belagavi news :
ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರವನ್ನು ಮುಂದಿಟ್ಟು ಕಾಂಗ್ರೆಸ್ ವಿರುದ್ಧ ಪ್ರಧಾನಿ ಮೋದಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಅಗಾಧ ಜನಾಕ್ರೋಶದ ಪರಿಣಾಮವೇ ಕಾಂಗ್ರೆಸ್ ತನ್ನ ಮುಖ್ಯಮಂತ್ರಿಯನ್ನು ಬದಲಾಯಿಸಬಹುದಾದ ಪರಿಸ್ಥಿತಿ ಎದುರಿಸಿದೆ ಎಂದು ಅವರು ಕುಟುಕಿದ್ದಾರೆ.
ಗುಜರಾತ್ ನ ಸುರತ್ ಹಾಗೂ ದಾಮನ್ ನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ಕಾರ್ಯಕ್ರಮಗಳಲ್ಲಿ ಮಾತನಾಡಿದ ಮೋದಿ, ಕಳೆದ 12 ವರ್ಷಗಳಿಂದ ಕಾಂಗ್ರೆಸ್ ದೇಶದಲ್ಲಿ ಅವ್ಯವಸ್ಥೆ ಮತ್ತು ಅನಿಷ್ಟತೆಯ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದರು. ದೇಶದ ಜನರು ಅರಾಜಕತೆ ಮತ್ತು ಹತಾಶೆಯನ್ನು ಒಪ್ಪುವುದಿಲ್ಲ; ಕಾಂಗ್ರೆಸ್ ನ ಈ ರಾಜಕೀಯಕ್ಕೆ ಪದೇ ಪದೇ ತಕ್ಕ ಉತ್ತರ ನೀಡಿದ್ದಾರೆ ಎಂದು ಹೇಳಿದರು.
ಗುಜರಾತ್ ನಲ್ಲಿ ಕಾಂಗ್ರೆಸ್ ಅನ್ನು ಜನರು ದೂರವಿಟ್ಟಿರುವುದಷ್ಟೇ ಅಲ್ಲ, ಅದು ಅಧಿಕಾರದಲ್ಲಿರುವ ರಾಜ್ಯಗಳಲ್ಲಿಯೂ ಆಡಳಿತದ ವಿರುದ್ಧ ಅಸಮಾಧಾನ ಹೆಚ್ಚುತ್ತಿದೆ ಎಂದು ಮೋದಿ ಹೇಳಿದರು. ಹಿಮಾಚಲ ಪ್ರದೇಶ, ಹರಿಯಾಣ ಮತ್ತು ಪಂಜಾಬ್ ನ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶಗಳನ್ನು ಉಲ್ಲೇಖಿಸಿದವರು, ಕಾಂಗ್ರೆಸ್ನ ದುರಾಡಳಿತದಿಂದ ಜನರು ಬೇಸತ್ತಿದ್ದಾರೆ ಎಂಬ ಸ್ಪಷ್ಟ ಸಂದೇಶ ದೊರೆತಿದೆ ಎಂದರು.
ಅವ್ಯವಸ್ಥೆಯ ನಡುವೆ ರಾಜಕೀಯ ಅವಕಾಶಗಳನ್ನು ಹುಡುಕುವ ಕಾಂಗ್ರೆಸ್ನ ತಂತ್ರಗಳು ಇನ್ನು ಮುಂದೆ ಯಶಸ್ವಿಯಾಗುವುದಿಲ್ಲ ಎಂದು ಪ್ರಧಾನಿ ಮೋದಿ ಗುಡುಗಿದ್ದು, ಅವರ ಹೇಳಿಕೆಗಳು ರಾಜಕೀಯ ವಲಯದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ.
ಕಾಂಗ್ರೆಸ್ ಪಕ್ಷದ ಅಧಿಕಾರದಲ್ಲಿರುವಲ್ಲೆಲ್ಲ ಜನರು ಅತ್ರುಪ್ತರಾಗಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ಬಗ್ಗೆಯೂ ಅಪಾರ ಸಾರ್ವಜನಿಕ ಆಕ್ರೋಶವಿದೆ. ಅದಕ್ಕಾಗಿಯೇ ಪಕ್ಷವು ಇಲ್ಲಿ ಮುಖ್ಯಮಂತ್ರಿಯನ್ನು ಬದಲಾಯಿಸಬೇಕಾಯಿತು ಎಂದು ಮೋದಿ ತಮ್ಮ ಭಾಷಣದಲ್ಲಿ ಉಲ್ಲೇಖಿಸಿದ್ದಾರೆ.
ಭಾರತದ ಆರ್ಥಿಕತೆ ಬಲಿಷ್ಠ ನೆಲೆಯ ಮೇಲೆ ಸಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 2025 26 ನೇ ಆರ್ಥಿಕ ವರ್ಷದಲ್ಲಿ ಶೇ. 7.7 ರಷ್ಟು ಜಿಡಿಪಿ ಬೆಳವಣಿಗೆ ದಾಖಲಾಗಿರುವುದು ದೇಶದ ಆರ್ಥಿಕ ಅಡಿಪಾಯದ ಶಕ್ತಿಯನ್ನು ಸಾಬೀತುಪಡಿಸುತ್ತದೆ ಎಂದು ಅವರು ಹೇಳಿದ್ದಾರೆ.
ಜಾಗತಿಕ ಮಟ್ಟದಲ್ಲಿ ಅನಿಶ್ಚಿತತೆ ಮತ್ತು ಪ್ರಕ್ಷುಬ್ದತೆ ಎದುರಾಗಿದ್ದರು,140 ಕೋಟಿ ಭಾರತೀಯರ ಸಾಮೂಹಿಕ ಪ್ರಯತ್ನದಿಂದ ದೇಶವು ಸವಾಲುಗಳನ್ನು ಯಶಸ್ವಿಯಾಗಿ ಎದುರಿಸುವ ಸಾಮರ್ಥ್ಯ ಹೊಂದಿದೆ ಎಂದು ಮೋದಿ ಹೇಳಿದರು.ಇಂಧನ ಸ್ವಾವಲಂಬನೆಯ ಮಹತ್ವವನ್ನು ಜಾಗತಿಕ ಬಿಕ್ಕಟ್ಟು ಮತ್ತೊಮ್ಮೆ ನೆನಪಿಸಿದ್ದು, ಕಳೆದ 12 ವರ್ಷಗಳಲ್ಲಿ ಭಾರತ ನಿರ್ಮಿಸಿಕೊಂಡಿರುವ ಸಾಮರ್ಥ್ಯವೇ ಇಂದು ದೇಶದ ಬಲವಾಗಿದೆ ಎಂದು ಅವರು ಉಲ್ಲೇಖಿಸಿದರು.
ಬಿಜೆಪಿ ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳು ಮತ್ತು ಬೆಳವಣಿಗೆಗೆ ಆಧರಿತ ಆಡಳಿತದ ಮೇಲೆ ಜನರು ನಿರಂತರವಾಗಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಂದು ಪ್ರಧಾನಿ ಹೇಳಿದರು.ಪಶ್ಚಿಮ ಬಂಗಾಳ,ಅಸ್ಸಾಂ ಮತ್ತು ಪುದುಚರಿಯ ಇತ್ತೀಚಿನ ಚುನಾವಣೆಗಳ ಜೊತೆಗೆ ದೇಶಾದ್ಯಂತ ನಡೆದ ಪಂಚಾಯತ್ ಹಾಗು ಪುರಸಭೆ ಚುನಾವಣೆಗಳಲ್ಲಿ ಎನ್ಡಿಎಗೆ ದೊರೆತ ಬೆಂಬಲವೇ ಜನರ ವಿಶ್ವಾಸದ ಪ್ರತಿಕ ಎಂದು ಹೇಳಿದರು.
ದೇಶದ ಅಭಿವೃದ್ಧಿಯ ಪದವನ್ನು ಜನರು ಬೆಂಬಲಿಸುತ್ತಿದ್ದು,ಇದೇ ವಿಶ್ವಾಸ ಭಾರತವನ್ನು ಇನ್ನಷ್ಟು ವೇಗವಾಗಿ ಮುನ್ನಡೆಸಲಿದೆ ಎಂದು ಮೋದಿ ಅಭಿಪ್ರಾಯಪಟ್ಟಿದ್ದಾರೆ.
ಭಾರತ ಇಂದು ನಕಾರಾತ್ಮಕತೆಯನ್ನು ಮೀರಿ ಆಶಾವಾದ ಮತ್ತು ಆಕಾಂಕ್ಷೆಗಳ ರಾಷ್ಟ್ರವಾಗಿ ಹೊರಹೊಮ್ಮಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.ಕಳೆದ 12 ವರ್ಷಗಳಲ್ಲಿ ದೇಶವನ್ನು ಇಂಧನ ಕ್ಷೇತ್ರದಲ್ಲಿ ಸ್ವಾವಲಂಬಿಯನ್ನಾಗಿಸಲು ಕೇಂದ್ರ ಸರ್ಕಾರ ನಿರಂತರವಾಗಿ ಕಾರ್ಯನಿರ್ವಹಿಸಿದೆ ಎಂದು ಅವರು ತಿಳಿಸಿದ್ದಾರೆ.
ಭಾರತದ ಇಂಧನ ಭದ್ರತೆಯನ್ನು ಬಲಪಡಿಸಲು ಸರ್ಕಾರ ಬಹುಮುಖ ತಂತ್ರವನ್ನು ಅನುಸರಿಸಿದೆ ಎಂದು ಮೋದಿ ಹೇಳಿದರು.ಜಾಗತಿಕ ಮಟ್ಟದಲ್ಲಿ ವಿವಿಧ ದೇಶಗಳಿಂದ ತೈಲ ಮತ್ತು ಅನಿಲ ಸರಬರಾಜು ಖಚಿತಪಡಿಸಿಕೊಳ್ಳುವ ಜೊತೆಗೆ, ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಹೂಡಿಕೆಗಳನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ ಎಂದು ಅವರು ವಿವರಿಸಿದರು.
ಸೌರ, ಗಾಳಿ ಹಾಗೂ ಇತರೆ ಹಸಿರು ಇಂಧನ ಮೂಲಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದ್ದು,ಇದರಿಂದ ಭಾರತ ಇಂಧನ ಸ್ವಾವಲಂಬನೆ ಯತ್ತ ವೇಗವಾಗಿ ಸಾಗುತ್ತಿದೆ ಎಂದು ಪ್ರಧಾನಿ ಹೇಳಿದರು.
ದೇಶದ ಭವಿಷ್ಯದ ಅಗತ್ಯವುಗಳನ್ನು ಮನದಲ್ಲಿಟ್ಟುಕೊಂಡು ಕೈಗೊಂಡಿರುವ ಈ ಕ್ರಮಗಳು ಭಾರತವನ್ನು ಶಕ್ತಿಶಾಲಿ ಮತ್ತು ಆತ್ಮ ನಿರ್ಬರ ರಾಷ್ಟ್ರವನ್ನಾಗಿ ರೂಪಿಸುತ್ತಿವೆ ಎಂದು ಅವರು ಅಭಿಪ್ರಾಯಪಟ್ಟರು.
Also Read:
Karnataka Police Requirement 2026: 3991 Constable ಹುದ್ದೆಗಳ ನೇಮಕಾತಿ, ಅರ್ಜಿ ಪ್ರಕ್ರಿಯೆ ಶೀಘ್ರದಲ್ಲೇ