belagavi news :
ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದ ಸಚಿವ ಸಂಪುಟಕ್ಕೆ ಹಿರಿಯ ಕಾಂಗ್ರೆಸ್ ನಾಯಕ ರಾಮಲಿಂಗಾರೆಡ್ಡಿ ದಿಡೀರ್ ರಾಜೀನಾಮೆ ನೀಡಿರುವುದು ರಾಜ್ಯ ರಾಜಕೀಯದಲ್ಲಿ ಬಾರಿ ಚರ್ಚೆಗೆ ಕಾರಣವಾಗಿದೆ. ಬೆಂಗಳೂರು ನಗರ ಅಭಿವೃದ್ಧಿ ಖಾತೆ ಕೈತಪ್ಪಿ ಜಲಸಂಪನ್ಮೂಲ ಇಲಾಖೆ ನೀಡಿರುವುದಕ್ಕೆ ಅಸಮಾಧಾನ ಗೊಂಡ ಅವರು, ಶುಕ್ರವಾರ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಮುಖ್ಯಮಂತ್ರಿಗೆ ಕಳುಹಿಸಿರುವ ರಾಜೀನಾಮೆ ಪತ್ರದಲ್ಲಿ, "ನನ್ನ ಆತ್ಮ ಸಾಕ್ಷಿಗೆ ವಿರುದ್ಧವಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗದ ಕಾರಣ ಸಚಿವ ಸ್ಥಾನವನ್ನು ತ್ಯಜಿಸಿದ್ದೇನೆ" ಇಂದು ರಾಮಲಿಂಗ ರೆಡ್ಡಿ ಉಲ್ಲೇಖಿಸಿದ್ದಾರೆ. ಜೊತೆಗೆ, ತಾವು ಕಾಂಗ್ರೆಸ್ ಪಕ್ಷದ ಶಾಸಕ ಹಾಗೂ ನಿಷ್ಠಾವಂತ ಕಾರ್ಯಕರ್ತನಾಗಿ ಮುಂದುವರೆಯುವುದಾಗಿ ಸ್ಪಷ್ಟಪಡಿಸಿದ್ದಾರೆ.
ಸಂಪುಟ ಪುನರ್ ರಚನೆಯ ಬಳಿಕ ಖಾತೆ ಹಂಚಿಕೆ ಕುರಿತ ಅಸಮಾಧಾನವೇ ಈ ನಿರ್ಧಾರಕ್ಕೆ ಪ್ರಮುಖ ಕಾರಣ ಎನ್ನಲಾಗುತ್ತಿದ್ದು, ಅವರ ರಾಜೀನಾಮೆ ರಾಜ್ಯ ಕಾಂಗ್ರೆಸ್ ರಾಜಕೀಯದಲ್ಲಿ ಹೊಸ ಬೆಳವಣಿಗೆಗಳಿಗೆ ಕಾರಣವಾಗುವ ಸಾಧ್ಯತೆ ಇದೆ. ರಾಮಲಿಂಗ ರೆಡ್ಡಿ ಅವರ ರಾಜೀನಾಮೆ ಪತ್ರದ ಸಂಪೂರ್ಣ ವಿವರಗಳು ಮತ್ತು ಅದರ ಹಿಂದಿನ ರಾಜಕೀಯ ಬೆಳವಣಿಗೆಗಳು ಇದೀಗ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಸಲ್ಲಿಸಿರುವ ರಾಜೀನಾಮೆ ಪತ್ರದಲ್ಲಿ ಹಿರಿಯ ಕಾಂಗ್ರೆಸ್ ನಾಯಕ ರಾಮಲಿಂಗ ರೆಡ್ಡಿ ತಮ್ಮ ನಿರ್ಧಾರದ ಕಾರಣವನ್ನು ಸ್ಪಷ್ಟವಾಗಿ ಉಲ್ಲೇಖಿಸಿದ್ದಾರೆ. ಸಚಿವ ಸ್ಥಾನ ನೀಡಿದ್ದಕ್ಕಾಗಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಕೃತಜ್ಞತೆ ಸಲ್ಲಿಸಿರುವ ಅವರು, "ನನ್ನ ಆತ್ಮಸಾಕ್ಷಿಗೆ ವಿರುದ್ಧವಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗದ ಕಾರಣ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ" ಎಂದು ತಿಳಿಸಿದ್ದಾರೆ.
ಅಲ್ಲದೆ, ತಮ್ಮ ರಾಜೀನಾಮೆಯನ್ನು ಅಂಗೀಕರಿಸುವಂತೆ ಮನವಿ ಮಾಡಿರುವ ರಾಮಲಿಂಗ ರೆಡ್ಡಿ, ತಾವು ಮುಂದೆಯೂ ಕಾಂಗ್ರೆಸ್ ಪಕ್ಷದ ಶಾಸಕ ಹಾಗೂ ಕಾರ್ಯಕರ್ತನಾಗಿ ಸೇವೆ ಸಲ್ಲಿಸುವುದಾಗಿ ಪತ್ರದಲ್ಲಿ ಸ್ಪಷ್ಟಪಡಿಸಿದ್ದಾರೆ. ಈ ಹೇಳಿಕೆ ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದು, ಅವರ ರಾಜೀನಾಮೆ ಹಿಂದಿನ ಕಾರಣಗಳ ಕುರಿತು ಕುತೂಹಲ ಹೆಚ್ಚಿಸಿದೆ.
ಸಚಿವ ಸಂಪುಟದ ಖಾತೆ ಹಂಚಿಕೆ ನಂತರ ಉಂಟಾದ ಅಸಮಾಧಾನವೇ ಈ ಬೆಳವಣಿಗೆಗೆ ಕಾರಣ ಎನ್ನಲಾಗುತ್ತಿದ್ದು, ರಾಮಲಿಂಗ ರೆಡ್ಡಿ ಅವರ ರಾಜೀನಾಮೆ ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯಾಗಿ ಪರಿಗಣಿಸಲಾಗಿದೆ.
ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಹಿರಿಯ ಕಾಂಗ್ರೆಸ್ ನಾಯಕ ರಾಮಲಿಂಗಾರೆಡ್ಡಿ ತಮ್ಮ ನಿರ್ಧಾರದ ಹಿಂದೆ ಇರುವ ಕಾರಣವನ್ನು ಸ್ಪಷ್ಟಪಡಿಸಿದ್ದಾರೆ. ಈ ಹಿಂದೆ ನೀಡಿದ ಭರವಸೆ ಈಡೇರದಿರುವ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಆ ಸಮಾಧಾನ ವ್ಯಕ್ತಪಡಿಸಿದವರು, ತಮಗೆ ಬೆಂಗಳೂರು ಅಭಿವೃದ್ಧಿ ಖಾತೆ ನೀಡುವ ಭರವಸೆ ನೀಡಲಾಯಿತು ಎಂದು ತಿಳಿಸಿದ್ದಾರೆ.
2023ರಲ್ಲಿ ಡಿಕೆ ಶಿವಕುಮಾರ್ ಹಾಗೂ ಅವರ ಸಹೋದರ ಡಿಕೆ ಸುರೇಶ್ ತಮ್ಮ ಮನೆಗೆ ಬಂದು ಭರವಸೆ ನೀಡಿದ್ದು, ಎರಡುವರೆ ವರ್ಷದ ಬಳಿಕ ಮುಖ್ಯಮಂತ್ರಿ ಆದಾಗ ಆ ಖಾತೆ ನೀಡುವುದಾಗಿ ಹೇಳಿದ್ದರು ಎಂದು ರಾಮಲಿಂಗ ರೆಡ್ಡಿ ಹೇಳಿದ್ದಾರೆ. ಆದರೆ, ಈಗ ಬೇರೆ ಖಾತೆ ನೀಡಿರುವುದರಿಂದ ತೀವ್ರ ಅಸಮಾಧಾನ ಉಂಟಾಗಿದೆ ಎಂದು ಅವರು ತಿಳಿಸಿದ್ದಾರೆ.
"ನನ್ನ ಆತ್ಮ ಸಾಕ್ಷಿಗೆ ವಿರುದ್ಧವಾಗಿ ನಡೆದುಕೊಳ್ಳಲು ಸಾಧ್ಯವಿಲ್ಲ" ಎಂಬ ನಿಲುವಿನೊಂದಿಗೆ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ 'ಆತ್ಮಸಾಕ್ಷಿ' ವಿಚಾರವನ್ನು ರಾಜೀನಾಮೆ ಪತ್ರದಲ್ಲೂ ಅವರು ಸ್ಪಷ್ಟವಾಗಿ ಉಲ್ಲೇಖಿಸಿದ್ದಾರೆ.
ಸಚಿವ ಸ್ಥಾನ ತ್ಯಜಿಸಿದರು ತಾವು ಕಾಂಗ್ರೆಸ್ ಪಕ್ಷದ ಶಾಸಕ ಹಾಗೂ ಸಾಮಾನ್ಯ ಕಾರ್ಯಕರ್ತನಾಗಿ ಹೇಳುವ ಮೂಲಕ ಹೈಕಮಾಂಡಿಗೆ ತಮ್ಮ ನಿಷ್ಠೆಯನ್ನು ಪುನಃ ದೃಢಪಡಿಸಿದ್ದಾರೆ. ಈ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ಮಹತ್ವದ ಚರ್ಚೆಗೆ ಕಾರಣವಾಗಿದೆ.
Also Read:
ವಿಶ್ವ ಪರಿಸರ ದಿನ 2026: ಸುಸ್ಥಿರ ಅಭಿವೃದ್ಧಿಗೆ ಸರ್ಕಾರದ ಬದ್ಧತೆ ಪುನರುಚ್ಚರಿಸಿದ ಪ್ರಧಾನಿ