Belagavi news:
ಕಲಬುರಗಿ, ಮೇ 31: ಜಿಲ್ಲೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಹತ್ವದ ಹೇಳಿಕೆ ನೀಡಿದ್ದಾರೆ. ರಾಜ್ಯದಲ್ಲಿ ಸಚಿವ ಸಂಪುಟ ರಚನೆ ಹಂತ ಹಂತವಾಗಿ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.
ಮೊದಲ ಹಂತದಲ್ಲಿ ಸಚಿವರ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದ್ದು ನಂತರ 15 ದಿನ ಅಥವಾ ಒಂದು ತಿಂಗಳು ಒಳಗೆ ಮತ್ತೊಂದು ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಈ ಮೂಲಕ ಸರ್ಕಾರದ ಸಂಪುಟ ಹಂಚಿಕೆ ಪ್ರಕ್ರಿಯೆ ತಕ್ಷಣವೇ ಪೂರ್ಣಗೊಳ್ಳದೆ ಹಂತ ಹಂತವಾಗಿ ನಡೆಯಲಿದೆ ಎಂಬುದು ಸ್ಪಷ್ಟವಾಗಿದೆ. ಸಚಿವ ಸ್ಥಾನಗಳ ಹಂಚಿಕೆ ಕುರಿತು ಪಕ್ಷದ ಒಳಗಿನ ಚರ್ಚೆಗಳು ಮುಂದುವರಿದಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಸ್ಪಷ್ಟತೆ ಸಿಗಲಿದೆ ಎಂದು ನಿರೀಕ್ಷಿಸಲಾಗಿದೆ.
ಸಿಎಂ ಜೊತೆ ಹೆಚ್ಚು ಮಂದಿ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂಬ ವಿಷಯಕ್ಕೆ ಸಂಬಂಧಿಸಿದಂತೆ ಇನ್ನು ಅಂತಿಮ ಪ್ರಸ್ತಾಪ ಬಂದಿಲ್ಲ ಎಂದು ತಿಳಿದು ಬಂದಿದೆ.
ಸರ್ಕಾರ ರಚನೆ ಹಾಗೂ ಸಂಪುಟ ವಿಸ್ತರಣೆ ಕುರಿತು ಚರ್ಚೆ ಪೂರ್ಣಗೊಂಡ ನಂತರವೇ ಡಿಸಿಎಂ ಮತ್ತು ಸಚಿವರ ಸಂಖ್ಯೆಯನ್ನು ನಿರ್ಧರಿಸಲಾಗುತ್ತದೆ ಎಂದು ಹೇಳಲಾಗುತ್ತಿದೆ.
ಈ ಬಗ್ಗೆ ಜೂನ್ 3ರ ನಂತರ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂಬ ಮಾಹಿತಿ ರಾಜಕೀಯ ವಲಯದಲ್ಲಿ ಹೊರ ಬಂದಿದೆ.
ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಆಗುವ ಹಿನ್ನಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿ ಬದಲಾವಣೆ ಸಹಜ ಎಂದು ರಾಜಕೀಯ ವಲಯದಲ್ಲಿ ಅವರನ್ನು ಚರ್ಚೆ ನಡೆಯುತ್ತಿದೆ.
ಮುಂಬರುವ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಎಲ್ಲರನ್ನೂ ಒಗ್ಗಟ್ಟಾಗಿ ಕೊಂಡೊಯ್ಯುವ ಹಾಗೂ ಸಿಎಂ ಜೊತೆ ಉತ್ತಮ ಸಮನ್ವಯ ಹೊಂದುವ ಸೂಕ್ತ ನಾಯಕನನ್ನು ಕೆಪಿಸಿಸಿ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗುವುದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಸ್ಪಷ್ಟಪಡಿಸಿದ್ದಾರೆ.
Also Read:
DK Shivakumar ಸರಳ ಪ್ರಮಾಣವಚನದ ಹಿಂದಿನ ಕಾರಣವೇನು? ಇಲ್ಲಿದೆ ಸಂಪೂರ್ಣ ಮಾಹಿತಿ