<?= $pageTitle ?>
Logo
ಮುಖಪುಟ ಓದುವುದು ಕೇಳು
Politics

ಮಂಗಳೂರು ಪಾಲಿಕೆಗೆ ಚುನಾವಣೆ ಯಾವಾಗ? ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಮಂಗಳೂರು ಪಾಲಿಕೆಗೆ ಚುನಾವಣೆ ಯಾವಾಗ? ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
Summary: The Karnataka High Court has accepted for hearing a petition filed by the Mangalore Municipal Corporation seeking directions for immediate elections, despite the fact that the elections were held 15 months after the expiry of its term. The court, which has issued notices to the state government and the State Election Commission, has sought their response in the case.

belagavi news :

ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ವಿಳಂಬಕ್ಕೆ ಹೈಕೋರ್ಟ್ ಗಂಭೀರ ಗಮನ!

ಅವಧಿ ಮುಗಿದ 15 ತಿಂಗಳು ಕಳೆದರೂ ಮಂಗಳೂರು ಮಹಾನಗರ ಪಾಲಿಕೆಗೆ ಚುನಾವಣೆ ನಡೆಸದ ಹಿನ್ನೆಲೆಯಲ್ಲಿ, ತಕ್ಷಣ ಚುನಾವಣೆ ನಡೆಸುವಂತೆ ನಿರ್ದೇಶನ ನೀಡಲು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಸಂಬಂಧ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ:

ಅತ್ತಾವರ ನಿವಾಸಿ ಹಾಗೂ ಪತ್ರಕರ್ತ ರಹಿಮಾನ್ ಖಾನ್ ಲೋಹಾನಿ ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಮತ್ತು ನ್ಯಾಯಮೂರ್ತಿ ಕೆ.ಎಸ್. ಹೇಮಲೇಖಾ ಅವರಿಂದ ವಿಭಾಗಿಯನ್ನ ನ್ಯಾಯಪೀಠ, ರಾಜ್ಯ ಸರ್ಕಾರ, ರಾಜ್ಯ ಚುನಾವಣಾ ಆಯೋಗ ಹಾಗೂ ಮಂಗಳೂರು ಮಹಾನಗರ ಪಾಲಿಕೆಗೆ ನೋಟಿಸ್ ನೀಡಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸುವಂತೆ ನಿರ್ದೇಶಿಸಿರುವ ನ್ಯಾಯಪೀಠ, ಮುಂದಿನ ವಿಚಾರಣೆಯನ್ನು ಅಗಸ್ಟ್ 25ಕ್ಕೆ ಮುಂದೂಡಿದೆ.

15 ತಿಂಗಳು ಕಳೆದರು ಚುನಾವಣೆ ಇಲ್ಲ; ಮಂಗಳೂರು ಪಾಲಿಕೆಯಲ್ಲಿ ಪ್ರಜಾಸತ್ತಾತ್ಮಕ ಪ್ರತಿನಿಧಿತ್ವದಿಂದ ವಂಚನೆ?

ಸಂವಿಧಾನದ 243- ಯು ವಿಧಿಯ ಪ್ರಕಾರ ಸ್ಥಳೀಯ ಸಂಸ್ಥೆಗಳ ಅವಧಿ ಮುಗಿಯುವ ಮುನ್ನವೇ ಚುನಾವಣೆ ನಡೆಸಬೇಕಿದೆ. ಆದರೆ, ಮಂಗಳೂರು ಮಹಾನಗರ ಪಾಲಿಕೆಗೆ ಕೊನೆಯ ಬಾರಿ 2019ರ ನವಂಬರ್ 12ರಂದು ಚುನಾವಣೆ ನಡೆದಿದ್ದು, 5 ವರ್ಷದ ಅವಧಿ 2025 ರ ಫೆಬ್ರವರಿ 27ರಂದು ಅಂತ್ಯಗೊಂಡಿದೆ. ಅವಧಿ ಮುಗಿದು 15 ತಿಂಗಳ ಕಳೆದರೂ ಇನ್ನೂ ಚುನಾವಣೆ ನಡೆಸಲಾಗಿಲ್ಲ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ಪ್ರಸ್ತುತ ಪಾಲಿಕೆಯ ಆಡಳಿತ ಸರ್ಕಾರ ನೇಮಿಸಿರುವ ಆಡಳಿತಾಧಿಕಾರಿಯ ಕೈಯಲ್ಲಿದ್ದು, ಇದರಿಂದ ಸ್ಥಳೀಯ ಜನರಿಗೆ ಪ್ರಜಾಸತ್ತಾತ್ಮಕ ಪ್ರತಿನಿಧಿತ್ವ ದೊರೆಯುತ್ತಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಅಲ್ಲದೆ, ವಾರ್ಡ್ ಗಳ ಅಭಿವೃದ್ಧಿ ಕಾಮಗಾರಿಗಳು ಕುಂಠಿತಗೊಂಡಿದ್ದು , ಜನರ ಸಮಸ್ಯೆಗಳಿಗೆ ಚುನಾಯಿತ ಪ್ರತಿನಿಧಿಗಳ ಪ್ರಮುಖ ಪರಿಹಾರ ಸಿಗದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅರ್ಜಿದಾರರು ವಾದಿಸಿದ್ದಾರೆ.

ಚುನಾವಣೆ ವಿಳಂಬದ ಕುರಿತು ಮಾಹಿತಿ ಹಕ್ಕು ಕಾಯ್ದೆ (RTI) ಅಡಿಯಲ್ಲಿ ಮಾಹಿತಿ ಕೇಳಿದಾಗಲು, ಈ ವರೆಗೆ ಸರ್ಕಾರದಿಂದ ಯಾವುದೇ ಅಧಿಕೃತ ಆದೇಶ ಅಥವಾ ಸ್ಪಷ್ಟಣೆ ಹೊರ ಬಂದಿಲ್ಲ ಎಂಬ ಉತ್ತರ ದೊರೆತಿದೆ. ಈ ಬೆಳವಣಿಗೆ ಚುನಾವಣಾ ಪ್ರಕ್ರಿಯೆ ವಿಳಂಬದ ಬಗ್ಗೆ ಮತ್ತಷ್ಟು ಪ್ರಶ್ನೆಗಳನ್ನು ಹುಟ್ಟು ಹಾಕಿದೆ.

ಮಂಗಳೂರು ಪಾಲಿಕೆಗೆ ತಕ್ಷಣ ಚುನಾವಣೆ ನಡೆಸಿ: ಹೈಕೋರ್ಟ್ ಗೆ ಅರ್ಜಿದಾರರ ಮನವಿ

ಮಂಗಳೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಉಂಟಾಗಿರುವ ವಿಳಂಬದ ಹಿನ್ನೆಲೆಯಲ್ಲಿ ಹೈಕೋರ್ಟ್ ತಕ್ಷಣ ಮಧ್ಯಪ್ರವೇಶಿಸಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ. ವಾರ್ಡ್ ಗಳ ಮೀಸಲಾತಿ ಪ್ರಕ್ರಿಯೆಯನ್ನು ಶೀಘ್ರ ಅಂತಿಮಗೊಳಿಸಿ ಮಂಗಳೂರು ಮಹಾನಗರ ಪಾಲಿಕೆಗೆ ಕೂಡಲೇ ಸಾರ್ವತ್ರಿಕ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರ ಹಾಗೂ ರಾಜ್ಯ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕು ಎಂದವರು ಕೋರಿದ್ದಾರೆ.

ಚುನಾವಣೆ ನಡೆಯದೆ ಇರುವುದರಿಂದ ಪಾಲಿಕೆಯಲ್ಲಿ ಚುನಾಯಿತ ಜನಪ್ರತಿನಿಧಿಗಳೇ ಇಲ್ಲದಂತಾಗಿದ್ದು, ನಗರ ಆಡಳಿತ ಸಂಪೂರ್ಣವಾಗಿ ಆಡಳಿತಾಧಿಕಾರಿಗಳ ಕೈಯಲ್ಲಿದೆ. ಇದರ ಪರಿಣಾಮವಾಗಿ ನಾಗರಿಕರಿಗೆ ಸಮರ್ಪಕ ಆಡಳಿತ ಮತ್ತು ಜನಪ್ರತಿನಿಧಿಗಳ ಮೂಲಕ ಸಮಸ್ಯೆಗಳ ಪರಿಹಾರ ಸಿಗುತ್ತಿಲ್ಲ ಎಂಬ ವಾದವನ್ನು ಅರ್ಜಿಯಲ್ಲಿ ಮುಂದಿರಿಸಲಾಗಿದೆ.

ನಗರದಲ್ಲಿ ಮೂಲಭೂತ ಸೌಲಭ್ಯಗಳ ಅಭಿವೃದ್ಧಿ ಹಾಗೂ ಸಾರ್ವಜನಿಕ ಸಮಸ್ಯೆಗಳ ಪರಿಹಾರಕ್ಕೂ ಇದರಿಂದ ಹಿನ್ನಡೆ ಯಾಗುತ್ತಿದೆ ಎಂದು ಆರ್ಜಿದಾರರು ಆರೋಪಿಸಿದ್ದಾರೆ. ಆದ್ದರಿಂದ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಪುನಃ ಸ್ಥಾಪಿಸುವ ನೀತಿನಲ್ಲಿ ರಾಜ್ಯ ಸರ್ಕಾರ ಮತ್ತು ರಾಜ್ಯ ಚುನಾವಣಾ ಆಯೋಗಕ್ಕೆ ತಕ್ಷಣ ಚುನಾವಣೆ ನಡೆಸುವ ನಿರ್ದೇಶನ ನೀಡಬೇಕು ಎಂಬ ಹೈಕೋರ್ಟ್ ಗೆ ಮನವಿ ಸಲ್ಲಿಸಲಾಗಿದೆ.

Also Read:

ದೇಶದ ಅತ್ಯುತ್ತಮ ವಾಯುಗು ಗುಣಮಟ್ಟದ ನಗರಗಳಲ್ಲಿ ಬೆಂಗಳೂರು ಮತ್ತು ಚಿಕ್ಕಮಂಗಳೂರು ಮುಂಚೂಣಿ

Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online