Belagavi news:
ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ನೂತನ ಮುಖ್ಯಮಂತ್ರಿಯಾಗಿರುವ ಸುವೇಂದ್ರ ಅಧಿಕಾರಿ ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಎರಡು ಕಡೆ ಭರ್ಜರಿ ಗೆಲುವು ಸಾಧಿಸಿದ್ದರು. ಇದೀಗ ನಿಯಮಾನುಸಾರ ಒಂದು ಕ್ಷೇತ್ರವನ್ನು ತ್ಯಜಿಸಬೇಕಿರುವ ಹಿನ್ನೆಲೆ, ಭವಾನಿಪುರ ಕ್ಷೇತ್ರವನ್ನು ಉಳಿಸಿಕೊಳ್ಳಲು ನಿರ್ಧರಿಸುವ ಸುವೇಂದ್ರ ಅಧಿಕಾರಿ ನಂದಿ ಗ್ರಾಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ.
ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಭವಾನಿಪುರ ಕ್ಷೇತ್ರದಲ್ಲಿ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ವಿರುದ್ಧ ಸುವೇಂದ್ರ ಅಧಿಕಾರಿ ಭಾರಿ ಗೆಳವು ದಾಖಲಿಸಿದ್ದರು. ಸುಮಾರು 15,105 ಮತಗಳ ಅಂತರದಿಂದ ಮಮತ ಬ್ಯಾನರ್ಜಿ ಅವರನ್ನು ಸೋಲಿಸಿದ್ದ ಈ ಫಲಿತಾಂಶ ಪಶ್ಚಿಮ ಬಂಗಾಳ ರಾಜಕೀಯದಲ್ಲಿ ದೊಡ್ಡ ಸಂಚಲನ ಮೂಡಿಸಿತ್ತು. ಇದೀಗ ಅವರ ರಾಜೀನಾಮೆ ನಿರ್ಧಾರ ಮತ್ತೊಮ್ಮೆ ರಾಜ್ಯ ರಾಜಕೀಯದ ಗಮನಸೆಳೆಯುತ್ತಿದೆ.
ಕೊಲ್ಕತ್ತಾ, ಮೇ 13: ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಮತ್ತೊಮ್ಮೆ ಬೆಳವಣಿಗೆ ನಡೆದಿದೆ. ರಾಜ್ಯದ ನೂತನ ಮುಖ್ಯಮಂತ್ರಿ ಸುವೇಂದ್ರ ಅಧಿಕಾರಿ ಭವಾನಿಪುರ ವಿಧಾನಸಭಾ ಕ್ಷೇತ್ರದ ಶಾಸಕನಾಗಿ ಮುಂದುವರಿಯುವುದ್ದಾಗಿ ಘೋಷಿಸಿದ್ದು, ನಂದಿ ಗ್ರಾಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ.
ಬಂಗಾಳದ 9ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಕೆಲವೇ ದಿನಗಳಲ್ಲಿ ಈ ಮಹತ್ವದ ನಿರ್ಧಾರ ಹೊರ ಬಿದ್ದಿದೆ. ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸುವೇಂದ್ರ ಅಧಿಕಾರಿ ಭವಾನಿಪುರ ಮತ್ತು ನಂದಿ ಗ್ರಾಮ ಎರಡು ಕ್ಷೇತ್ರಗಳಲ್ಲಿ ಗೆಲವು ಸಾಧಿಸಿದ್ದರು.
ಇಂದು ಭವಾನಿಪುರ ಕ್ಷೇತ್ರದ ಶಾಸಕನಾಗಿ ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ಪ್ರಮಾಣವಚನ ಸ್ವೀಕರಿಸಿದವರು ಒಂದು ಕ್ಷೇತ್ರವನ್ನು ತ್ಯಜಿಸುವ ಸಂವಿಧಾನಾತ್ಮಕ ನಿಯಮದ ಹಿನ್ನೆಲೆ ನಂದಿಗ್ರಾಮ ಸ್ಥಾನಕ್ಕೆ ರಾಜೀನಾಮೆ ನೀಡಲು ತೀರ್ಮಾನಿಸಿದ್ದಾರೆ. ಈ ಬೆಳವಣಿಗೆ ಬಂಗಾಳ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದು ಮುಂದಿನ ರಾಜಕೀಯ ಲೆಕ್ಕಾಚಾರಗಳತ್ತ ಎಲ್ಲರ ಗಮನ ಸೆಳೆದಿದೆ.
"ನಂದಿಗ್ರಾಮ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯಲ್ಲಿ ಮತ್ತೊಬ್ಬರು ಶಾಸಕರಾಗಿ ಆಯ್ಕೆಯಾಗಲಿದ್ದಾರೆ. ಆದರೆ ನನ್ನ ಅನುಪಸ್ಥಿತಿಯನ್ನು ಅಲ್ಲಿನ ಜನರು ಅನುಭವಿಸುವಂತಾಗುವುದಿಲ್ಲ," ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಹೇಳಿದ್ದಾರೆ.
ನಂದಿಗ್ರಾಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಬಳಿಕ ಮಾತನಾಡಿದವರು "ರಾಜ್ಯದ ಉಳಿದ ಭಾಗಗಳಂತೆ ನಂದಿಗ್ರಾಮದ ಜನರಿಗೂ ನಾನು ನೀಡಿರುವ ಎಲ್ಲಾ ಅಭಿವೃದ್ಧಿ ಭರವಸೆಗಳನ್ನು ಈಡೇರಿಸುತ್ತೇನೆ " ಎಂದು ಭರವಸೆ ನೀಡಿದ್ದಾರೆ.
ಮುಖ್ಯಮಂತ್ರಿಯಾಗಿ ವಿಧಾನಸಭೆಗೆ ಬಂದ ಮೊದಲ ದಿನದಂದು ಸುವೇಂದು ಅಧಿಕಾರಿ ಬಿ. ಆರ್. ಅಂಬೇಡ್ಕರ್ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು. ಅವರು ಸದನದ ಪ್ರವೇಶದ್ವಾರದಲ್ಲಿ ಮಂಡಿಯೂರಿ ವಿಧಾನಸಭೆ ಪ್ರವೇಶಿಸುವ ಮೊದಲು ನಮ್ಮ ಹಣೆಯನ್ನು ನೆಲಕ್ಕೆ ಮುಟ್ಟಿಸಿ ನಮಸ್ಕರಿಸಿದರು.
Also Read: