Belagavi news :
ಡಿಕೆ ಶಿವಕುಮಾರ್ ಅವರಿಗೆ ಶೀಘ್ರದಲ್ಲೇ ಶುಭ ಸುದ್ದಿ ಸಿಗಲಿದೆ ಎಂಬ ಬೆಂಬಲಿಗರ ಮಾತು ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಈ ಕುರಿತು ಪ್ರತಿಕ್ರಿಯೆ ನೀಡಿದ ಮಾಜಿ ರಾಜಣ್ಣ, " ಸಮಯ ಬಂದಾಗ ಎಲ್ಲವೂ ಗೊತ್ತಾಗುತ್ತದೆ" ಎಂದು ಹೇಳುವ ಮೂಲಕ ಕುತೂಹಲ ಹೆಚ್ಚಿಸಿದ್ದಾರೆ.
ರಾಜಣ್ಣ ಅವರ ಈ ಹೇಳಿಕೆ ಕಾಂಗ್ರೆಸ್ ವಲಯದಲ್ಲಿ ಸಾಕಷ್ಟು ಗಮನ ಸೆಳೆದಿದ್ದು, ಡಿಕೆ ಶಿವಕುಮಾರ್ ಅವರ ಮುಂದಿನ ರಾಜಕೀಯ ನಡೆ ಬಗ್ಗೆ ಹಲವು ಊಹಾಪೋಹಗಳಿಗೆ ಕಾರಣವಾಗಿದೆ. ಬೆಂಬಲಿಗರು ಇದನ್ನು ದೊಡ್ಡ ರಾಜಕೀಯ ಬೆಳವಣಿಗೆ ಸೂಚನೆ ಎಂದು ವ್ಯಾಖ್ಯಾನಿಸಿದ್ದಾರೆ.
ಇದೀಗ ರಾಜಣ್ಣ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲೂ ವೈರಲ್ ಆಗಿದ್ದು, ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸದೆ.
ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತು ಚರ್ಚೆಗಳು ತಾರಕಕ್ಕೇರಿರುವ ನಡುವೆಯೇ, ಮಾಜಿ ಸಚಿವ ಕೆಏನ್ ರಾಜಣ್ಣ ನೀಡಿರುವ ಹೇಳಿಕೆ ಹೊಸ ರಾಜಕೀಯ ಕುತೂಹಲಕ್ಕೆ ಕಾರಣವಾಗಿದೆ. ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ರಾಜಣ್ಣ, ಕಾಂಗ್ರೆಸ್ ಪಕ್ಷದ ಒಳ ರಾಜಕೀಯ ಹಾಗೂ ಸಿಎಂ ಸ್ಥಾನ ಬದಲಾವಣೆ ಚರ್ಚೆಗೆ ಸಂಬಂಧಿಸಿದಂತೆ ಮಹತ್ವ ಸೂಚನೆ ನೀಡಿದ್ದಾರೆ.
"ನಮ್ಮ ಪಕ್ಷದಲ್ಲಿ ಸಿಎಂ ಆಗುವ ಅರ್ಹತೆಯುಳ್ಳ ಒಂದು ಡಜನ್ ನಾಯಕರಿದ್ದಾರೆ" ಎಂದು ಹೇಳಿದ ರಾಜಣ್ಣ ಕಾಂಗ್ರೆಸ್ ನಲ್ಲಿ ನಾಯಕತ್ವ ಸಾಮರ್ಥ್ಯ ಹೊಂದಿರುವ ಹಲವು ಮುಖಂಡರಿದ್ದಾರೆ ಎಂಬ ಸಂದೇಶ ನೀಡಿದ್ದಾರೆ. ಇದೇ ವೇಳೆ,"ಸಿಎಂ ಬದಲಾಗುತ್ತಾರೆ ಎಂದು ನಾನು ಹೇಳಲ್ಲ, ಇರುತ್ತಾರೆ ಅಂತಾನೂ ಹೇಳಲ್ಲ. ಆದರೆ ಹೈಕಮಾಂಡ್ ಅತಿ ಬೇಗ ಈ ಬಗ್ಗೆ ಜಾಗರೂಕ ನಿರ್ಧಾರ ಕೈಗೊಳ್ಳಲಿದೆ" ಎಂದು ಹೇಳುವ ಮೂಲಕ ರಾಜಕೀಯ ವಲಯದಲ್ಲಿ ಮತಷ್ಟು ಚರ್ಚೆಗೆ ಕಾರಣವಾಗಿದೆ.
ರಾಜಣ್ಣ ಅವರ ಈ ಹೇಳಿಕೆಯನ್ನು ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯಾಗಿ ಪರಿಗಣಿಸಲಾಗುತ್ತಿದೆ. ಕಳೆದ ಕೆಲವು ತಿಂಗಳುಗಳಿಂದ ಮುಖ್ಯಮಂತ್ರಿ, ಬದಲಾವಣೆಯ ಕುರಿತುಗಳು ಊಹಾಪಗಳು ಕೇಳಿ ಬರುತ್ತಿದ್ದು, ವಿಶೇಷವಾಗಿ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ನಡುವಿನ ಅಧಿಕಾರ ಹಂಚಿಕೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಇದರಿಂದ ಕಾಂಗ್ರೆಸ್ ಬಳಗಡಿಯಲ್ಲಿಯೂ ಹಲವು ಮಟ್ಟದ ಚರ್ಚೆಗಳು ನಡೆಯುತ್ತಿವೆ ಎನ್ನಲಾಗಿದೆ.
ಮೈಸೂರಿನಲ್ಲಿ ಸಿದ್ದರಾಮಯ್ಯ ಭೇಟಿ ಬಳಿಕ ರಾಜಣ್ಣ ಈ ಹೇಳಿಕೆ ನೀಡಿರುವುದು ರಾಜಕೀಯ ಕುತೂಹಲವನ್ನು ಇನ್ನಷ್ಟು ಹೆಚ್ಚಿಸಿದೆ. ಹೈಕಮಾಂಡ್ ಯಾವ ನಿರ್ಧಾರ ಕೈಗೊಳ್ಳಲಿದೆ ಎಂಬುದರ ಮೇಲೆ ರಾಜ ರಾಜಕೀಯ ಮುಂದಿನ ದಿಕ್ಕು ನಿರ್ಧಾರವಾಗಲಿದೆ ಎಂಬ ವಿಶ್ಲೇಷಣೆಗಳು ಕೇಳಿ ಬರುತ್ತಿವೆ.
ಇದೀಗ ರಾಜಣ್ಣ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಕಾಂಗ್ರೆಸ್ ನಾಯಕತ್ವ ಬದಲಾವಣೆ ಚರ್ಚೆಗೆ ಹೊಸ ವೇಗ ನೀಡಿದೆ.
ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಕುರಿತ ಗೊಂದಲ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ನಡುವೆಯೇ, ಮಾಜಿ ಸಚಿವ ಕೆಏನ್ ರಾಜಣ್ಣ ಮತ್ತೊಂದು ಸ್ಫೋಟಕ ಹೇಳಿಕೆ ನೀಡಿ ಕಾಂಗ್ರೆಸ್ ಹೈಕಮಾಂಡ್ ಗೆ ನೇರ ಸಂದೇಶ ರವಾನಿಸಿದ್ದಾರೆ. ಪಿ ಎಮ್ ಬದಲಾವಣೆ ಕುರಿತು ಅನಿಶ್ಚಿತತೆಯ ಪಕ್ಷ ಹಾಗೂ ಸರ್ಕಾರದ ಕಾರ್ಯ ವೈಖರಿಯ ಮೇಲೆಯೇ ಪರಿಣಾಮ ಬೀರುತ್ತಿದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ರಾಜಣ್ಣ, "ಈ ಗೊಂದಲ ಮುಂದುವರೆದಷ್ಟು ಪಕ್ಷ ಮತ್ತು ಸರ್ಕಾರದ ಮೇಲೆ ಪರಿಣಾಮ ಬೀರುತ್ತದೆ. ಸಿದ್ದರಾಮಯ್ಯ ಅವರಿಗೆ ಪರಿಪೂರ್ಣ ಅಧಿಕಾರ ಮುಂದುವರಿಸಿ ಅಂತಾದರೂ ಹೇಳಲಿ ಅಥವಾ ಬದಲಾವಣೆ ಮಾಡುವದಿದ್ದರೆ ಅದನ್ನಾದರೂ ವರಿಷ್ಠರು ಸ್ಪಷ್ಟಪಡಿಸಲಿ" ಎಂದು ಆಗ್ರಹಿಸಿದರು.
ರಾಜಣ್ಣ ಅವರ ಈ ಹೇಳಿಕೆ ಕಾಂಗ್ರೆಸ್ ಗಳ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದು, ಸಿಎಂ ಸ್ಥಾನ ಬದಲಾವಣೆ ವಿಚಾರ ಮತ್ತೆ ರಾಜಕೀಯ ಕೇಂದ್ರಬಿಂದು ಆಗಿದೆ. ಕಳೆದ ಹಲವು ತಿಂಗಳುಗಳಿಂದ ಮುಖ್ಯಮಂತ್ರಿ ಸ್ಥಾನ ಕುರಿತಾಗಿ ವಿವಿಧ ರೀತಿಯ ಊಹಾಪೋಹಗಳು ಕೇಳಿ ಬರುತ್ತಿದ್ದು, ಕಾಂಗ್ರೆಸ್ ಹೈಕಮಾಂಡ್ ಯಾವುದೇ ಸ್ಪಷ್ಟ ನಿರ್ಧಾರ ಪ್ರಕಟಿಸದಿರುವುದು ನಾಯಕರು ಹಾಗೂ ಕಾರ್ಯಕರ್ತರಲ್ಲೂ ಗೊಂದಲಕ್ಕೆ ಕಾರಣವಾಗಿದೆ ಎನ್ನಲಾಗುತ್ತಿದೆ.
ರಾಜಣ್ಣ ಮಾತುಗಳಲ್ಲಿ ಹೈಕಮಾಂಡ್ ಮೇಲಿನ ಸಮಾಧಾನ ಸ್ಪಷ್ಟವಾಗಿ ವ್ಯಕ್ತವಾಗಿದ್ದು, ನಾಯಕತ್ವದ ಕುರಿತು ಸ್ಪಷ್ಟತೆ ಅಗತ್ಯ ಎಂಬ ಸಂದೇಶವನ್ನು ಅವರು ನೀಡಿದ್ದಾರೆ. " ಸರ್ಕಾರ ಸುಗಮವಾಗಿ ನಡೆಯಬೇಕಾದರೆ ನಾಯಕತ್ವದ ಬಗ್ಗೆ ಅನುಮಾನಗಳಿಗೆ ತೆರೆ ಬೀಳಬೇಕು" ಎಂಬ ಅಭಿಪ್ರಾಯವೂ ಕಾಂಗ್ರೆಸ್ ವಲಯದಲ್ಲಿ ಕೇಳಿ ಬರುತ್ತಿದೆ.
ಇದೀಗ ರಾಜಣ್ಣ ನೀಡಿರುವ ಹೇಳಿಕೆ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವಿನ ಅಧಿಕಾರ ಹಂಚಿಕೆ ಚರ್ಚೆಗೂ ಹೊಸ ತಿರುವು ನೀಡಿದೆ. ಕಾಂಗ್ರೆಸ್ ಹೈಕಮಾಂಡ್ ಮುಂದಿನ ದಿನಗಳಲ್ಲಿ ಯಾವ ನಿರ್ಧಾರ ಕೈಗೊಳ್ಳಲಿದೆ ಎಂಬ ಕುತೂಹಲ ಮತ್ತಷ್ಟು ಹೆಚ್ಚಾಗಿದೆ.
ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಸ್ಥಾನ ಬದಲಾವಣೆ ಕುರಿತು ಚರ್ಚೆಗಳು ತೀವ್ರಗೊಂಡಿರುವ ನಡುವೆಯೇ, ಮಾಜಿ ಸಚಿವ ಕೆ ಎನ್ ರಾಜಣ್ಣ ನೀಡಿರುವ ಹೇಳಿಕೆ ಕಾಂಗ್ರೆಸ್ ವಲಯದಲ್ಲಿ ಹೊಸ ರಾಜಕೀಯ ಸಂಚಲನಕ್ಕೆ ಕಾರಣವಾಗಿದೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಶೀಘ್ರದಲ್ಲೇ ಶುಭಸುದ್ದಿ ಸಿಗಲಿದೆ ಎಂಬ ಬೆಂಬಲಿಗರ ಮಾತಿಗೆ ಪ್ರತಿಕ್ರಿಸಿದ ರಾಜಣ್ಣ, ಕಾಂಗ್ರೆಸ್ ಪಕ್ಷದ ಒಳ ರಾಜಕೀಯ ಮತ್ತು ನಾಯಕತ್ವದ ಕುರಿತು ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ,"ಜೀವನದಲ್ಲಿ ಆಶಾಭಾವನೆ ಇಟ್ಟುಕೊಳ್ಳುವುದು ಸಹಜ. ಡಿಕೆ ಶಿವಕುಮಾರ್ ಅವರು ನಮ್ಮ ಪಕ್ಷದ ಅಧ್ಯಕ್ಷರು, ಅವರಿಗೆ ಸಿಎಂ ಕುರ್ಚಿ ಮೇಲೆ ಆಸೆ ಇರುವುದು ಸಹಜ ಮತ್ತು ಜಾಸ್ತಿಯೇ ಇದೆ"ಎಂದು ಹೇಳಿದ್ದಾರೆ. ಅವರು ಹೇಳಿಕೆಯ ಮೂಲಕ ಡಿಕೆ ಶಿವಕುಮಾರ್ ಅವರ ಮುಖ್ಯಮಂತ್ರಿ ಹುದ್ದೆಯ ಮೇಲಿನ ಆಸೆಯನ್ನು ಅವರು ಪರೋಕ್ಷವಾಗಿ ಒಪ್ಪಿಕೊಂಡಂತಾಗಿದೆ.
ಆದರೆ ಇದೇ ವೇಳೆ, ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಡಿಕೆ ಶಿವಕುಮಾರ್ ಮಾತ್ರವಲ್ಲ, ಇನ್ನೂ ಹಲವು ಪ್ರಭಾವಿ ನಾಯಕರು ಅರ್ಹರಾಗಿದ್ದಾರೆ ಎಂಬ ಸಂದೇಶವನ್ನು ರಾಜಣ್ಣ ನೀಡಿದ್ದಾರೆ. "ನಮ್ಮಲ್ಲಿ ಮಲ್ಲಿಕಾರ್ಜುನ ಖರ್ಗೆ, ಜಿ ಪರಮೇಶ್ವರ್, ಎಂಬಿ ಪಾಟೀಲ್, ಸೇರಿದಂತೆ ಬಹಳ ಜನ ಸಮರ್ಥ ನಾಯಕರಿದ್ದಾರೆ" ಎಂದು ಹೇಳುವ ಮೂಲಕ ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವದ ಹಲವು ಆಯ್ಕೆಗಳು ಇವೆ ಎಂಬುದನ್ನು ಸ್ಪಷ್ಟಪಡಿಸಿದರು.
ರಾಜಣ್ಣ ಅವರ ಈ ಹೇಳಿಕೆ ಕಾಂಗ್ರೆಸ್ ಒಳ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದು, ಸಿಎಂ ಸಿದ್ದರಾಮಯ್ಯ ಬಳಿಕ ರಾಜ್ಯದ ನಾಯಕತ್ವ ಯಾರಿಗೆ ಸಿಗಬಹುದು ಎಂಬ ಪ್ರಶ್ನೆ ಮತ್ತೆ ಮುಂದೆಗೆ ಬಂದಿದೆ. ಕಳೆದ ಕೆಲವು ತಿಂಗಳಿಂದ ಬದಲಾವಣೆ ಕುರಿತು ಹಲವು ಹಾಕುವಗಳು ಕೇಳಿ ಬರುತ್ತಿದ್ದು, ಡಿಕೆ ಶಿವಕುಮಾರ್ ಬೆಂಬಲಿಗರು ಅವರಿಗೆ ಮುಖ್ಯಮಂತ್ರಿ ಸ್ಥಾನ ಸಿಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇದರ ನಡುವೆ ರಾಜಣ್ಣ ನೀಡಿರುವ ಹೇಳಿಕೆ ರಾಜಕೀಯ ವಲಯದಲ್ಲಿ ವಿವಿಧ ರೀತಿಯ ವಿಶ್ಲೇಷಣೆಗಳಿಗೆ ಕಾರಣವಾಗಿದೆ. ಕೆಲವರು ಇದನ್ನು ಡಿಕೆ ಶಿವಕುಮಾರ್ ಪರ ಸಂದೇಶವಾಗಿ ನೋಡುತ್ತಿದ್ದರೆ, ಇನ್ನು ಕೆಲವರು ಕಾಂಗ್ರೆಸ್ ನಲ್ಲಿ ನಾಯಕತ್ವದ ಸ್ಪರ್ಧೆ ತೀವ್ರವಾಗಿದೆ ಎಂಬ ಸೂಚನೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಇದೀಗ ಕಾಂಗ್ರೆಸ್ ಹೈಕಮಾಂಡ್ ಯಾವ ನಿರ್ಧಾರ ಕೈಗೊಳ್ಳಲಿದೆ ಎಂಬ ಕುತೂಹಲ ಮತ್ತಷ್ಟು ಹೆಚ್ಚಿದ್ದು, ಮುಖ್ಯಮಂತ್ರಿ ಬದಲಾವಣೆ ಚರ್ಚೆಗೆ ರಾಜಣ್ಣ ಹೇಳಿಕೆ ಹೊಸ ತಿರುಗು ನೀಡಿದೆ. ಸಾಮಾಜಿಕ ಜಾಲತಾಣಗಳನ್ನು ಈ ಹೇಳಿಕೆ ವೈರಲ್ ಆಗಿದ್ದು, ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.
Also Read:
ಬಾಲ್ಯ ವಿವಾಹ ತಡೆದು ಮಾದರಿಯಾದ ಅಕ್ಕ.... ಬೆಳಗಾವಿಯಲ್ಲಿ ಕಮಿಷನರ್ ಮೆಚ್ಚುಗೆ