Belagavi News:
ಚುನಾವಣಾ ಆಯೋಗವು ದೇಶಾದ್ಯಂತ ಮತದಾರರ ಪಟ್ಟಿಯನ್ನು ಮತ್ತಷ್ಟು ನಿಖರ ಗೊಳಿಸುವ ಉದ್ದೇಶದಿಂದ ಮೇ 30ರಿಂದ ಮೂರನೇ ಹಂತದ ವಿಶೇಷತೆಯನ್ನು ಆರಂಭಿಸಲು ತೀರ್ಮಾನಿಸಿದೆ. ಕರ್ನಾಟಕ ಸೇರಿದಂತೆ 16 ರಾಜ್ಯಗಳು ಹಾಗೂ ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಅಭಿಯಾನ ನಡೆಯಲಿದ್ದು, ಮನೆ ಮನೆಗೆ ಭೇಟಿ ನೀಡಿ ಮತದಾರರ ಪರಿಶೀಲನೆ ನಡೆಸಲಾಗುತ್ತದೆ.
ಸುಮಾರು 3.94 ಲಕ್ಷ ಭೂತ ಮಟ್ಟದ ಅಧಿಕಾರಿಗಳು ಹಾಗೂ ರಾಜಕೀಯ ಪಕ್ಷಗಳು ನೇಮಿಸಿರುವ 3.42 ಲಕ್ಷ ಭೂತದ ಭಾಗವಹಿಸಲಿದ್ದಾರೆ. ಇವರ ಸಹಾಯದಿಂದ ದೇಶಾದ್ಯಂತ ಸುಮಾರು 36.73 14 ಮತದಾರರ ಮಾಹಿತಿಯನ್ನು ಮನೆ ಮನೆಗೆ ತೆರಳಿ ಪರಿಶೀಲಿಸಲಾಗುತ್ತಿದೆ.
ಚುನಾವಣಾ ಆಯೋಗದ ಮಾಹಿತಿಯಂತೆ, ಮೊದಲ ಎರಡು ಹಂತಗಳಲ್ಲಿ 13 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್ಐಆರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಪರಿಶೀಲನೆ ವೇಳೆ ಇದರಲ್ಲಿ ಸ್ಥಳಾಂತರ, ಮರಣ ಹಾಗೂ ನಕಲಿ ನೋಂದಣಿಗಳಂತಹ ಕಾರಣಗಳು ಪ್ರಮುಖವಾಗಿವೆ ಎಂದು ತಿಳಿದು ಬಂದಿದೆ.
ಕರ್ನಾಟಕದಲ್ಲಿಯೂ ಮತದಾರರ ಪಟ್ಟಿಯನ್ನು ಶುದ್ಧೀಕರಿಸುವ ಉದ್ದೇಶದಿಂದ ವಿಶೇಷ ತೀವ್ರ ಪರಿಷ್ಕರಣಿ ಕಾರ್ಯ ಕೈಗೊಳ್ಳಲಾಗುತ್ತಿದೆ. ಮತದಾರರು ತಮ್ಮ ಹೆಸರು, ವಿಳಾಸ ಮತ್ತು ಇತರ ವಿವರಗಳನ್ನು ಸರಿಯಾಗಿ ಪರಿಶೀಲಿಸಿಕೊಳ್ಳುವಂತೆ ಚುನಾವಣಾ ಆಯೋಗ ಮನವಿ ಮಾಡಿದೆ.
ದೇಶದಲ್ಲಿ ಮುಂದಿನ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ನೆನೆಯುತ್ತಿರುವ ಈ ಮಹತ್ವದ ಅಭಿಯಾನ ಮತದಾರರ ಪಟ್ಟಿಯ ಪಾರದರ್ಶಕತೆ ಮತ್ತು ನಿಖರತೆಯನ್ನು ಹೆಚ್ಚಿಸುವ ಪ್ರಮುಖ ಹೆಜ್ಜೆಯಾಗಿದೆ.
ದೇಶಾದ್ಯಂತ ಮತದಾರರ ಪಟ್ಟಿಯನ್ನು ನಿಖರ ಗೊಳಿಸುವ ಉದ್ದೇಶದಿಂದ ಚುನಾವಣಾ ಆಯೋಗವು ಮೂರನೇ ಹಂತದ ವಿಶೇಷ ತೀವ್ರ ಪರಿಷ್ಕರಣಿ ಪ್ರಕ್ರಿಯೆಯನ್ನು ಆರಂಭಿಸಲು ಮುಂದಾಗಿದೆ. ಮೇ 30 ರಿಂದ ಈ ಪ್ರಕ್ರಿಯೆ ಆರಂಭವಾಗಿದ್ದು, ಕರ್ನಾಟಕ ಸೇರಿದಂತೆ 16 ರಾಜ್ಯಗಳು ಹಾಗೂ 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಮನೆ ಮನೆಗೆ ತೆರಳಿ ಮತದಾರರ ಪರಿಶೀಲನೆ ನಡೆಸಲಾಗುತ್ತದೆ.
ಚುನಾವಣಾ ಆಯೋಗದ ಮಾಹಿತಿಯಂತೆ, ಓಡಿಶಾ, ಮಿಜೋರಾಮ್ , ಸಿಕ್ಕಿಂ, ಮಣಿಪುರ, ಉತ್ತರಾಖಂಡ, ಆಂಧ್ರ ಪ್ರದೇಶ್, ಅರುಣಾಚಲ ಪ್ರದೇಶ, ಹರಿಯಾಣ, ತೆಲಂಗಾಣ, ಪಂಜಾಬ್, ಕರ್ನಾಟಕ, ಮೇಘಾಲಯ, ಮಹಾರಾಷ್ಟ್ರ, ಜಾರ್ಖಂಡ್, ನಾಗಾಲ್ಯಾಂಡ್ ಮತ್ತು ತ್ರಿಪುರಾ ರಾಜ್ಯಗಳಲ್ಲಿ ಎಸ್ಐಆರ್ ನಡಿಯಲಿದೆ. ಜೊತೆಗೆ ದದ್ರಾ ನಗರ ಹವೇಲಿ ಮತ್ತು ದಮನ್ ದಿಯು, ಚಂಡಿಗಡ್ ಹಾಗೂ ದೆಹಲಿ ಕೇಂದ್ರ ಆಡಳಿತ ಪ್ರದೇಶಗಳಲ್ಲೂ ಮತದಾರರ ಪಟ್ಟಿ ಪರಿಷ್ಕರಣಿ ಕಾರ್ಯ ಕೈಗೊಳ್ಳಲಾಗುತ್ತದೆ.
ಈ ವಿಶೇಷ ಅಭಿಯಾನದ ಅಡಿಯಲ್ಲಿ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ಮತದಾರರ ವಿವರಗಳನ್ನು ಪರಿಶೀಲಿಸುತ್ತಿದ್ದಾರೆ. ಮತದಾರರ ಹೆಸರು ಸೇರ್ಪಡೆ, ತಿದ್ದುಪಡಿ, ಸ್ಥಳಾಂತರ ಹಾಗೂ ನಕಲಿ ನೊಂದಣಿಗಳನ್ನು ಗುರುತಿಸುವ ಕಾರ್ಯವು ನಡೆಯಲಿದೆ.
ಮೊದಲ ಎರಡು ಹಂತಗಳಲ್ಲಿ ಈಗಾಗಲೇ 13 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್ಐಆರ್ ಪೂರ್ಣಗೊಂಡಿತ್ತು, ಇದೀಗ ಲಕ್ಷಾಂತರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿದೆ. ಇದೀಗ ಮೂರನೇ ಹಂತದ ಅಭಿಯಾನಕ್ಕೂ ಚುನಾವಣೆ ಆಯೋಗ ಸಕಲ ಸಿದ್ಧತೆ ನಡೆಸಿದೆ.
ಮುಂದಿನ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ನಡೆಯುತ್ತಿರುವ ಈ ಮಹತ್ವದ ಪ್ರಕ್ರಿಯೆ ಮತದಾರರ ಪಟ್ಟಿಯ ಪಾರದರ್ಶಕತೆ ಮತ್ತು ನಿಖರತೆಯನ್ನು ಹೆಚ್ಚಿಸುವಂತಹ ಪ್ರಮುಖ ಹೆಜ್ಜೆಯಾಗಿದೆ.
ಚುನಾವಣಾ ಆಯೋಗದ ಮೂರನೇ ಹಂತದ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣಿ ಪ್ರಕ್ರಿಯೆಯಲ್ಲಿ ಕರ್ನಾಟಕದ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ರಾಜ್ಯಕ್ಕೆ ಅಕ್ಟೋಬರ್ 1 ಅನ್ನು ಅರ್ಹತಾ ದಿನಾಂಕ ನಿಗದಿಪಡಿಸಲಾಗಿದ್ದು, ಮತದಾರರ ಪರಿಶೀಲನೆ ಹಾಗೂ ಪರಿಷ್ಕರಣೆ ಪ್ರಕ್ರಿಯೆ ಹಂತ ಹಂತವಾಗಿ ನಡೆಯಲಿದೆ.
ಯೋಜನೆಯ ಪ್ರಕಾರ, ಜೂನ್ 20 ರಿಂದ 29 ರವರೆಗೆ ಅಗತ್ಯ ನಮೂನೆಗಳ ಸಿದ್ಧತೆ, ತರಬೇತಿ ಹಾಗೂ ಮುದ್ರಣ ಕಾರ್ಯ ನಡೆಯಲಿದೆ. ನಂತರ ಜೂನ್ 30 ರಿಂದ ಜುಲೈ 29ರ ವರೆಗೆ ಭೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ಮತದಾರರ ವಿವರಗಳನ್ನು ಪರಿಶೀಲಿಸುತ್ತಿದ್ದಾರೆ.
ಅಗಸ್ಟ್ 5ರಂದು ಕರುಡು ಮತದಾರರ ಪಟ್ಟಿ ಪ್ರಕಟವಾಗಲಿದ್ದು,ಆಗಸ್ಟ್ 5 ರಿಂದ ಸೆಪ್ಟೆಂಬರ್ 3ರವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿದೆ. ಈ ಆಕ್ಷೇಪಣೆ ವಿಲೇವಾರಿ ಪ್ರಕ್ರಿಯೆ ಅಕ್ಟೋಬರ್ ಮೂರರವರೆಗೆ ಮುಂದುವರೆಯಲಿದೆ. ಅಂತಿಮ ಮತದಾರರ ಪಟ್ಟಿ ಅಕ್ಟೋಬರ್ 7ರಂದು ಪ್ರಕಟವಾಗಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ಮೊದಲು ಎರಡು ಹಂತಗಳಲ್ಲಿ 13 ರಾಜ್ಯಗಳ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್ಐಆರ್ ಪೂರ್ಣಗೊಂಡಿದ್ದು, ಸುಮಾರು 5.18 ಕೋಟಿ ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದು ಹಾಕಲಾಗಿದೆ. ಈ ಕ್ರಮಕ್ಕೆ ವಿರೋಧ ಪಕ್ಷಗಳು ಹಾಗೂ ನಾಗರಿಕ ಸಮಾಜ ಸಂಘಟನೆಗಳು ತೀವ್ರ ಟೀಕೆ ವ್ಯಕ್ತಪಡಿಸಿದ್ದು, ಮತದಾರರನ್ನು ಪಟ್ಟಿಯಿಂದ ಹೊರಗಿಡುವ ಸಾಧ್ಯತೆ ಕುರಿತು ಆತಂಕ ವ್ಯಕ್ತಪಡಿಸಿವೆ.
ಕಾನೂನು ಸಂಬಂಧಿತ ಕಾರಣಗಳಿಂದ ಅಸ್ಸಾಂನಲ್ಲಿ ಈ ಬಾರಿ ಎಸ್ಐಆರ್ ಪ್ರಕ್ರಿಯೆ ನಡೆಸಲಾಗಿಲ್ಲ ಎಂದು ಆಯೋಗ ಸ್ಪಷ್ಟಪಡಿಸಿದೆ. ವಟ್ಟಿನಲ್ಲಿ ದೇಶಾದ್ಯಂತ ನಡೆಯುತ್ತಿರುವ ಈ ಮಹತ್ವದ ಅಭಿಯಾನ ಮತದಾರರ ಪಟ್ಟಿಯ ನಿಖರತೆ ಮತ್ತು ಪಾರದರ್ಶಕತೆಯನ್ನು ಹೆಚ್ಚಿಸುವ ಮಹತ್ವದ ಹೆಜ್ಜೆಯಾಗಿದೆ.
Also Read: