<?= $pageTitle ?>
Logo
ಮುಖಪುಟ ಓದುವುದು ಕೇಳು
Breaking News

Fake Rape Case ಮೂಲಕ ವಂಚನೆ: ಬೆಳಗಾವಿಯಲ್ಲಿ ಮಹಿಳೆ ಬಂಧನ

Fake Rape Case ಮೂಲಕ ವಂಚನೆ: ಬೆಳಗಾವಿಯಲ್ಲಿ ಮಹಿಳೆ ಬಂಧನ
Summary: Police have arrested a woman who was cheating by filing a false rape case in Belgaum. Belgaum SP has given important information about the case. Many alarming facts have come to light in Kanake

Belagavi news:

ಬೆಳಗಾವಿ: ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿ ಮೋಸ ಮಾಡಿದ್ದಾರೆ ಎಂದು ಸುಳ್ಳು ಆರೋಪ ಹೊರಿಸಿ. ಪೊಲೀಸ್ ಅಧಿಕಾರಿಗಳು, ಪ್ರಭಾವಿ ವ್ಯಕ್ತಿಗಳು ಹಾಗೂ ಅಮಾಯಕರಿಂದ ಹಣ ವಸೂಲಿ ಮಾಡಲು ಸಂಚು ರೂಪಿಸಿದ್ದ ಮಹಿಳೆಯನ್ನು ಜಿಲ್ಲೆಯ ಪೊಲೀಸರು ಬಂಧಿಸಿದ್ದಾರೆ.

ಮೂಲತಃ ಘಟಪ್ರಭಾ ನಿವಾಸಿಯಾಗಿರುವ ಹಾಗೂ ಸದ್ಯ ಬೆಳಗಾವಿಯ ಲಕ್ಷ್ಮಿ ನಗರದಲ್ಲಿ ವಾಸವಿದ್ದ ರೇಷ್ಮಾ ಶಂಕರ್ ಮುತಗಾ ಬಂಧಿತ ಮಹಿಳೆ ಎಂದು ಗುರುತಿಸಲಾಗಿದೆ. ತನಿಖೆಯಲ್ಲಿ ಆಕೆ ಕೇವಲ ಸಾಮಾನ್ಯ ಜನರನ್ನಷ್ಟೇ ಅಲ್ಲ, ಪೊಲೀಸ್ ಅಧಿಕಾರಿಗಳ ಮೇಲೆ ಸುಳ್ಳು ದೂರು ನೀಡಿ ಹಣ ವಸೂಲಿ ಹಾಗೂ ವಂಚನೆ ನಡೆಸುತ್ತಿದ್ದ ಸಂಗತಿ ಬೆಳಕಿಗೆ ಬಂದಿದೆ.

ಪ್ರಕರಣದ ಕುರಿತು ಬೆಳಗಾವಿ ಎಸ್ಪಿ ಮಾಹಿತಿ ನೀಡಿದ್ದು ಆರೋಪಿಯ ವಿರುದ್ಧ ಹಲವು ಗಂಭೀರ ಅಂಶಗಳು ತನಿಖೆ ಯಲ್ಲಿ ಪತ್ತೆಯಾಗಿವೆ. ಈ ಘಟನೆ ಜಿಲ್ಲೆಯಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದು, ಪೊಲೀಸರ ಮುಂದಿನ ತನಿಖೆ ಮುಂದುವರೆದಿದೆ.

ಪ್ರಕರಣ ಸಂಬಂಧ ಶನಿವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬಂಧಿತ ಮಹಿಳೆಯ ವಿರುದ್ಧ ರೌಡಿಶೀಟರ್ ಪ್ರಕರನ್ನ ಕೆರೆಯಲಾಗಿದೆ ಎಂದು ತಿಳಿಸಿದ್ದಾರೆ. ಮದುವೆ ಸಂಬಂಧಿತ ವಿವಿಧ ಆ್ಯಪ್ ಗಳಲ್ಲಿ ಸುಂದರ ನಕಲಿ ಫೋಟೋಗಳನ್ನು ಅಪ್ಲೋಡ್ ಮಾಡಿ, ಹಣವಂತರು ಹಾಗೂ ಪ್ರಭಾವಿ ವ್ಯಕ್ತಿಗಳನ್ನು ಟಾರ್ಗೆಟ್ ಮಾಡುತ್ತಿದ್ದಳು ಎಂದು ಎಸ್ಪಿ ಮಾಹಿತಿ ನೀಡಿದ್ದಾರೆ.

ನಿಗದಿತ ಸ್ಥಳಕ್ಕೆ ಕರೆಸಿಕೊಂಡ ಬಳಿಕ ಅತ್ಯಾಚಾರ ಆರೋಪ ಮಾಡಿ ಹಣ ಪೀಕುವ ಸಂಚು ರೂಪಿಸುತ್ತಿದ್ದಳು. ಪೊಲೀಸ್ ಠಾಣೆಗೆ ನಾಯಕನಾಗಿ ಹೋದ ಸಂದರ್ಭದಲ್ಲೂ ಪೊಲೀಸ್ ಅಧಿಕಾರಿಗಳ ಮೇಲೆ ಅತ್ಯಾಚಾರ ಆರೋಪ ಮಾಡಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದಳು ಎಂಬ ಸಂಗತಿ ತನಿಖೆಯಲ್ಲಿ ಬಹಿರಂಗವಾಗಿದೆ.

ಬಂದಿದ್ದ ಮಹಿಳೆ ಎಂಟು ತಿಂಗಳ ಹಿಂದೆ ಘಟಪ್ರಭಾ ಪೊಲೀಸ್ ಠಾಣೆಯಲ್ಲಿ ತನಗೆ ಮೋಸ ಮಾಡಿ ಓಡಿ ಹೋಗಿದ್ದಾರೆ ಎಂದು ಒಬ್ಬ ವ್ಯಕ್ತಿಯ ವಿರುದ್ಧ ದೂರು ದಾಖಲಿಸಿದ್ದಳು. ತುಮಕೂರಿನ ಖಾಸ್ಗಿ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದ ಕಲ್ಯಾಣ ಯರಕೂಳ ಎಂಬ ವ್ಯಕ್ತಿ ಮ್ಯಾಟ್ರಿಮೋನಿಯಲ್ಲಿ ಪರಿಚಯವಾಗಿ ಮದುವೆಯಾಗಿ ಮೋಸ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ಪ್ರಕರಣ ದಾಖಲಿಸಲು ಹಿಂದೆಟು ಹಾಕಿದ ಪೊಲೀಸ್ ಇನ್ಸ್ಪೆಕ್ಟರ್ ಮೇಲು 1 ಲಕ್ಷ ರೂಪಾಯಿ ಲಂಚ ಪಡೆದಿದ್ದಾರೆ ಎಂದು ಆರೋಪಿಸಿ ಬೆದರಿಕೆ ಹಾಕಿದ್ದಳು. ಬಳಿಕ ಬೈಲಹೊಂಗಲ ಡಿವೈಎಸ್ಪಿ ವೀರಯ್ಯ ಹಿರೇಮಠ ನೇತೃತ್ವದಲ್ಲಿ ನಡೆದ ತನಿಖೆಯಲ್ಲಿ ಮಹಿಳೆಯ ವಂಚನೆ ಜಾಲ ಬಯಲಾಗಿದ್ದು, ಹಲವು ಅಚ್ಚರಿಯ ಮಾಹಿತಿಗಳು ಹೊರಬಿದ್ದಿವೆ.

2012ರಲ್ಲಿ ಕುಡಚಿ ಪೊಲೀಸ್ ಠಾಣೆಯಲ್ಲಿ "ಪಕ್ಕದ ಮನೆಯವರ ಪರಿಚಯವಾಗಿ ಮದುವೆಯಾಗುವುದಾಗಿ ಮೋಸ ಮಾಡಿದ್ದಾರೆ" ಎಂದು ಮಹಿಳೆ ದೂರು ದಾಖಲಿಸಿದ್ದರು. ಬಳಿಕ 2022ರಲ್ಲಿ ಘಟಪ್ರಭಾದಲ್ಲಿ ನಾಗರಾಜ್ ಗದಗ್ ಎಂಬ ಕಾನ್ಸ್ಟೇಬಲ್ ವಿರುದ್ಧ ಪ್ರಕರಣ ದಾಖಲಾಗಿತ್ತು. 2023ರಲ್ಲಿ ಗಜೇಂದ್ರಗಡದ ಆಕಾಶ ಎಂಬುವವರ ಮೇಲೆ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದೆ. ಇದೇ ಮಹಿಳೆ 2025ರಲ್ಲಿ ಸುರೇಶ್ ಎಂಬುವವರು ಮೋಸ ಮಾಡಿದ್ದಾರೆ ಎಂದು ಧಾರವಾಡ ಸಬರ್ಬನ್ ಪೊಲೀಸ್ ಠಾಣೆಯಲ್ಲಿ ದೂರು ನೀಡುರುವುದಾಗಿ ತಿಳಿಸಿದ್ದಾರೆ.

ಇದೇ ವೇಳೆ ಧಾರವಾಡ ಪೊಲೀಸ್ ಇನ್ಸ್ಪೆಕ್ಟರ್ ವಿರುದ್ಧವು ರೇಪ್ ಕೇಸ್ ದಾಖಲಿಸುತ್ತಾರೆ. ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಸುರೇಶ್ ಮತ್ತು ಆತನ ಸ್ನೇಹಿತ ಕೊಟ್ರೇಶ ಮೇಲೆ ಅತ್ಯಾಚಾರ ದೂರು ಕೊಟ್ಟಿದ್ದಾರೆ... ಇವೆಲ್ಲವೂ ಸುಳ್ಳು ಕೇಸುಗಳು ಎಂಬುದು ತನಿಖೆಯಲ್ಲಿ ಸ್ಪಷ್ಟವಾಗಿದೆ ಎಂದು ಎಸ್ ಪಿ ಕೆ. ರಾಮರಾಜನ್ ಮಾಹಿತಿ ನೀಡಿದರು.

Also Read:

"ಸ್ವಾಭಿಮಾನವೇ ನನ್ನ ನಿರ್ಧಾರಕ್ಕೆ ಕಾರಣ" : ಟೆಸ್ಟ್ ನಿವೃತ್ತಿಯ ಬಗ್ಗೆ ಕೊಹ್ಲಿ ಸ್ಪಷ್ಟನೆ

Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online