<?= $pageTitle ?>
Logo
ಮುಖಪುಟ ಓದುವುದು ಕೇಳು
Breaking News

ಕೆಲಸದ ಒತ್ತಡವೇ ಮಹಿಳಾ ಅಧಿಕಾರಿಯ ಸಾವಿಗೆ ಕಾರಣ ? ಕಂದಾಯ ಸಿಬ್ಬಂದಿ ರಾಜ್ಯ ವ್ಯಾಪ್ತಿ ಪ್ರತಿಭಟನೆ

ಕೆಲಸದ ಒತ್ತಡವೇ ಮಹಿಳಾ ಅಧಿಕಾರಿಯ ಸಾವಿಗೆ ಕಾರಣ ? ಕಂದಾಯ ಸಿಬ್ಬಂದಿ ರಾಜ್ಯ ವ್ಯಾಪ್ತಿ ಪ್ರತಿಭಟನೆ
Summary: According to allegations of harassment by superiors and work pressure behind the death of a female officer, the District President Revenue Department staff have staged a dharna for justice. There has been a demand for a comprehensive investigation into the case.

Belagavi News:

ಮಹಿಳಾ ಕಂದಾಯ ಅಧಿಕಾರಿಯ ಸಾವಿನ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಕಿರುಕುಳ ಮತ್ತು ಅತಿಯಾದ ಕೆಲಸದ ಒತ್ತಡದ ಆರೋಪ ಕೇಳಿ ಬಂದಿದ್ದು, ಪ್ರಕರಣದ ಸಮಗ್ರ ತಣಿಕೆಗೆ ಆಗ್ರಹಿಸಿ ಜಿಲ್ಲಾಧ್ಯಕ್ಷ ಕಂದಾಯ ಇಲಾಖೆ ಸಿಬ್ಬಂದಿ ಧರಣಿ ನಡೆಸಿದರು.

ಮಹಿಳಾ ಅಧಿಕಾರಿಯ ಸಾವಿನ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಬೇಕು, ಸಾವಿಗೆ ಕಾರಣವಾದ ಅಂಶಗಳನ್ನು ಬಹಿರಂಗಪಡಿಸಬೇಕು ಹಾಗೂ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಅಧಿಕಾರಿಗಳ ಮೇಲಿನ ಕೆಲಸದ ಒತ್ತಡ ಮತ್ತು ಕಚೇರಿ ವಾತಾವರಣದ ಕುರಿತು ಸೂಕ್ತ ಪರಿಶೀಲನೆ ನಡೆಸುವ ಅಗತ್ಯವಿದೆ ಎಂದು ಸಿಬ್ಬಂದಿ ಅಭಿಪ್ರಾಯಪಟ್ಟರು.

ಜಿಲ್ಲೆಯ ವಿವಿಧ ತಾಲೂಕು ಕೇಂದ್ರಗಳಲ್ಲಿ ಕಂದಾಯ ಇಲಾಖೆ ಸಿಬ್ಬಂದಿ ಪ್ರತಿಭಟನೆ ನಡೆಸಿ ಸರ್ಕಾರ ಮತ್ತು ಸಂಬಂಧ ಪಟ್ಟ ಅಧಿಕಾರಿಗಳ ಗಮನ ಸೆಳೆದರು. ಮೃತ ಅಧಿಕಾರಿಯ ಕುಟುಂಬಕ್ಕೆ ನ್ಯಾಯ ಒದಗಿಸುವ ಜೊತೆಗೆ, ಇಂತಹ ಘಟನೆಗಳು ಮರುಕಳಿಸದಂತೆ ಇಲಾಖೆಯಲ್ಲಿ ಅಗತ್ಯ ಸುಧಾರಣಾ ಕ್ರಮಗಳನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.

ಪ್ರಕರಣದ ಕುರಿತು, ತನಿಖೆಯ ಮುಂದುವರೆದಿದ್ದು ಅಧಿಕೃತ ವರದಿ ಬಂದ ಬಳಿಕ ಸಾವಿನ ನಿಖರ ಕಾರಣ ಸ್ಪಷ್ಟವಾಗುವ ನಿರೀಕ್ಷೆ ಇದೆ.

ಎಸ್ ಐಆರ್ ಕರ್ತವ್ಯಕ್ಕೆ ತೆರಳುವ ವೇಳೆ ಗ್ರಾಮ ಆಡಳಿತ ಅಧಿಕಾರಿ ಭುವನ ಅಪಘಾತದಲ್ಲಿ ಸಾವು - ಕೆಲಸದ ಒತ್ತಡ, ಕಿರುಕುಳ ಆರೋಪಿಸಿ ಪ್ರತಿಭಟನೆ :

ತುಮಕೂರು ಜಿಲ್ಲೆಯ ಗ್ರಾಮ ಆಡಳಿತ ಅಧಿಕಾರಿ ಕುಮಾರಿ ಭುವನಾ ಅವರು ಎಸ್ಐಆರ್ (special intensive revision) ಕರ್ತವ್ಯಕ್ಕೆ ತೆರಳುತ್ತಿದ್ದ ವೇಳೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಈ ಘಟನೆ ಕಂದಾಯ ಇಲಾಖೆಯಲ್ಲಿ ತೀವ್ರಘಾತ ಮೂಡಿಸಿದೆ.

ಭುವನ ಅವರ ಸಾವಿನ ಬಳಿಕ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಂಘ ಗಂಭೀರ ಆರೋಪ ಮಾಡಿದ್ದು, ಅಧಿಕಾರಿಗಳ ಮೇಲಿನ ವಿಪರೀತ ಕೆಲಸದ ಒತ್ತಡ ಹಾಗೂ ಮೇಲಾಧಿಕಾರಿಗಳ ಕಿರುಕುಳವೇ ಈ ದುರಂತಕ್ಕೆ ಕಾರಣ ಎಂದು ಹೇಳಿದೆ. ಈ ಸಂಬಂಧ ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಿ, ಪ್ರಕರಣಕ್ಕೆ ಕಾರಣವಾದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಂಘ ಒತ್ತಾಯಿಸಿದೆ.

ಈ ಘಟನೆಗೆ ಸಂಬಂಧಿಸಿದಂತೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ಗ್ರಾಮ ಆಡಳಿತ ಅಧಿಕಾರಿಗಳು ಮತ್ತು ಕಂದಾಯ ಸಿಬ್ಬಂದಿ ಪ್ರತಿಭಟನೆ ನಡೆಸಿ, ಮೃತ ಅಧಿಕಾರಿಯ ಕುಟುಂಬಕ್ಕೆ ನ್ಯಾಯ ಒದಗಿಸುವಂತೆ ಆಗ್ರಹಿಸಿದರು. ಜೊತೆಗೆ, ಕಂದಾಯ ಇಲಾಖೆಯಲ್ಲಿ ಸಿಬ್ಬಂದಿಯ ಮೇಲೆ ಹೆಚ್ಚುತ್ತಿರುವ ಕೆಲಸದ ಒತ್ತಡವನ್ನು ಕಡಿಮೆ ಮಾಡಲು ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದೆ.

ಪ್ರಕರಣದ ಕುರಿತು ಸಂಬಂಧಪಟ್ಟ ಇಲಾಖೆಗಳು ತನಿಖೆ ನಡೆಸುತ್ತಿದ್ದು, ಅಪಘಾತದ ನಿಖರ ಕಾರಣ ಹಾಗೂ ಸಂಘ ಮಾಡಿರುವ ಆರೋಪಗಳ ಬಗ್ಗೆ ಅಧಿಕೃತ ಮಾಹಿತಿ ಇನ್ನಷ್ಟೇ ಹೊರಬರಬೇಕಿದೆ.

ಮೇಲಾಧಿಕಾರಿಗಳ ಒತ್ತಡವೇ ಕಾರಣ ?- ಕೆಲಸಕ್ಕೆ ತೆರಳುತ್ತಿದ್ದ ವೇಳೆ ಅಪಘಾತಕ್ಕೀಡಾಗಿ ಗ್ರಾಮ ಆಡಳಿತ ಅಧಿಕಾರಿ ಭುವನಾ ಸಾವು - ಸಂಘದಿಂದ ಗಂಭೀರ ಆರೋಪ :

ಜಿಲ್ಲೆಯ ಗ್ರಾಮ ಅಧಿಕಾರಿ ಕುಮಾರಿ ಭುವನಾ ಅವರು ಬೆಳಗಿನ ಜಾವ ಕರ್ತವ್ಯಕ್ಕೆ ತೆರಳುತ್ತಿದ್ದ ವೇಳೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಬಳಿಕ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ವೈದ್ಯರು ಧೃಢಪಡಿಸಿದ್ದಾರೆ. ಈ ಘಟನೆ ಕಂದಾಯ ಇಲಾಖೆಯಲ್ಲಿ ತೀವ್ರ ಶೋಕ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ.

ಈ ಕುರಿತು ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿ ಸಂಘದ ರಾಜ್ಯಾಧ್ಯಕ್ಷ ಯೋಗೇಶ್ ನಾಯಕ್ ಪ್ರತಿಕ್ರಿಯಿಸಿ, ಬೆಳಗಿನ ಜಾವ ಸುಮಾರು 6:30 ಸುಮಾರಿಗೆ ಮೇಲಾಧಿಕಾರಿಗಳ ಒತ್ತಡದಿಂದ ಕರ್ತವ್ಯಕ್ಕೆ ತೆರಳುತ್ತಿದ್ದ ವೇಳೆ ಭುವನಾ ಅವರು ಅಪಘಾತಕ್ಕೀಡಾಗಿದ್ದಾರೆ ಎಂದು ಆರೋಪಿಸಿದ್ದಾರೆ.

ತಹಶೀಲ್ದಾರ್, ಉಪ ವಿಭಾಗಾಧಿಕಾರಿ, ಅಪರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳ ಮಟ್ಟದಲ್ಲಿ ನಿರಂತರವಾಗಿ ನೀಡಲಾಗುವ ಕೆಲಸದ ಒತ್ತಡ, ಹಗಲು ರಾತ್ರಿ ಕೆಲಸಕ್ಕೆ ಒತ್ತಾಯಿಸುವ ಪದ್ಧತಿ, ಈ ದುರಂತಕ್ಕೆ ಕಾರಣವಾಗಿರಬಹುದು ಎಂದು ಅವರು ಗಂಭೀರವಾಗಿ ಖಂಡಿಸಿದ್ದಾರೆ.

ಮೃತ ಅಧಿಕಾರಿಯ ಸಾವಿಗೆ ಕಾರಣವಾದ ಅಂಶಗಳ ಕುರಿತು ಸಮಗ್ರತನಿಗೆ ನಡೆಸಬೇಕು ಹಾಗೂ ಇಲಾಖೆಯಲ್ಲಿ ಸಿಬ್ಬಂದಿಯ ಮೇಲೆ ಇರುವ ಅತಿಯಾದ ಕೆಲಸದ ಭಾರವನ್ನು ಕಡಿಮೆ ಮಾಡಬೇಕು ಎಂದು ಸಂಘ ಆಗ್ರಹಿಸಿದೆ. ಜೊತೆಗೆ ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ಮತ್ತು ನ್ಯಾಯ ಒದಗಿಸಬೇಕೆಂದು ಒತ್ತಾಯಿಸಲಾಗಿದೆ.

ಈ ಘಟನೆ ಸಂಬಂಧ ಇಲಾಖೆ ಮಟ್ಟದಲ್ಲಿ ತನಿಖೆ ನಡೆಯುವ ಸಾಧ್ಯತೆಯಿದ್ದು, ಅಪಘಾತದ ನಿಖರ ಕಾರಣ ಹಾಗೂ ಆರೋಪಗಳ ಬಗ್ಗೆ ಅಧಿಕೃತ ವರದಿ ಇನ್ನಷ್ಟೇ ಹೊರ ಬರಬೇಕಿದೆ.

ಅತಿಯಾದ ಕೆಲಸದ ಒತ್ತಡವೇ ಕಾರಣ? - ಭುವನಾ ಸಾವಿಗೆ ನ್ಯಾಯಕ್ಕಾಗಿ ರಾಜ್ಯಾದ್ಯಂತ ಪ್ರತಿಭಟನೆ ಎಚ್ಚರಿಕೆ - ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ :

ಗ್ರಾಮ ಆಡಳಿತ ಅಧಿಕಾರಿ ಕುಮಾರಿ ಭುವನಾ ಅವರ ಅಪಘಾತ ಸಾವು ಪ್ರಕರಣ ಇದೀಗ ರಾಜ್ಯಾದ್ಯಂತ ಕಂದಾಯ ಇಲಾಖೆಯಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಸರ್ಕಾರಿ ನೌಕರರ ಕಾರ್ಯಾವಧಿ ಬೆಳಗ್ಗೆ 10 ರಿಂದ ಸಂಜೆ 5:30ರ ವರೆಗೆ ಇರಬೇಕು ಎಂಬ ಸುತ್ತೋಲೆ ಇದ್ದರೂ, ಅದರ ವಿರುದ್ಧವಾಗಿ ರಾತ್ರಿ ಹತ್ತವರಿಂದ 11 ಗಂಟೆಯವರೆಗೆ ಸಭೆಗಳನ್ನು ನಡೆಸುವುದು ಹಾಗೂ ಬೆಳಗ್ಗೆ 6 ಗಂಟೆಗೆ ಕೆಲಸಕ್ಕೆ ಹಾಜರಾಗುವಂತೆ ಸೂಚನೆ ನೀಡುವುದು ವೈಜ್ಞಾನಿಕ ಎಂದು ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ರಾಜ್ಯಾಧ್ಯಕ್ಷ ಯೋಗೇಶ್ ನಾಯಕ್ ಹೇಳಿದ್ದಾರೆ.

ಅವರು ಈ ಕ್ರಮಗಳು ನೌಕರರ ಮೇಲೆ ಅತಿಯಾದ ಒತ್ತಡ ಉಂಟು ಮಾಡುತ್ತಿದ್ದು, ಇದು ಭುವನಾ ಅವರ ಕುಟುಂಬಕ್ಕೆ ಒಂದು ಕೋಟಿ ರೂಪಾಯಿ ಪರಿಹಾರ ನೀಡಬೇಕೆಂದು ಆಗ್ರಹಿಸಿದೆ. ಜೊತೆಗೆ, ಇಲಾಖೆಯಲ್ಲಿ ನೌಕರರ ಮೇಲಿನ ಅನಗತ್ಯ ಕೆಲಸದ ಭಾರವನ್ನು ಕಡಿಮೆ ಮಾಡಲು ಸ್ಪಷ್ಟ ಮಾರ್ಗಸೂಚಿ ಜಾರಿಗೆ ತರಬೇಕೆಂದು ಮನವಿ ಮಾಡಲಾಗಿದೆ.

ಈ ನಡುವೆ, ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವವರೆಗೂ ಪ್ರತಿಭಟನೆ ಮುಂದುವರೆಸುವುದಾಗಿ ತುಮಕೂರು ಜಿಲ್ಲೆಯ 500ಕ್ಕೂ ಹೆಚ್ಚು ಗ್ರಾಮ ಆಡಳಿತ ಅಧಿಕಾರಿಗಳು ಮತ್ತು ಕಂದಾಯ ಇಲಾಖೆ ಸಿಬ್ಬಂದಿ ಘೋಷಿಸಿದ್ದಾರೆ. ಇದರಿಂದ ರಾಜ್ಯದ ಕಂದಾಯ ಇಲಾಖೆಯಲ್ಲಿ ಆಂದೋಲನದ ವಾತಾವರಣ ನಿರ್ಮಾಣವಾಗಿದೆ.

ಸರ್ಕಾರ ಈ ಆರೋಪಗಳ ಕುರಿತು ಪರಿಶೀಲನೆ ನಡೆಸುವ ನಿರೀಕ್ಷೆಯಿದ್ದು, ಅಧಿಕೃತ ಪ್ರತಿಕ್ರಿಯೆ ಇನ್ನಷ್ಟೇ ಹೊರಬರಬೇಕಿದೆ.

Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online