Belagavi news:
ಬೆಂಗಳೂರು, ಮೇ 31: ಯಾವುದೇ ಅಡೆತಡೆಗಳಿಲ್ಲದೆ ಸಿದ್ದರಾಮಯ್ಯ ಅವರಿಂದ ಡಿ.ಕೆ. ಶಿವಕುಮಾರ್ ಅವರಿಗೆ ಅಧಿಕಾರ ಹಸ್ತಾಂತರವಾಗಿದ್ದು, ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ನೂತನ ನಾಯಕರಾಗಿ ಆಯ್ಕೆಯಾದ ಡಿಕೆಶಿ ಜೂನ್ 3 ರಂದು ಮುಖ್ಯಮಂತ್ರಿ ಹುದ್ದೆಯ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಆರಂಭದಲ್ಲಿ ವಿಧಾನಸೌಧದಲ್ಲಿ ಪ್ರಮಾಣವಚನ ಸಮಾರಂಭ ಆಯೋಜಿಸುವ ಕುರಿತು ಚರ್ಚೆಯಾಗಿದ್ದರು, ಇದೀಗ ಕಾರ್ಯಕ್ರಮವನ್ನು ಲೋಕಭವನಕ್ಕೆ ಸ್ಥಳಾಂತರಿಸಲಾಗಿದೆ. ವಿಶೇಷವೆಂದರೆ, ಈ ಸಮಾರಂಭವನ್ನು ಅತ್ಯಂತ ಸರಳವಾಗಿ ನಡೆಸಲು ಡಿ.ಕೆ. ಶಿವಕುಮಾರ್ ನಿರ್ಧರಿಸಿದ್ದಾರೆ.
ಈ ನಿರ್ಧಾರದ ಹಿಂದೆ ಕಾಂಗ್ರೆಸ್ ಹೈಕಮಾಂಡ್ ನ ಸ್ಪಷ್ಟ ಸೂಚನೆ ಇದೆ ಎಂಬ ಮಾಹಿತಿ ಇದೀಗ ಹೊರ ಬಿದ್ದಿದೆ. ಅನಗತ್ಯ ವೈಭವ, ದೊಡ್ಡ ಮಟ್ಟದ ಜನ ಸಮೂಹ ಹಾಗೂ ರಾಜಕೀಯ ಪ್ರದರ್ಶನಗಳನ್ನು ತಪ್ಪಿಸಿ ಆಡಳಿತಕ್ಕೆ ಆದತ್ಯೆ ನೀಡುವ ಸಂದೇಶ ರವಾನಿಸಲು ಪಕ್ಷದ ವರಿಷ್ಠರು ಸಲಹೆ ನೀಡುವುದಾಗಿ ಮೂಲಗಳು ತಿಳಿಸಿವೆ.
ಹೀಗಾಗಿ, ಡಿ.ಕೆ. ಶಿವಕುಮಾರ್ ಅವರ ಪ್ರಮಾಣವಚನ ಸಮಾರಂಭವು ಸರಳತೆ, ಶಿಸ್ತು ಮತ್ತು ಆಡಳಿತದ ಬದ್ಧತೆಯನ್ನು ಪ್ರತಿಬಿಂಬಿಸುವ ರೀತಿಯಲ್ಲಿ ನಡೆಯುವ ಸಾಧ್ಯತೆ ಇದೆ. ಈ ಬೆಳವಣಿಗೆ ರಾಜ್ಯ ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.
ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆವೊಂದು ಚರ್ಚೆಗೆ ಗ್ರಾಸವಾಗಿದೆ. ರಾಜ್ಯದ ಮುಂದಿನ ಮುಖ್ಯಮಂತ್ರಿ ಆಗಿ ಡಿ.ಕೆ. ಶಿವಕುಮಾರ್ ಜೂನ್ 3ರಂದು ಬುಧವಾರ ಸರಳವಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂಬ ಮಾಹಿತಿ ರಾಜಕೀಯ ವಲಯದಲ್ಲಿ ಹರಿದಾಡುತ್ತಿದೆ. ಈ ನಿರ್ಧಾರದ ಹಿಂದೆ ಕಾಂಗ್ರೆಸ್ ಹೈ ಕಮಾಂಡ್ ನ ಕಟ್ಟುನಿಟ್ಟಿನ ಸೂಚನೆಗಳಿವೆ ಎನ್ನಲಾಗುತ್ತಿದೆ.
ಮೂಲಗಳ ಪ್ರಕಾರ, ಪ್ರಮಾಣವಚನ ಸಮಾರಂಭವನ್ನು ಅತಿ ಸರಳವಾಗಿ ನಡೆಸುವಂತೆ ಪಕ್ಷದ ವರಿಷ್ಠರು ಸೂಚನೆ ನೀಡಿದ್ದಾರಂತೆ. ಸಿದ್ದರಾಮಯ್ಯ ಅಭಿಮಾನಿಗಳು ಹಾಗೂ ಸಾಮಾನ್ಯ ಜನರಲ್ಲಿ ಯಾವುದೇ ರೀತಿಯ ಗೊಂದಲ ಅಥವಾ ತಪ್ಪು ಸಂದೇಶ ಮೂಡಬಾರದು ಎಂಬ ಕಾರಣಕ್ಕೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಲಾಗುತ್ತಿದೆ.
ಇದರ ಜೊತೆಗೆ, ರಾಜ್ಯದಲ್ಲಿ ಪಕ್ಷದ ಐಕ್ಯತೆ ಮತ್ತು ಸಂಘಟನಾ ಬಲವನ್ನು ಪ್ರದರ್ಶಿಸುವ ಉದ್ದೇಶದಿಂದ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಜಂಟಿ ಯಾತ್ರೆ ಕೈಗೊಳ್ಳುವಂತೆ ಕಾಂಗ್ರೆಸ್ ಹೈಕಮಾಂಡ್ ಸಲಹೆ ನೀಡಿದೆ ಎನ್ನಲಾಗಿದೆ. ಈ ಮೂಲಕ ಕಾರ್ಯಕರ್ತರು ಮತ್ತು ಜನತೆಗೆ ಐಕತೆಯ ಸಂದೇಶ ರವಾನಿಸಲು ಪಕ್ಷ ಮುಂದಾಗಿದೆ.
ಈ ಬೆಳವಣಿಗೆಗಳ ಬಗ್ಗೆ ಅಧಿಕೃತ ಘೋಷಣೆಗಾಗಿ ರಾಜಕೀಯ ವಲಯ ಕಾತರದಿಂದ ಕಾಯುತ್ತಿದ್ದು, ಮುಂದಿನ ಕೆಲವು ದಿನಗಳಲ್ಲಿ ಕಾಂಗ್ರೆಸ್ ನಾಯಕತ್ವದಿಂದ ಸ್ಪಷ್ಟನೇ ಸಿಗುವ ಸಾಧ್ಯತೆ ಇದೆ. ರಾಜ್ಯ ರಾಜಕೀಯದ ಈ ಬೆಳವಣಿಗೆಗೆ ಈಗ ಎಲ್ಲರ ಗಮನ ಸೆಳೆದಿದೆ.
ಕರ್ನಾಟಕ ರಾಜಕೀಯದಲ್ಲಿ ನಾಯಕತ್ವ ಬದಲಾವಣೆ ಕುರಿತ ಚರ್ಚೆಗಳು ತೀವ್ರಗೊಂಡಿರುವ ನಡುವೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರ ಜನಬೆಂಬಲ ಕಾಂಗ್ರೆಸ್ ಗೆ ಪ್ರಮುಖ ವಿಚಾರವಾಗಿ ಪರಿಣಮಿಸಿದೆ. ಸಿಎಂ ಸ್ಥಾನದಿಂದ ಕೆಳಗಿಳಿದಿದ್ದರೂ ಸಿದ್ದರಾಮಯ್ಯ ಅವರಿಗೆ ರಾಜ್ಯಾದ್ಯಂತ ದೊಡ್ಡ ಬೆಂಬಲಿಗರ ಬಳಗವಿದ್ದು, ವಿಶೇಷವಾಗಿ ಅಹಿಂದ ( ಅಲ್ಪಸಂಖ್ಯಾತರು, ಹಿಂದುಳಿದವರು ಮತ್ತು ದಲಿತರು) ಸಮುದಾಯಗಳಲ್ಲಿ ಅವರ ಪ್ರಭಾವ ಇನ್ನೂ ಬಲವಾಗಿಯೇ ಇದೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಲು ಅಹಿಂದ ಮತಗಳ ಒಗ್ಗಟ್ಟು ಪ್ರಮುಖ ಕಾರಣವಾಗಿತ್ತು. ಈ ಮತಬ್ಯಾಂಕನ್ನು ಉಳಿಸಿಕೊಳ್ಳುವುದು ಪಕ್ಷದ ಮುಂದಿನ ರಾಜಕೀಯ ತಂತ್ರದಲ್ಲಿ ಅತ್ಯಂತ ಮಹತ್ವದ್ದಾಗಿದೆ. ಇದೇ ಕಾರಣಕ್ಕೆ ನಾಯಕತ್ವ ಬದಲಾವಣೆಯ ಪ್ರಕ್ರಿಯೆಯಲ್ಲಿ ಯಾವುದೇ ರೀತಿಯ ಗೊಂದಲ ಸಮಾಧಾನ ಸೃಷ್ಟಿಯಾಗದಂತೆ ಕಾಂಗ್ರೆಸ್ ಹೈಕಮಾಂಡ್ ಎಚ್ಚರಿಕೆಯ ಹೆಜ್ಜೆ ಇಟ್ಟಿದೆ ಎನ್ನಲಾಗುತ್ತಿದೆ.
ಮೂಲಗಳ ಪ್ರಕಾರ, ಅಧಿಕಾರ ಹಸ್ತಾಂತರದ ಸಂದರ್ಭದಲ್ಲಿ ಸಿದ್ದರಾಮಯ್ಯ ಬೆಂಬಲಿಗರು ಅಥವಾ ಅಹಿಂದ ಸಮುದಾಯಕ್ಕೆ ತಪ್ಪು ಸಂದೇಶ ರವಾನೆಯಾಗದಂತೆ ಕೆಲ ವಿಶೇಷ ಸೂಚನೆಗಳನ್ನು ಪಕ್ಷದ ವರಿಷ್ಠರು ನೀಡಿದ್ದಾರೆ. ಇದರ ಭಾಗವಾಗಿಯೇ ಡಿ.ಕೆ. ಶಿವಕುಮಾರ್ ಅವರ ಪ್ರಮಾಣವಚನ ಸಮಾರಂಭವನ್ನು ಸರಳ ಮತ್ತು ಸಾಂದರ್ಭಿಕವಾಗಿ ಆಯೋಜಿಸುವಂತೆ ಸೂಚನೆ ನೀಡಲಾಗಿದೆ ಎಂಬ ಮಾಹಿತಿ ರಾಜಕೀಯ ವಲಯದಲ್ಲಿ ಹರಿದಾಡುತ್ತಿದೆ.
ಇದರ ಜೊತೆಗೆ, ಪಕ್ಷದ ಐಕ್ಯತೆ ಮತ್ತು ಸಮನ್ವಯವನ್ನು ಜನರಿಗೆ ತೋರಿಸಲು ಸಿದ್ಧರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ಒಟ್ಟಾಗಿ ಕಾಣಿಸಿಕೊಳ್ಳುವ ಕಾರ್ಯಕ್ರಮಗಳಿಗೂ ಒತ್ತು ನೀಡಲಾಗುತ್ತಿದೆ ಎನ್ನಲಾಗಿದೆ. ಈ ಬೆಳವಣಿಗೆಗಳು ಕಾಂಗ್ರೆಸ್ ಒಳಗಿನ ಸಮತೋಲನ ಕಾಪಾಡುವ ಪ್ರಯತ್ನವಾಗಿ ವಿಶ್ಲೇಷಿಸಲ್ಪಡುತ್ತಿವೆ .
ಕಾಂಗ್ರೆಸ್ ಹೈಕಮಾಂಡ್ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಹಿನ್ನೆಲೆಯಲ್ಲಿ ಕಾರ್ಯಕರ್ತರು ಹಾಗೂ ಜನರಲ್ಲಿ ಯಾವುದೇ ಗೊಂದಲ ಉಂಟಾಗದಂತೆ ನೋಡಿಕೊಳ್ಳುವ ಸೂಚನೆ ನೀಡಿದೆ. ಮುಖ್ಯಮಂತ್ರಿ ಸ್ಥಾನದಿಂದ ಸಿದ್ದರಾಮಯ್ಯ ಅವರನ್ನು ಬದಲಿಸಿ ಡಿ.ಕೆ ಶಿವಕುಮಾರ್ ಅವರಿಗೆ ಅಧಿಕಾರ ಹಸ್ತಾಂತರ ಮಾಡುತ್ತಿರುವುದು ಸಂಭ್ರಮಾಚರಣೆಯ ವಿಷಯವಲ್ಲ ಎಂದು ಹೈಕಮಾಂಡ್ ಸ್ಪಷ್ಟಪಡಿಸಿದೆ ಎನ್ನಲಾಗಿದೆ. ಜೊತೆಗೆ ಜನರ ವಿಶ್ವಾಸವನ್ನು ಮತ್ತಷ್ಟು ಬಲಪಡಿಸಲು ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಜಂಟಿಯಲ್ಲಿ "ಜನಾಶೀರ್ವಾದ ಯಾತ್ರೆ" ನಡೆಸುವಂತೆ ಸೂಚನೆ ನೀಡಿದೆ.
ರಾಜ್ಯದ ವಿವಿಧ ಭಾಗಗಳಲ್ಲಿ ಕನಿಷ್ಠ 8 ರಿಂದ 10 ಯಾತ್ರೆಗಳನ್ನು ಆಯೋಜಿಸುವ ಯೋಜನೆ ಇದ್ದು, ಈ ವೇಳೆ "ನಾನೇ ಒಪ್ಪಿಗೆ ನೀಡಿ ಡಿ.ಕೆ. ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡಿದ್ದೇನೆ" ಎಂಬ ಸಂದೇಶವನ್ನು ಸಿದ್ದರಾಮಯ್ಯ ಜನರಿಗೆ ತಲುಪಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಮುಂದಿನ ದಿನಗಳಲ್ಲಿ ನಾಯಕತ್ವ ವಿಚಾರವಾಗಿ ಯಾವುದೇ ಗೊಂದಲ ಅಥವಾ ಭಿನ್ನಾಭಿಪ್ರಾಯದ ಸಂದೇಶ ಹೊರಬರದಂತೆ ಹೈಕಮಾಂಡ್ ಈ ನಿರ್ಧಾರ ಕೈಗೊಂಡಿದೆ ಎನ್ನಲಾಗುತ್ತಿದ್ದು, 2-3 ಜಿಲ್ಲೆಗಳಲ್ಲಿ ಪ್ರಾದೇಶಿಕ ಮಟ್ಟದ ಯಾತ್ರೆಗಳು ನಡೆಯುವ ಸಾಧ್ಯತೆ ಇದೆ.
Also Read:
ರಣವೀರ್ ಸಿಂಗ್ ಬೆಂಬಲಕ್ಕೆ ನಿಂತ ರಾಮ್ ಗೋಪಾಲ್ ವರ್ಮಾ : ಬ್ಯಾನ್ ನಿರ್ಧಾರಕ್ಕೆ ವಿರೋಧ