಿಯಾಗಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರ ಮೇಲೆ ಒತ್ತಡ ಹೇರಿ ಭೂಸ್ವಾಧೀನ ಮಾಡುವುದು ಸರಿಯಲ್ಲ ಎಂದು ಸರ್ಕಾರವನ್ನು ಎಚ್ಚರಿಸಿದರು. ಸರ್ಕಾರ ಬಲವಂತವಾಗಿ ಜಾಮೀನು ಪಡೆಯುವುದಿಲ್ಲ ಎಂದು ಹೇಳುತ್ತಿದ್ದರು, ರಾತ್ರಿ ವೇಳೆ ಕೆಲವರು ರೈತರ ಮನೆಗಳಿಗೆ ತೆರಳಿ ಜಾಮೀನು ಬಿಟ್ಟುಕೊಡುವಂತೆ ಬೆದರಿಕೆ ಹಾಕುತ್ತಿದ್ದಾರೆ ಎಂಬ ದೂರುಗಳು ಕೇಳಿ ಬರುತ್ತಿವೆ ಎಂದು ಆರೋಪಿಸಿದರು.
ರೈತರ ಭೂಮಿಯನ್ನು ಅವರ ಇಚ್ಛೆಗೆ ವಿರುದ್ಧವಾಗಿ ಸ್ವಾದಿನಪಡಿಸಿಕೊಳ್ಳುವ ಯಾವುದೇ ಕ್ರಮ ಸರ್ಕಾರಕ್ಕೆ ದುಬಾರಿಯಾಗಲಿದೆ. ರೈತರ ಶಾಪಕ್ಕೆ ಸರ್ಕಾರ ಗುರಿಯಾಗಲಿದೆ ಎಂದು ವಿಜಯೇಂದ್ರ ಎಚ್ಚರಿಕೆ ನೀಡಿದರು.
ಇದೆ ವೇಳೆ ರಾಜ್ಯದ ಕಾನೂನು ಸುವ್ಯವಸ್ಥೆ ಕುರಿತು ಕಾಂಗ್ರೆಸ್ ಸರ್ಕಾರವನ್ನು ಟೀಕಿಸಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಹಿಂದೂಗಳ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಾಗಿವೆ ಎಂದು ಆರೋಪಿಸಿದರು. ಅಲ್ಪಸಂಖ್ಯಾತರ ಓಲೈಕೆ ರಾಜ್ಯಕಾರಣದಿಂದ ಮತಿಯ ಶಕ್ತಿಗಳಿಗೆ ಧೈರ್ಯ ಬಂದಿದೆ ಎಂದು ಹೇಳಿದ ಅವರು, ಹಾವೇರಿ, ರಟ್ಟಿಹಳ್ಳಿ, ಯಲ್ಲಾಪುರ ಮತ್ತು ಕೊಪ್ಪಳ ಪ್ರದೇಶಗಳಲ್ಲಿ ನಡೆದ ಘಟನೆಗಳನ್ನು ಉಲ್ಲೇಖಿಸಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ದೂರಿದರು.
ಬಿಡದಿ ಟೌನ್ ಶಿಪ್ ಯೋಜನೆ, ರೈತರ ಭೂಸ್ವಾಧೀನ, ಕಾನೂನು ವ್ಯವಸ್ಥೆ ಮತ್ತು ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಜಯೇಂದ್ರ ಮಾಡಿದ ಆರೋಪಗಳು ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿವೆ.
ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯನ್ನು ಬಿಜೆಪಿ ಕಾರ್ಯಕರ್ತರು ಸವಾಲಾಗಿ ಸ್ವೀಕರಿಸಿದ್ದು, ಈ ಸಂದರ್ಭದಲ್ಲಿ ರಾಜ್ಯ ಸರ್ಕಾರ ಖಾಯಂ ನಿವಾಸಿ ಪ್ರಮಾಣ ಪತ್ರಗಳನ್ನು ವಿತರಿಸುತ್ತಿರುವುದು ಖಂಡನೀಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದರು.
ಈ ಕುರಿತು ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗಿದೆ ಎಂದು ತಿಳಿಸಿದವರು, ಸರ್ಕಾರದ ನಡೆ ಚುನಾವಣಾ ಪ್ರಕ್ರಿಯೆ ಪಾರದರ್ಶಕತೆ ಬಗ್ಗೆ ಪ್ರಶ್ನೆಗಳನ್ನು ಹುಟ್ಟು ಹಾಕುತ್ತಿದೆ ಎಂದು ಹೇಳಿದರು.
ರಾಜ್ಯದ ಬರ ಪರಿಸ್ಥಿತಿ ಕುರಿತು ಮಾತನಾಡಿದ ವಿಜಯೇಂದ್ರ, ಹಲವು ಜಿಲ್ಲೆಗಳಲ್ಲಿ ತೀವ್ರ ಬರ ಆವರಿಸಿದ್ದು, ರೈತರು ಬಿತ್ತನೆ ಮಾಡಿದ ಬೆಳೆಗಳೇ ಮೊಳಕೆಯೊಡೆಯದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು. ಕೃಷಿ ಸಚಿವರ ನೇಮಕ ವಿಳಂಬವಾಗಿರುವುದು ಕೃಷಿ ಕ್ಷೇತ್ರಕ್ಕೆ ಸರಕಾರ ನೀಡುತ್ತಿರುವ ಆದ್ಯತೆಯ ಕೊರತೆಯನ್ನು ತೋರಿಸುತ್ತದೆ ಎಂದು ಟೀಕಿಸಿದರು.
ಪ್ರಧಾನಮಂತ್ರಿಗೆ ಪತ್ರ ಬರೆದಿರುವುದರಿಂದ ಮಾತ್ರ ರೈತರ ಸಮಸ್ಯೆಗಳಿಗೆ ಪರಿಹಾರ ಸಿಗುವುದಿಲ್ಲ. ಸಚಿವರು ಜಿಲ್ಲೆಗಳಿಗೆ ಭೇಟಿ ನೀಡಿ ರೈತರ ಸಂಕಷ್ಟವನ್ನು ನೇರವಾಗಿ ಅರಿತು ತುರ್ತು ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.
ರೈತರ ಸಮಸ್ಯೆಗಳು, ಬಿಡದಿ ಟೌನ್ ಶಿಪ್ ಯೋಜನೆ,ಭರತ್ ಪರಿಸ್ಥಿತಿ ಹಾಗೂ ಇತರ ಜನಪರ ವಿಷಯಗಳನ್ನು ಮುಂದಿಟ್ಟುಕೊಂಡು ಶುಕ್ರವಾರ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ವಿಜಯೇಂದ್ರ ತಿಳಿಸಿದರು.