<?= $pageTitle ?>
Logo
ಮುಖಪುಟ ಓದುವುದು ಕೇಳು
Breaking News

ಬಿಸಿಯೂಟ ತಯಾರಿಕಾ ಮಹಿಳೆಯರ ಹೋರಾಟ ತೀವ್ರ - ಕೊಪ್ಪಳ ಜಿಲ್ಲಾಡಳಿತದ ವಿರುದ್ಧ ಆಕ್ರೋಶ

ಬಿಸಿಯೂಟ ತಯಾರಿಕಾ ಮಹಿಳೆಯರ ಹೋರಾಟ ತೀವ್ರ - ಕೊಪ್ಪಳ ಜಿಲ್ಲಾಡಳಿತದ ವಿರುದ್ಧ ಆಕ್ರೋಶ
Summary: Hot meal preparation women staged a massive protest demanding the fulfillment of various demands and tried to lay siege to the district administration building. A tense atmosphere was created at the place, read the full news

Belagavi News:

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬಿಸಿಊಟ ತಯಾರಿಕ ಮಹಿಳೆಯರು ಸೋಮವಾರ ಕೊಪ್ಪಳದಲ್ಲಿ ಭಾರಿ ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರು ಜಿಲ್ಲಾಡಳಿತ ಭವನದತ್ತ ಮೆರವಣಿಗೆ ನಡೆಸಿ ಮುತ್ತಿಗೆ ಹಾಕಲು ಯತ್ನಿಸಿದ ವೇಳೆ ಪೊಲೀಸರು ತಡೆದು ಪರಿಸ್ಥಿತಿಯನ್ನು ನಿಯಂತ್ರಿಸಿದರು.

ರಾಜ್ಯ ಸರ್ಕಾರ ತಮ್ಮ ಹಲಗೂ ವರ್ಷಗಳ ಬೇಡಿಕೆಗಳನ್ನು ಇನ್ನು ಈಡೇರಿಸಿಲ್ಲ ಎಂದು ಆರೋಪಿಸಿದ ಪ್ರತಿಭಟನಾಕಾರರು, ಗೌರವಧನ ಹೆಚ್ಚಳ, ಸೇವಾ ಭದ್ರತೆ, ನಿವೃತ್ತಿ ಸೌಲಭ್ಯ ವಿವಿಧ ಬೇಡಿಕೆಗಳನ್ನು ತಕ್ಷಣ ಜಾರಿಗೊಳಿಸುವಂತೆ ಆಗ್ರಹಿಸಿದರು.

ಪ್ರತಿಭಟನೆಯ ವೇಳೆ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ಮಹಿಳೆಯರು, ತಮ್ಮ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕಲ್ಪಿಸದಿದ್ದರೆ ರಾಜ್ಯಾದ್ಯಂತ ಹೋರಾಟವನ್ನು ಮತ್ತಷ್ಟು ತೀವ್ರ ಗೊಳಿಸುವ ಎಚ್ಚರಿಕೆ ನೀಡಿದರು.

ಬಳಿಕ ಪ್ರತಿಭಟನಾಕಾರರು ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿ, ತಮ್ಮ ಬೇಡಿಕೆಗಳನ್ನು ಆದ್ಯತೆಯ ಮೇರೆಗೆ ಪರಿಗಣಿಸಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ಪ್ರತಿಭಟನೆಯ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಭವನದ ಸುತ್ತಮುತ್ತ ಬಿಗಿ ಪೊಲೀಸ್ ಬಂದು ಬಸ್ ಏರ್ಪಡಿಸಲಾಗಿತ್ತು. ಕೆಲಕಾಲ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾದರೂ, ಯಾವುದೇ ಅಹಿತಕರ ಘಟನೆಗಳು ವರದಿಯಾಗಿಲ್ಲ.

ಕೊಪ್ಪಳ - ಸಾವಿರಾರು ಬಿಸಿ ಊಟ ತಯಾರಿಕಾ ಮಹಿಳೆಯರ ಬೃಹತ್ ಪ್ರತಿಭಟನೆ - ಜಿಲ್ಲಾಡಳಿತ ಭವನಕ್ಕೆ ಮುತ್ತಿಗೆ ಯತ್ನ :

ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನಗರದ ಸಾವಿರಾರು ಬಿಸಿಊಟ ತಯಾರಿಕಾ ಮಹಿಳೆಯರು ಇಂದು ಬೃಹತ್ ಪ್ರತಿಭಟನೆ ನಡೆಸಿದರು. ಸಂಘಟನೆಯ ನಿತತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ಸಾವಿರಾರು ಮಹಿಳೆಯರು ಭಾಗವಹಿಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನಾಕಾರರು ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿ ಜಿಲ್ಲಾಡಳಿತ ಭವನದತ್ತ ಸಾಗಿದರು. ಈ ವೇಳೆ ಜಿಲ್ಲಾಡಳಿತ ಭವನಕ್ಕೆ ಮುತ್ತಿಗೆ ಹಾಕಲು ಯತ್ನಿಸಿದಾಗ ಪೊಲೀಸರು ತಡೆದ ಪರಿಣಾಮ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು.

ಬಿಸಿ ಊಟ ತಯಾರಿಕಾ ಮಹಿಳೆಯರು ಗೌರವ ಧನ ಹೆಚ್ಚಳ, ಸೇವಾ ಭದ್ರತೆ, ಸಾಮಾಜಿಕ ಭದ್ರತಾ ಸೌಲಭ್ಯಗಳು, ನಿವೃತ್ತಿ ಪ್ರಯೋಜನ ಸೇರಿದಂತೆ ತಮ್ಮ ಹಲವು ವರ್ಷಗಳ ಬೇಡಿಕೆಗಳನ್ನು ತಕ್ಷಣವೇ ಈಡೇರಿಸಬೇಕೆಂದು ಒತ್ತಾಯಿಸಿದರು. ಸರ್ಕಾರವು ತಮ್ಮ ಸಮಸ್ಯೆಗಳ ಬಗ್ಗೆ ನಿರ್ಲಕ್ಷ ವಹಿಸುತ್ತಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ಬೇಡಿಕೆಗಳು ಈಡೇರದಿದ್ದರೆ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸುವ ಎಚ್ಚರಿಕೆ ನೀಡಿದರು.

ಬಳಿಕ ಪ್ರತಿಭಟನಾ ಕಾರರು ಜಿಲ್ಲಾಡಳಿತದ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿ ತಮ್ಮ ಬೇಡಿಕೆಗಳನ್ನು ಶೀಘ್ರವೇ ಈಡೇರಿಸುವಂತೆ ಒತ್ತಾಯಿಸಿದರು.

ಕೊಪ್ಪಳ - ವೇತನ ಹೆಚ್ಚಳಕ್ಕೆ ಆಗಮಿಸಿ ಬಿಸಿ ಊಟ ತಯಾರಿಕಾ ಮಹಿಳೆಯರ ಆಕ್ರೋಶ - ಜಿಲ್ಲಾಡಳಿತ ಭವನ ಪ್ರವೇಶಕ್ಕೆ ಯತ್ನ :

ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಾವಿರಾರು ಬಿಸಿ ಊಟ ತಯಾರಿಕಾ ಮಹಿಳೆಯರು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ಸಿಐಟಿಯು ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಮಹಿಳೆಯರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನಾಕಾರರ ಪ್ರಮುಖ ಬೇಡಿಕೆ ಬಿಸಿ ಊಟ ತಯಾರಿಕ ಮಹಿಳೆಯರ ವೇತನವನ್ನು ಹೆಚ್ಚಿಸಬೇಕು ಎಂಬುದಾಗಿತ್ತು. ಪ್ರಸ್ತುತ ನೀಡಲಾಗಿರುವ ಗೌರವ ದಿನ ನಿರ್ವಹಣೆಗೆ ಸಾಕಾಗುತ್ತಿಲ್ಲ ಎಂದು ಆರೋಪಿಸಿದ ಮಹಿಳೆಯರು, ತಮ್ಮ ಸೇವಿಗೆ ತಕ್ಕ ವೇತನ ಹಾಗೂ ಸಾಮಾಜಿಕ ಭದ್ರತೆ ಸೌಲಭ್ಯಗಳನ್ನು ಒದಗಿಸುವಂತೆ ಆಗ್ರಹಿಸಿದರು.

ಪ್ರತಿಭಟನೆ ವೇಳೆ ಮಹಿಳೆಯರು ಜಿಲ್ಲಾಡಳಿತ ಭವನದತ್ತ ಮೆರವಣಿಗೆ ನಡೆಸಿ, ಅಲ್ಲಿದ್ದ ಪೊಲೀಸ್ ಬ್ಯಾರಿಕೇಡ್ ಗಳನ್ನು ತಳ್ಳಿ ಆವರಣ ಪ್ರವೇಶಿಸಲು ಯತ್ನಿಸಿದರು. ಈ ವೇಳೆ ಪೊಲೀಸರು ಅವರನ್ನು ತಡೆದ ಪರಿಣಾಮ ಕೆಲಕಾಲ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು.

ಬಳಿಕ ಪ್ರತಿಭಟನಾ ಕಾರರು ತಮ್ಮ ಬೇಡಿಕೆಗಳ ಮನವಿಯನ್ನು ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಸಲ್ಲಿಸಿ ಶೀಘ್ರವೇ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು. ಬೇಡಿಕೆಗಳು ಈಡೇರದಿದ್ದರೆ ರಾಜ್ಯಾದ್ಯಂತ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವ ಎಚ್ಚರಿಕೆಯನ್ನು ಪ್ರತಿಭಟನಾಕಾರರು ನೀಡಿದರು.

ಕೊಪ್ಪಳ ಪ್ರತಿಭಟನೆ ತೀವ್ರ - ಮುಂಚೂಣಿ ನಾಯಕರನ್ನು ವಶಕ್ಕೆ ಪಡೆದ ಪೊಲೀಸರು :

ಬಿಸಿ ಊಟ ತಯಾರಿಕಾ ಮಹಿಳೆಯರ ಪ್ರತಿಭಟನೆ ತೀವ್ರ ಸ್ವರೂಪ ಪಡೆದ ಹಿನ್ನೆಲೆಯಲ್ಲಿ ಪರಿಸ್ಥಿತಿ ವಿಕೋಪಕ್ಕೆ ಹೋಗುವ ಲಕ್ಷಣಗಳು ಕಂಡು ಬಂದವು. ಪ್ರತಿಭಟನಾಕಾರರು ಜಿಲ್ಲಾ ಆಡಳಿತದ ಭವನದತ್ತ ಮುನ್ನುಗ್ಗಲು ಯತ್ನಿಸಿದ ವೇಳೆ ಪೊಲೀಸರು ತಕ್ಷಣ ಮಧ್ಯ ಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು.

ಪ್ರತಿಭಟನೆಯ ಮುಂಚೂಣಿ ನಾಯಕರನ್ನು ಪೊಲೀಸರು ವರ್ಷಕ್ಕೆ ಪಡೆದಿದ್ದು, ಬಳಿಕ ಪ್ರತಿಭಟನಾಕಾರರನ್ನು ಸಮಾಧಾನಪಡಿಸಿದರು. ಕೆಲಸ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾದರೂ, ಪೊಲೀಸರ ಸೂಕ್ತ ಕ್ರಮದಿಂದ ಪರಿಸ್ಥಿತಿ ನಿಯಂತ್ರಣಕ್ಕೆ ಬಂತು.

ಪ್ರತಿಭಟನಾಕಾರರು ಬಿಸಿಊಟ ತಯಾರಿಕಾ ಮಹಿಳೆಯರ ವೇತನ ಹೆಚ್ಚಳ, ಸೇವಾ ಭದ್ರತೆ ಸೇರಿದಂತೆ ಹಲವು ಬೇಡಿಕೆಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ತಮ್ಮ ಬೇಡಿಕೆಗಳನ್ನು ನಿರ್ಲಕ್ಷಿಸಿದರೆ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವ ಎಚ್ಚರಿಕೆಯನ್ನು ನೀಡಿದರು.

Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online