BELAGAVI NEWS :
ಇಂಗ್ಲೆಂಡ್ ನೆಲದಲ್ಲಿ ಶ್ರೇಯಸ್ ಅಯ್ಯರ್ ಹೊಸ ಇತಿಹಾಸ ! ವಿರಾಟ್ ಕೊಹ್ಲಿ ದಾಖಲೆಗೂ ತೆರೆ
ಟೀಮ್ ಇಂಡಿಯಾ ನಾಯಕ ಶ್ರೇಯಸ್ ಅಯ್ಯರ್ ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲೇ ಐತಿಹಾಸಿಕ ಸಾಧನೆ ಮಾಡಿ ಕ್ರಿಕೆಟ್ ಅಭಿಮಾನಿಗಳ ಗಮನ ಸೆಳೆದಿದ್ದಾರೆ. ನಾಯಕನಾಗಿ ಆಂಗ್ಲರ ನೆಲದಲ್ಲಿ ಆಡಿದ ಸ್ವಚ್ಛನ ಟಿ20 ಪಂದ್ಯದಲ್ಲೇ ಆಕರ್ಷಕ ಅರ್ಧಶತಕ ಸಿಡಿಸಿದ ಅಯ್ಯರ್, ವಿರಾಟ್ ಕೊಹ್ಲಿ ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನು ಹಿಂದಿಕ್ಕಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.
ಮೊದಲು ಬ್ಯಾಟಿಂಗ್ ಮಾಡಿದ ಭಾರತ ಪರ ಅಭಿಷೇಕ್ ಶರ್ಮಾ 59 ರನ್ ಹಾಗೂ ಶ್ರೇಯಸ್ ಅಯ್ಯರ್ 68 ಆಡಿದರು. ಇವರ ಭರ್ಜರಿ ಪ್ರದರ್ಶನದ ನೆರವಿನಿಂದ ಟೀಮ್ ಇಂಡಿಯ 20 ಓವರ್ ಗಳಲ್ಲಿ ಏಳು ವಿಕೆಟ್ ನಷ್ಟಕ್ಕೆ 189 ರನ್ ಗಳ ಸವಾಲಿನ ಮೊತ್ತ ಕಲೆಹಾಕಿತು .
ಆದರೆ ಭಾರತದ ಇನ್ನಿಂಗ್ಸ್ ಮುಕ್ತಾಯವಾದ ತಕ್ಷಣ ಸುರಿದ ಬಾರಿ ಮಳೆಯಿಂದಾಗಿ ಪಂದ್ಯವನ್ನು ರದ್ದುಗೊಳಿಸಲಾಯಿತು. ಪಂದ್ಯಕ್ಕೆ ಫಲಿತಾಂಶ ಸಿಗದಿದ್ದರೂ, ಶ್ರೇಯಸ್ ಅಯ್ಯರ್ ಅವರ ಬ್ಯಾಟಿಂಗ್ ಹಾಗೂ ದಾಖಲೆ ನಿರ್ಮಾಣ ಕ್ರಿಕೆಟ್ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ನಾಯಕನಾಗಿ ಮೊದಲ ಪಂದ್ಯದಲ್ಲೇ ಐತಿಹಾಸಿಕ ಮೈಲಿಗಲ್ಲು ತಲುಪಿರುವ ಅಯ್ಯರ್, ಭಾರತಕ್ಕೆ ಬರವಸೆಯ ನಾಯಕ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ.
ಇಂಗ್ಲೆಂಡ್ ನೆಲದಲ್ಲಿ ಇತಿಹಾಸ ಬರೆದ ಶ್ರೇಯಸ್ ಅಯ್ಯರ್; ಕೊಹ್ಲಿ ದಾಖಲೆಗೂ ಮೀರಿದ ಸಾಧನೆ!
ಚೆಸ್ಟರ್ - ಲೆ - ಸ್ಟ್ರೀಟ್ ನಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಆರಂಭದಲ್ಲಿ ಟೀಮ್ ಇಂಡಿಯಾ ಕೇವಲ 6 ರನ್ಗಳಿಗೆ ಎರಡು ವಿಕೆಟ್ ಕಳೆದುಕೊಂಡು ನಷ್ಟಕ್ಕೆ ಸಿಲುಕಿತ್ತು. ಆದರೆ ಈ ವೇಳೆ ಕ್ರಿಸ್ ಗೆ ಬಂದ ನಾಯಕ ಶ್ರೇಯಸ್ ಅಯ್ಯರ್ ಜವಾಬ್ದಾರಿಯುತ ಹಾಗೂ ಆಕ್ರಮಣಕಾರಿ ಬ್ಯಾಟಿಂಗ್ ಮೂಲಕ ತಂಡಕ್ಕೆ ಆಸರೆಯಾದರು.
ಕೇವಲ 38 ಎಸೆತಗಳಲ್ಲಿ ಅರ್ಧ ಶತಕ ಪೂರೈಸಿದ ಅಯ್ಯರ್, ಇಂಗ್ಲೆಂಡ್ ನೆಲದಲ್ಲಿ ಟಿ20 ಕ್ರಿಕೆಟ್ನಲ್ಲಿ ಅರ್ಧಶತಕ ಸಿಡಿಸಿದ ಭಾರತದ ಮೊದಲ ನಾಯಕ ಎಂಬ ಐತಿಹಾಸಿಕ ದಾಖಲೆಯನ್ನು ತಮ್ಮ ಹೆಸರಿಗೆ ಬರೆದುಕೊಂಡರು. ಈ ಅದ್ಭುತ ಸಾಧನೆಯೊಂದಿಗೆ ವಿರಾಟ್ ಕೊಹ್ಲಿ ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನು ಹಿಂದಿಕ್ಕಿ ಹೊಸ ಇತಿಹಾಸ ನಿರ್ಮಿಸಿದ ಅಯ್ಯರ್, ತಮ್ಮ ನಾಯಕತ್ವದ ಮೊದಲ ಪಂದ್ಯದಲ್ಲಿ ದಾಖಲೆಗಳ ಪುಸ್ತಕದಲ್ಲಿ ಸ್ಥಾನ ಪಡೆದಿದ್ದಾರೆ.
ಆರಂಭಿಕ ಆಘಾತದ ನಡುವೆಯೂ ಜವಾಬ್ದಾರಿಯುತ ಇನ್ನಿಂಗ್ಸ್ ಕಟ್ಟಿದ ಅಯ್ಯರ್ ಅವರ ಬ್ಯಾಟಿಂಗ್, ಭಾರತವನ್ನು ಸ್ಪರ್ಧಾತ್ಮಕ ಮೊತ್ತದತ್ತ ಕೊಂಡೊಯ್ಯುವಲ್ಲಿ ನಿರ್ಣಾಯಕ ಪಾತ್ರ ವಹಿಸಿತು. ಅವರ ಈ ಪ್ರದರ್ಶನ ಇದೀಗ ಭಾರತೀಯ ಕ್ರಿಕೆಟ್ ವಲಯದಲ್ಲಿ ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿದೆ.
ಶ್ರೇಯಸ್ ಅಯ್ಯರ್ ಅಬ್ಬರ! ಇಂಗ್ಲೆಂಡ್ ನೆಲದಲ್ಲಿ ಕೊಹ್ಲಿ ದಾಖಲೆಗೆ ತೆರೆ; ಹೊಸ ಇತಿಹಾಸ ನಿರ್ಮಾಣ
ಇಂಗ್ಲೆಂಡ್ ವಿರುದ್ಧದ ಟಿ20 ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ ಮತ್ತೊಂದು ಐತಿಹಾಸಿಕ ಮೈಲಿಗಲ್ಲು ಸಾಧಿಸಿದ್ದಾರೆ. ಆಂಗ್ಲರ ನೆಲದಲ್ಲಿ ಭಾರತೀಯ ನಾಯಕನಾಗಿ ಗರಿಷ್ಠ ಸ್ಕೋರ್ ಮಾಡಿದ ಆಟಗಾರ ಎಂಬ ದಾಖಲೆಯನ್ನು ತಮ್ಮ ಹೆಸರಿಗೆ ಸೇರಿಸಿಕೊಂಡ ಅಯ್ಯರ್, ಈ ಮೂಲಕ ವಿರಾಟ್ ಕೊಹ್ಲಿ ಹೆಸರಿನಲ್ಲಿದ್ದ ಹಿಂದಿನ ಸಾಧನೆಗಳನ್ನು ಹಿಂದಿಕ್ಕಿದ್ದಾರೆ.
ಈ ಹಿಂದೆ 2018ರಲ್ಲಿ ಕಾರ್ಡಿಫ ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಟಿ 20 ಪಂದ್ಯದಲ್ಲಿ ವಿರಾಟ್ ಕೊಹ್ಲಿ 47 ರನ್ ಗಳಿಸಿ ಭಾರತೀಯ ನಾಯಕನ ಎಷ್ಟು ಪ್ರದರ್ಶನ ನೀಡಿದ್ದರು. ಆದರೆ ಚೆಸ್ಟರ್ - ಲೆ - ಸ್ಟ್ರೀಟ್ ನಲ್ಲಿ ನಡೆದ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ 47 ಎಸೆತಗಳಲ್ಲಿ 68 ರನ್ ಗಳ ಭರ್ಜರಿ ಇನ್ನಿಂಗ್ಸ್ ಆಡಿದರು. ಅವರ ಇನಿಂಗ್ಸ್ ನಲ್ಲಿ ಒಂದು ಸಿಕ್ಸ್ ಹಾಗೂ 6 ಫೋರ್‌ಗಳು ಸೇರಿದ್ದು, ಆರಂಭಿಕ ಆಘಾತದ ನಡುವೆಯೂ ತಂಡವನ್ನು ಮುನ್ನಡೆಸುವಲ್ಲಿ ಪ್ರಮುಖ ಪಾತ್ರ ವಹಿಸಿತು.
ಈ ಪ್ರದರ್ಶನದೊಂದಿಗೆ ಅಯ್ಯರ್ ಇಂಗ್ಲೆಂಡ್ ನೆಲದಲ್ಲಿ ಟಿ20 ಪಂದ್ಯದಲ್ಲಿ ಅರ್ಧಶತಕ ಸಿಡಿಸಿದ ಮೊದಲ ಭಾರತೀಯ ನಾಯಕ ಎಂಬ ದಾಖಲೆಯನ್ನು ನಿರ್ಮಿಸಿದ್ದಾರೆ. ನಾಯಕನಾಗಿ ಮೊದಲ ಪಂದ್ಯದಲ್ಲೇ ಇಂತಹ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದ ಅಯ್ಯರ್, ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಹೊಸ ಅಧ್ಯಯನವನ್ನು ಬರೆಯುವಂತೆ ಮಾಡಿದ್ದಾರೆ.