Belagavi News:
ನವದೆಹಲಿ: ವಿಶ್ವ ಪರಿಸರ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಶುಭಾಶಯ ಕೋರಿದ್ದು. ಪರಿಸರ ಸಂರಕ್ಷಣೆ ಮತ್ತು ಸುಸ್ಥಿರ ಅಭಿವೃದ್ಧಿಯತ್ತ, ಕೇಂದ್ರ ಸರ್ಕಾರದ ಬದ್ಧತೆಯನ್ನು ಮತ್ತೊಮ್ಮೆ ಪುನರುಚ್ಚರಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಸಂದೇಶ ಹಂಚಿಕೊಂಡಿರುವ ಪ್ರಧಾನಿ ಮೋದಿ, ಕಳೆದ ಒಂದು ದಶಕದಲ್ಲಿ ಪರಿಸರ ರಕ್ಷಣೆಗೆ ಸರ್ಕಾರ ಕೈಗೊಂಡಿರುವ ಹಲವು ಮಹತ್ವದ ಕ್ರಮಗಳನ್ನು ಉಲ್ಲೇಖಿಸಿದ್ದಾರೆ. ಹಸಿರು ವಿಸ್ತರಣೆ, ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಸಂಖ್ಯೆಯಲ್ಲಿ ಕಂಡು ಬಂದಿರುವ ಏರಿಕೆ ಸರ್ಕಾರದ ಪರಿಸರಪರ ನೀತಿಗಳ ಯಶಸ್ಸಿನ ಪ್ರತೀಕವಾಗಿದೆ ಎಂದು ಅವರು ಹೇಳಿದ್ದಾರೆ.
"ಪರಿಸರ ಸಂರಕ್ಷಣೆಯಲ್ಲಿ ಸಾಮೂಹಿಕ ಪ್ರಯತ್ನಗಳು, ಪರಿಣಾಮಕಾರಿ ನೀತಿಗಳು, ವಿಜ್ಞಾನ ಮತ್ತು ನಾವಿನ್ಯತೆಗಳ ಮೂಲಕ ಉತ್ತಮ ಬದಲಾವಣೆ ಸಾಧ್ಯ ಎಂಬುದನ್ನು ನಾವು ದೇಶದ ನಾಗರಿಕರಿಗೆ ತೋರಿಸಿದ್ದೇವೆ" ಒಂದು ಪ್ರಧಾನಿ ತಿಳಿಸಿದ್ದಾರೆ.
ಪರಿಸರ ಸಂರಕ್ಷಣೆಗೆ ನಿರಂತವಾಗಿ ಶ್ರಮಿಸುತ್ತಿರುವ ವ್ಯಕ್ತಿಗಳು, ಸಂಘಟನೆಗಳು ಮತ್ತು ಸಮುದಾಯಗಳ ಸೇವೆಯನ್ನು ಅವರು ಪ್ರಶಾಂತಿಸಿದ್ದಾರೆ. ವಿಶ್ವ ಪರಿಸರ ದಿನವು ಪರಿಸರ ರಕ್ಷಣೆ, ಹವಾಮಾನ ಬದಲಾವಣೆಯ ಸವಾಲುಗಳಿಗೆ ಪರಿಹಾರ ಹಾಗೂ ಸುಸ್ಥಿರ ಬೆಳವಣಿಗೆಯ ಗುರಿಗಳತ್ತ ನಮ್ಮ ಬದ್ಧತೆಯನ್ನು ಮತ್ತಷ್ಟು ಬಲಪಡಿಸುವ ಅವಕಾಶವಾಗಿದೆ ಎಂದು ಪ್ರಧಾನ ಮೋದಿ ಅಭಿಪ್ರಾಯಪಟ್ಟಿದ್ದಾರೆ.
ಪರಿಸರ ಸಂರಕ್ಷಣೆ ಮತ್ತು ಅಭಿವೃದ್ಧಿಯ ನಡುವೆ ಸಮತೋಲನ ಸಾಧಿಸುವ ಮೂಲಕ ಹಸಿರು ಹಾಗೂ ಸ್ವಚ್ಛ ಭಾರತ ನಿರ್ಮಾಣಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಅವರು ಹೇಳಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ ಸಂದೇಶದಲ್ಲಿ, ದೇಶದ ಹಸಿರು ಹೋದಿಕೆ ವಿಸ್ತರಣೆ ಮತ್ತು ವನ್ಯಜೀವಿಗಳ ಸಂಖ್ಯೆಯಲ್ಲಿ ಹೆಚ್ಚಳ ಕಂಡು ಬಂದಿರುವುದು ಸರಕಾರದ ಪರಿಸರಪರ ನೀತಿಗಳ ಪ್ರಮುಖ ಯಶಸ್ಸಾಗಿದೆ ಎಂದು ಪ್ರಧಾನಿ ತೀರಿಸಿದ್ದಾರೆ.
"ಪರಿಸರ ರಕ್ಷಿಸುವ ನಿಟ್ಟಿನಲ್ಲಿ ಕಡೆದ 10 ವರ್ಷಗಳಲ್ಲಿ ನಮ್ಮ ಸರ್ಕಾರ ಹಲವು ಪರಿಣಾಮಕಾರಿ ಕ್ರಮಗಳನ್ನು ಕೈಗೊಂಡಿದೆ. ಹಸಿರು ವಿಸ್ತರಣೆ ಮತ್ತು ಪ್ರಾಣಿಗಳ ಸಂರಕ್ಷಣೆ ಕ್ಷೇತ್ರದಲ್ಲಿ ಸಾಧಿಸಿರುವ ದೇಶದ ಹೆಮ್ಮೆಯ ವಿಷಯವಾಗಿದೆ" ಎಂದು ಅವರು ಹೇಳಿದ್ದಾರೆ.
ಭಾರತದ ಜೀವ ವೈವಿಧ್ಯತೆ ವಿಶ್ವದಲ್ಲೇ ವಿಶಿಷ್ಟ ಸ್ಥಾನವನ್ನು ಹೊಂದಿದ್ದು. ಅದು ಲಕ್ಷಾಂತರ ಜೀವಿಗಳು ಮತ್ತು ಜೀವನೋಪಾಯಗಳಿಗೆ ಆಧಾರವಾಗಿದೆ ಎಂದು ಪ್ರಧಾನಿ ಅಭಿಪ್ರಾಯ ಪಟ್ಟಿದ್ದಾರೆ. ಗ್ರೇಟ್ ಇಂಡಿಯನ್ ಬಸ್ಟರ್ಡ್, ಹಿಮ ಚಿರತೆ, ಕರಡಿ ಹಾಗೂ ಚಿರತೆಗಳ ಸಂರಕ್ಷಣೆಗೆ ಕೈಗೊಂಡಿರುವ ಕ್ರಮಗಳು ವನ್ಯಜೀವಿ ಮತ್ತು ಪರಿಸರ ವ್ಯವಸ್ಥೆಗಳ ಪುನಶ್ಚೇತನಕ್ಕೆ ಸರ್ಕಾರದ ನಿರಂತರ ಪದ್ಧತಿಯನ್ನು ಪ್ರತಿಬಿಂಬಿಸುತ್ತವೆ ಎಂದು ತಿಳಿಸಿದ್ದಾರೆ.
ಇದೆ ವೇಳೆ, ತಾಯಿಯ ಹೆಸರಲ್ಲಿ ಒಂದು ಮರ " (ek ped Man ke naam) ಅಭಿಯಾನವು ಪರಿಸರ ಸಂರಕ್ಷಣೆಗೆ ಮಹತ್ವದ ಕೊಡುಗೆ ನೀಡಿದೆ ಎಂದು ಪ್ರಧಾನಿ ಸಂತಸ ವ್ಯಕ್ತಪಡಿಸಿದ್ದಾರೆ. ಈ ಉಪಕ್ರಮದ ಮೂಲಕ ಪ್ರತಿವರ್ಷ ಸುಮಾರು 1.19 ಲಕ್ಷ ಹೆಕ್ಟೇರ್ ಅರಣ್ಯ ವಿಸ್ತರಣೆ ಸಾಧ್ಯವಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ಪ್ರತಿ ವರ್ಷ ಜೂನ್ 5 ರಂದು ಆಚರಿಸಲಾಗುವ ವಿಶ್ವ ಪರಿಸರ ದಿನವು ಪರಿಸರ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸಲು ಮತ್ತು ಜನರನ್ನು ಪರಿಸರ ಸ್ನೇಹಿ ಕ್ರಮಗಳತ್ತ ಪ್ರೇರೇಪಿಸಲು ಪ್ರಮುಖ ವೇದಿಕೆಯಾಗಿದೆ. 1973 ರಿಂದ ವಿಶ್ವಸಂಸ್ಥೆಯ ಪರಿಸರ ಕಾರ್ಯಕ್ರಮದ ನೇತೃತ್ವದಲ್ಲಿ ಆಚರಿಸಲಾಗುತ್ತಿರುವ ಈ ದಿನವು ಇಂದು ವಿಶ್ವದ ಅತಿದೊಡ್ಡ ಪರಿಸರ ಜಾಗೃತಿ ಅಭಿಯಾನಗಿ ಬಳೆದಿದೆ.
2026ರ ವಿಶ್ವ ಪರಿಸರ ದಿನಾಚರಣೆಯ ಅತಿಥ್ಯವನ್ನು Azhar bhaijaan ವಹಿಸಿಕೊಂಡಿದ್ದು. ಪರಿಸರ ಸಮಸ್ಯೆಗಳ ವಿರುದ್ಧ ಜಾಗತಿಕ ಸಹಕಾರ ಮತ್ತು ಸುಸ್ಥಿರ ಅಭಿವೃದ್ಧಿಯ ಮಹತ್ವವನ್ನು ಈ ಕಾರ್ಯಕ್ರಮ ಮತ್ತೊಮ್ಮೆ ಜಗತ್ತಿಗೆ ಸಾರಲಿದೆ.
Also Read:
ಕಲಿಯುಗದಲ್ಲೂ ಜೀವಂತ 'ಶ್ರವಣಕುಮಾರ' : ಅತ್ತೆಯನ್ನು ತಲೆ ಮೇಲೆ ಹೊತ್ತು 260 ಕಿ.ಮೀ ನಡೆದ ಗಾಯಕಿ