ಹಾವೇರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ನವಜಾತ ಶಿಶು ಮೃತಪಟ್ಟಿರುವ ಆರೋಪ ಕೇಳಿಬಂದಿದೆ. ಶೌಚಾಲಯಕ್ಕೆ ತೆರಳುವಾಗ ಮಹಿಳೆಗೆ ಹೆರಿಗೆಯಾದ ಪರಿಣಾಮ ಪೆಟ್ಟಾಗಿ ಮಗು ಪ್ರಾಣಕಳೆದುಕೊಂಡಿದೆ ಎನ್ನಲಾಗಿದೆ. ಆದರೆ, ಆಸ್ಪತ್ರೆ ಅಧಿಕಾರಿಗಳು ಮಾತ್ರ ಬೇರೆಯದ್ದೇ ಹೇಳಿಕೆ ನೀಡಿದ್ದು, ಮಗು ಹೊಟ್ಟೆಯಲ್ಲೇ ಸತ್ತಿತ್ತು ಎಂದಿದ್ದಾರೆ. ಆಸ್ಪತ್ರೆಯ ನಿರ್ಲಕ್ಷ್ಯ ಆರೋಪ ಅಲ್ಲಗಳೆದಿದ್ದಾರೆ.
2025-11-19
ಕಲಬುರಗಿಯ ಚಿತ್ತಾಪುರದಲ್ಲಿ ಪೊಲೀಸರ ಮೇಲೆ ನಡೆದ ಹಲ್ಲೆ ಪ್ರಕರಣ ಹಿಂಪಡೆಯುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಕಲಬುರಗಿ ಪೀಠ ತಾತ್ಕಾಲಿಕ ತಡೆ ನೀಡಿದೆ. 2019ರ ಬಕ್ರೀದ್ ವೇಳೆ ಗೋವು ಸಾಗಾಟ ವಾಹನ ಸೀಜ್ ಮಾಡಿದಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ ಕಲ್ಲು ತೂರಾಟ ನಡೆಸಲಾಗಿತ್ತು. ಈ ಸಂಬಂಧ ಪೊಲೀಸರು ದಾಖಲಿಸಿದ್ದ ಪ್ರಕರಣವನ್ನು ಹಿಂಪಡೆಯಲು ಸಚಿವ ಸಂಪುಟ ನಿರ್ಧರಿಸಿತ್ತು. ಆದರೆ ಸರ್ಕಾರದ ಕ್ರಮ ಪ್ರಶ್ನಿಸಿ ಗಿರೀಶ್ ಭಾರದ್ವಾಜ್ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
2025-11-19
ಬೆಂಗಳೂರಿನ ಪ್ರತಿಷ್ಠಿತ ಮಂತ್ರಿ ಮಾಲ್ಗೆ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿದ್ದಕ್ಕೆ ಬಿಬಿಎಂಪಿ ಮತ್ತೆ ಬೀಗ ಜಡಿದಿದೆ. 30 ಕೋಟಿಗೂ ಅಧಿಕ ತೆರಿಗೆ ಬಾಕಿ ಇರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಈ ಹಿಂದೆ ಹಲವಾರು ಬಾರಿ ತೆರಿಗೆ ಪಾವತಿಸದೆ ಮಾಲ್ ಸೀಜ್ ಆಗಿತ್ತು. ತೆರಿಗೆ ಕಟ್ಟದ ಕಾರಣ ಮಾಲ್ ಸಿಬ್ಬಂದಿ ಹಾಗೂ ಮಾಲೀಕರು ಕಂಗಾಲಾಗಿದ್ದು, ಬಿಬಿಎಂಪಿ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ.
2025-11-19
ಬೆಂಗಳೂರಿನ ವ್ಯಕ್ತಿಯೊಬ್ಬರು ಕ್ರಿಪ್ಟೋ ಕರೆನ್ಸಿ ಟ್ರೇಡಿಂಗ್ ಹೆಸರಿನಲ್ಲಿ ಸೈಬರ್ ವಂಚನೆಗೆ ಒಳಗಾಗಿ ಲಕ್ಷ ಲಕ್ಷ ಹಣ ಕಳೆದುಕೊಂಡಿದ್ದಾರೆ. ಇನ್ಸ್ಟಾಗ್ರಾಂ ಮತ್ತು ಟೆಲಿಗ್ರಾಂ ಮೂಲಕ ಪರಿಚಯವಾದ ಖದೀಮರು ಅಧಿಕ ಲಾಭದ ಆಮಿಷವೊಡ್ಡಿ ಹಣ ಹೂಡಿಸುವಂತೆ ಪ್ರೇರೇಪಿಸಿದ್ದರು. ಲಾಭಾಂಶ ನೀಡುವ ನೆಪದಲ್ಲಿ ಹೆಚ್ಚು ಹಣ ಹಾಕಿಸಿಕೊಂಡು, ಕೊನೆಗೆ ವಿವಿಧ ಶುಲ್ಕಗಳ ಹೆಸರಿನಲ್ಲಿ ವಂಚಿಸಿದ್ದಾರೆ.
2025-11-19
ಇಂದು ಪ್ಯಾಲೇಸ್ ಗ್ರೌಂಡ್ಸ್ನಲ್ಲಿ ನಡೆಯುವ KSPCB ಗೋಲ್ಡನ್ ಜೂಬಿಲಿ ಕಾರ್ಯಕ್ರಮದಿಂದ ಬೆಂಗಳೂರಿನಲ್ಲಿ ಭಾರಿ ಸಂಚಾರ ದಟ್ಟಣೆ ನಿರೀಕ್ಷಿಸಲಾಗಿದೆ. ಕಾರ್ಯಕ್ರಮದಲ್ಲಿ ಸುಮಾರು 80,000 ಜನರು ಭಾಗವಹಿಸುವ ನಿರೀಕ್ಷೆಯಿದ್ದು, ಸದಾಶಿವನಗರ, ಬಳ್ಳಾರಿ ರಸ್ತೆ, ಸಿ.ವಿ. ರಾಮನ್ ರಸ್ತೆಗಳಲ್ಲಿ ಮಾರ್ಗ ಬದಲಾವಣೆಯಾಗಿದೆ. ವಿಮಾನ ನಿಲ್ದಾಣ, ಯಶವಂತಪುರದಿಂದ ಬರುವವರಿಗೆ ನಿರ್ದಿಷ್ಟ ಬದಲಿ ಮಾರ್ಗಗಳನ್ನು ಸೂಚಿಸಲಾಗಿದೆ. ಆಯ್ದ ಪ್ರದೇಶಗಳಲ್ಲಿ ವಾಹನ ನಿಲುಗಡೆ ನಿಷೇಧಿಸಲಾಗಿದೆ.
2025-11-19
Karnataka Weather: ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಇಂದು ಲಘು ಮಳೆಯಾಗುವ ಮುನ್ಸೂಚನೆಯಿದ್ದು, ಕರಾವಳಿಯ ಜಿಲ್ಲೆಗಳಲ್ಲಿ ಮತ್ತುಉತ್ತರ ಒಳನಾಡು ಪ್ರದೇಶಗಳಲ್ಲಿ ಒಣ ಹವೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕಲ್ಯಾಣ ಕರ್ನಾಟಕದ ತಾಪಮಾನ ಇನ್ನಷ್ಟು ಕುಸಿಯುವ ಸಾಧ್ಯೆತೆ ಇದೆ ಎಂದು ಇಲಾಖೆ ತಿಳಿಸಿದೆ.
2025-11-19
ಬಿಹಾರದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಎನ್ಡಿಎ ಮೈತ್ರಿಕೂಟ ಬಹುಮತ ಗಳಿಸಿತ್ತು. ಇದೀಗ 10ನೇ ಬಾರಿಗೆ ಬಿಹಾರ ಮುಖ್ಯಮಂತ್ರಿಯಾಗಿ ನವೆಂಬರ್ 20ರಂದು ನಿತೀಶ್ ಕುಮಾರ್(Nitish Kumar) ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಎನ್ಡಿಎ ಮೈತ್ರಿಕೂಟದೊಳಗೆ ಸಭೆಗಳು ನಡೆಯುತ್ತಿದ್ದು, ಸಚಿವ ಸಂಪುಟ ಹಂಚಿಕೆ ಕುರಿತು ಚರ್ಚೆಗಳು ನಡೆಯುತ್ತಿವೆ. ಏತನ್ಮಧ್ಯೆ, ಲಾಲು ಪ್ರಸಾದ್ ಯಾದವ್ ಕುಟುಂಬದೊಳಗಿನ ಬಿರುಕು ರಾಜಕೀಯ ವಲಯವನ್ನು ಬಿಸಿ ಮಾಡಿದೆ.
2025-11-19
ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿಗಳು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಯಕ್ಷಗಾನ ಕಲಾವಿದರು ಮೇಳಕ್ಕೆಂದು 6-8 ತಿಂಗಳು ತಿರುಗಾಟದಲ್ಲೇ ಇರುವುದರಿಂದ ಅವರಿಗೆ ಯಾರೂ ಹೆಣ್ಣು ಕೊಡುತ್ತಿರಲಿಲ್ಲ. ಸ್ತ್ರೀವೇಷದ ಕಲಾವಿದ ಏನಾದರೂ ಸಲಿಂಗಕಾಮ ನಿರಾಕರಿಸಿದ್ದರೆ, ಭಾಗವತರು ಮರು ದಿವಸ ಅವರಿಗೆ ಪದ್ಯವನ್ನೇ ಕೊಡುತ್ತಿರಲಿಲ್ಲ ಎಂದಿದ್ದಾರೆ.
2025-11-19
YUVA AI for ALL: ಭಾರತ ಸರ್ಕಾರವು ಭಾರತೀಯ ಯುವಕರಿಗಾಗಿ ಯುವ ಎಐ ಫಾರ್ ಆಲ್ ಎನ್ನುವ ಎಐ ಬಗೆಗಿನ ಕೋರ್ಸ್ ಆರಂಭಿಸಿದೆ. ಕೃತಕ ಬುದ್ಧಿಮತ್ತೆಯ ಹೆಚ್ಚುತ್ತಿರುವ ಕ್ರೇಜ್ ಹಾಗೂ ಅಗತ್ಯಗಳನ್ನು ಗುರುತಿಸಿ ಭಾರತ ಸರ್ಕಾರದ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯವು ಎಲ್ಲರಿಗೂ ‘‘ಯುವ ಎಐ’’ ಎಂಬ ಉಚಿತ ಎಐ ಕೋರ್ಸ್ ಅನ್ನು ಪ್ರಾರಂಭಿಸಿದೆ. ಈ ಉಚಿತ ರಾಷ್ಟ್ರೀಯ ಕೋರ್ಸ್ ಮೂಲಕ ಪ್ರತಿಯೊಬ್ಬ ಭಾರತೀಯನಿಗೂ ಕೃತಕ ಬುದ್ಧಿಮತ್ತೆ ಬ್ಗಗೆ ಶಿಕ್ಷಣ ನೀಡುವ ಗುರಿಯನ್ನು ಹೊಂದಿದೆ.
2025-11-19
ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಆರ್ಜೆಡಿ ಹೀನಾಯವಾಗಿ ಸೋತ ಬಳಿಕ, ಲಾಲು ಪ್ರಸಾದ್ ಯಾದವ್ ಮನೆಯಲ್ಲಿ ಕುದಿಯುತ್ತಿದ್ದ ಕುಟುಂಬ ಕಲಹ ಬೀದಿಗೆ ಬಂದಿದೆ. ತೇಜಸ್ವಿ ಯಾದವ್ ಮತ್ತು ಅವರ ಆಪ್ತರಿಂದ ಅವಮಾನಕ್ಕೊಳಗಾಗಿರುವುದಾಗಿ ಆರೋಪಿಸಿ ಇತ್ತೀಚೆಗೆ ರಾಜಕೀಯದಿಂದ ಹೊರನಡೆಯುವುದಾಗಿ ಘೋಷಿಸಿದ್ದ ಲಾಲು ಯಾದವ್ ಅವರ ಪುತ್ರಿ ರೋಹಿಣಿ ಆಚಾರ್ಯ ಸಾಮಾಜಿಕ ಮಾಧ್ಯಮದಲ್ಲಿ ಸಂವೇದನಾಶೀಲ ವೀಡಿಯೊವನ್ನು ಹಂಚಿಕೊಂಡಿದ್ದು, ವಿವಾದವನ್ನು ಮತ್ತಷ್ಟು ಹೆಚ್ಚಾಗಿದೆ.
2025-11-19
ಭಾರತದೊಳಗೆ ದೊಡ್ಡ ರಾಸಾಯನಿಕ ದಾಳಿ ನಡೆಸಲು ಮುಂದಾಗಿ ಜೈಲು ಪಾಲಾಗಿದ್ದ ಅಹ್ಮದ್ ಮೇಲೆ ಸಹ ಕೈದಿಗಳು ಸಬರಮತಿ ಜೈಲಿನಲ್ಲಿ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ಮೂಲಗಳು ಹೇಳುವಂತೆ ಹೊಡೆತ ಎಷ್ಟು ತೀವ್ರವಾಗಿತ್ತೆಂದರೆ, ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿ ಮಧ್ಯಪ್ರವೇಶಿಸಿ ಅವನ ಜೀವ ಉಳಿಸಬೇಕಾಯಿತು. ಸೆಲ್ ಹೊರಗೆ ನಿಂತಿದ್ದ ಕಾವಲುಗಾರರು ಗದ್ದಲ ಕೇಳಿದ ತಕ್ಷಣ, ಅವರು ಧಾವಿಸಿ ಬಂದು ದಾಳಿಕೋರರಿಂದ ಅವನನ್ನು ದೂರ ಎಳೆದರು.
2025-11-19
ದೆಹಲಿಯಲ್ಲಿ ಸ್ಫೋಟಕ್ಕೆ ಕಾರಣನಾಗಿದ್ದ ಉಗ್ರ ಉಮರ್ ಘಟನೆಗೂ ಮುನ್ನ ಸಹೋದರನಿಗೆ ಏನು ಹೇಳಿದ್ದ ಗೊತ್ತೇ? ಈ ಘಟನೆಯಲ್ಲಿ ಉಗ್ರ ಉಮರ್ ಹಾಗೂ 15 ಮಂದಿ ನಾಗರಿಕರು ಪ್ರಾಣ ಕಳೆದುಕೊಂಡಿದ್ದರು. ಈ ದಾಳಿ ನಡೆಸುವುದಕ್ಕೆ ಒಂದು ವಾರ ಮೊದಲು ಉಗ್ರ ಉಮರ್ ಪುಲ್ವಾಮಾನದಲ್ಲಿರುವ ತನ್ನ ಮನೆಗೆ ಹೋಗಿದ್ದ, ತನ್ನ ಮೊಬೈಲ್ ಅನ್ನು ಸಹೋದರನಿಗೆ ಕೊಟ್ಟು ಬಂದಿದ್ದ ಎನ್ನುವ ಮಾಹಿತಿ ಲಭ್ಯವಾಗಿದೆ. ಈ ಫೋನ್ನಿಂದ ಉಮರ್ನ ವೀಡಿಯೊವನ್ನು ವಶಪಡಿಸಿಕೊಳ್ಳಲಾಗಿದ್ದು, ಅದರಲ್ಲಿ ಆತ ಆತ್ಮಾಹುತಿ ಬಾಂಬ್ ದಾಳಿಯನ್ನು ಹುತಾತ್ಮ ಕಾರ್ಯಾಚರಣೆ ಎಂದು ವಿವರಿಸಿದ್ದಾನೆ.
2025-11-19
ಬಿಹಾರದಲ್ಲಿ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಜೆಡಿಯು ಪಕ್ಷದಿಂದ ಹೊಸದಾಗಿ ಆಯ್ಕೆಯಾದ 85ಶಾಸಕರು ಮತ್ತೊಮ್ಮೆ ಮುಖ್ಯಮಂತ್ರಿ ನಿತೀಶ್ ಕುಮಾರ್(Nitish Kumar) ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಿದ್ದಾರೆ. ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್ಡಿಎ) ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ನಂತರ, ನಿತೀಶ್ ಕುಮಾರ್ ರಾಜಭವನಕ್ಕೆ ತೆರಳಿ ಸರ್ಕಾರ ರಚಿಸಲು ತಮ್ಮ ಪ್ರಸ್ತಾವನೆಯನ್ನು ಮಂಡಿಸಲಿದ್ದಾರೆ.
2025-11-19
ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣದಲ್ಲಿ 11 ಜನರ ಸಾವಿಗೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಚಾರ್ಜ್ ಶೀಟ್ ಸಿದ್ಧಪಡಿಸಿದ್ದಾರೆ. ಆರ್ಸಿಬಿ, ಕೆಎಸ್ಸಿಎ ಮತ್ತು ಡಿಎನ್ಎ ಸಂಸ್ಥೆಗಳು ಘಟನೆಗೆ ನೇರ ಹೊಣೆ ಎಂದು ತನಿಖೆ ವೇಳೆ ಸಾಬೀತಾಗಿದೆ. ಸರಿಯಾದ ಯೋಜನೆ ಇಲ್ಲದಿರುವುದು, ಟಿಕೆಟ್ ಗೊಂದಲ ಹಾಗೂ ಭದ್ರತಾ ವೈಫಲ್ಯ ಸಾವಿಗೆ ಕಾರಣ ಎಂದು ಚಾರ್ಜ್ಶೀಟ್ನಲ್ಲಿ ತಿಳಿಸಲಾಗಿದೆ. 2,200ಕ್ಕೂ ಅಧಿಕ ಪುಟಗಳ ಚಾರ್ಜ್ ಶೀಟ್ ಸಲ್ಲಿಕೆಗೆ ಸಿದ್ಧವಾಗಿದೆ.
2025-11-19
ಪತ್ರಕರ್ತರಿಗೆ ಭಾರತೀಯ ರೈಲ್ವೇಯಲ್ಲಿ ನೀಡುತ್ತಿದ್ದ ಶೇ. 50ರಷ್ಟು ಪ್ರಯಾಣ ರಿಯಾಯಿತಿಯನ್ನು ಮರು ಜಾರಿಗೊಳಿಸುವಂತೆ ರೈಲ್ವೇ ಸಚಿವರಿಗೆ ವಿಧಾನ ಪರಿಷತ್ ಸದಸ್ಯ ಶಿವಕುಮಾರ್ ಕೆ. ಆಗ್ರಹಿಸಿದ್ದಾರೆ. ಕೋವಿಡ್-19 ಕಾರಣದಿಂದ ಹಿಂಪಡೆದ ಈ ಸೌಲಭ್ಯವು ಪತ್ರಕರ್ತರು ತಮ್ಮ ವೃತ್ತಿಪರ ಕರ್ತವ್ಯ ನಿರ್ವಹಿಸಲು, ಸಾರ್ವಜನಿಕ ಸೇವೆ ಮತ್ತು ಗ್ರೌಂಡ್ ರಿಪೋರ್ಟಿಂಗ್ಗೆ ಅತ್ಯಗತ್ಯವಾಗಿದೆ. ಹೆಚ್ಚುತ್ತಿರುವ ಸಾರಿಗೆ ವೆಚ್ಚದ ಹಿನ್ನೆಲೆಯಲ್ಲಿ ಇದು ಪತ್ರಿಕೋದ್ಯಮಕ್ಕೆ ಬಹುಮುಖ್ಯ ಎಂದು ಅವರು ಮನವರಿಕೆ ಮಾಡಿದ್ದಾರೆ.
2025-11-19
ವಿಜಯಪುರ ಜಿಲ್ಲೆಯ ಇಂಡಿಯಲ್ಲಿ ತಾಯಿ-ಮಗ ಸೇರಿ ಬ್ಯಾಂಕ್ ಮ್ಯಾನೇಜರ್ಗೆ ಹನಿಟ್ರ್ಯಾಪ್ ಮಾಡಿ ಬ್ಲ್ಯಾಕ್ಮೇಲ್ ಮಾಡಿದ್ದಾರೆ. ದೈಹಿಕ ಸಂಬಂಧದ ವಿಡಿಯೋ ಮಾಡಿ 10 ಲಕ್ಷ ರೂಪಾಯಿ ಸುಲಿಗೆಗೆ ಯತ್ನಿಸಿದ್ದರು. ಮ್ಯಾನೇಜರ್ ದೂರು ನೀಡಿದ ನಂತರ ನಾಲ್ವರಲ್ಲಿ ಪೈಕಿ ಆರೋಪಿ ಬಂಧಿತನಾಗಿದ್ದಾನೆ. ಇದು ಸರಣಿ ಹನಿಟ್ರ್ಯಾಪ್ ಪ್ರಕರಣಗಳ ಭಾಗವಾಗಿರುವ ಶಂಕೆ ವ್ಯಕ್ತವಾಗಿದೆ.
2025-11-19
ಕೇಂದ್ರ ಚುನಾವಣಾ ಆಯೋಗ(Election Commission Of India)ವನ್ನು ಬೆಂಬಲಿಸಿ ನ್ಯಾಯಮೂರ್ತಿಗಳು, ನಿವೃತ್ತ ಅಧಿಕಾರಿಗಳು ಬಹಿರಂಗ ಪತ್ರ ಬರೆದಿದ್ದಾರೆ. ಚುನಾವಣಾ ಆಯೋಗದಂತಹ ಸಾಂವಿಧಾನಿಕ ಸಂಸ್ಥೆಗಳ ಮೇಲೆ ಕಳಂಕ ಹೊರಿಸಲು ಯತ್ನಿಸುತ್ತಿರುವ ಕಾಂಗ್ರೆಸ್ ಪಕ್ಷದ ವಿರುದ್ಧವಾಗಿ 16 ನ್ಯಾಯಮೂರ್ತಿಗಳು, 123 ನಿವೃತ್ತ ಅಧಿಕಾರಿಗಳು, 133 ಸಶಸ್ತ್ರ ಪಡೆಗಳ ನಿವೃತ್ತ ಅಧಿಕಾರಿಗಳು ಸೇರಿದಂತೆ 272 ಗಣ್ಯ ನಾಗರಿಕರ ಗುಂಪು ಪತ್ರ ಬರೆದಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಅನ್ನು ಖಂಡಿಸಿ ಬಹಿರಂಗ ಪತ್ರ ಬರೆಯಲಾಗಿದೆ.
2025-11-19
ಇಸ್ರೇಲ್ ಪ್ಯಾನೆಸ್ತೀನಿಯನ್ನರಿರುವ ನಿರಾಶ್ರಿತರ ಶಿಬಿರದ ಮೇಲೆ ವೈಮಾನಿಕ ದಾಳಿ ನಡೆಸಿದೆ. ಲೆಬನಾನ್ನಲ್ಲಿ ಈ ದಾಳಿ ನಡೆದಿದೆ. ಘಟನೆಯಲ್ಲಿ 13 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಕರಾವಳಿ ನಗರ ಸಿಡಾನ್ನ ಹೊರವಲಯದಲ್ಲಿರುವ ಐನ್ ಎಲ್-ಹಿಲ್ವೆ ನಿರಾಶ್ರಿತರ ಶಿಬಿರದಲ್ಲಿರುವ ಮಸೀದಿಯ ಪಾರ್ಕಿಂಗ್ ಸ್ಥಳದಲ್ಲಿ ಡ್ರೋನ್ ದಾಳಿ ನಡೆದಿದೆ. ಇಸ್ರೇಲ್ ಮತ್ತು ಅದರ ಸೈನ್ಯದ ವಿರುದ್ಧ ದಾಳಿಗೆ ಸಿದ್ಧತೆ ನಡೆಸುತ್ತಿದ್ದ ಹಮಾಸ್ ತರಬೇತಿ ಆವರಣದ ಮೇಲೆ ದಾಳಿ ನಡೆಸಿರುವುದಾಗಿ ಇಸ್ರೇಲ್ ಸೇನೆ ತಿಳಿಸಿದೆ.
2025-11-19
ಅಥಣಿ ಕೋರ್ಟ್ ಆವರಣದಲ್ಲೇ ಮಹಿಳೆಯ ಮೇಲೆ ಹಲ್ಲೆ ಮಾಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
2025-11-19
ಪುಟ್ಟಪರ್ಥಿಯಲ್ಲಿ ನಡೆದ ಸತ್ಯ ಸಾಯಿ ಬಾಬಾ ಜನ್ಮದಿನಾಚರಣೆಯಲ್ಲಿ ಐಶ್ವರ್ಯಾ ರೈ ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದರು. ಈ ವಿಡಿಯೋ ಸಖತ್ ವೈರಲ್ ಆಗಿದೆ. ಸಚಿನ್ ತೆಂಡೂಲ್ಕರ್ ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ದರು. ಮಾನವೀಯತೆಯ ಬಗ್ಗೆ ಮಾತನಾಡಿದ ಐಶ್ವರ್ಯಾ, ಮೋದಿ ಉಪಸ್ಥಿತಿಗೆ ಧನ್ಯವಾದ ಅರ್ಪಿಸಿ, ಸಾಯಿ ಬಾಬಾ ಸಂದೇಶ ಸ್ಮರಿಸಿದರು.
2025-11-19
ಪ್ರಕರಣ ರದ್ದತಿ ಕೋರಿ ಎಚ್.ಡಿ.ರೇವಣ್ಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಐ. ಅರುಣ್ ಅವರಿದ್ದ ಏಕಸದಸ್ಯ ಪೀಠ, ಅರ್ಜಿಯನ್ನು ಭಾಗಶಃ ಪುರಸ್ಕರಿಸಿದೆ.
2025-11-19
ಆಧ್ಯಾತ್ಮಿಕ ನಾಯಕ ಸತ್ಯಸಾಯಿ ಬಾಬಾ ಅವರನ್ನು ಸಾರ್ವತ್ರಿಕ ಪ್ರೀತಿಯ ಸಾಕಾರ ಎಂದು ಬಣ್ಣಿಸಿರುವ ಪ್ರಧಾನಿ ನರೇಂದ್ರ ಮೋದಿ, ಆಧ್ಯಾತ್ಮಿಕ ನಾಯಕರ ಪ್ರೀತಿ ಮತ್ತು ಸೇವೆಯ ಸಂದೇಶವು ಪ್ರಪಂಚದಾದ್ಯಂತ ಲಕ್ಷಾಂತರ ಜನರಿಗೆ ಸ್ಫೂರ್ತಿ ನೀಡುತ್ತಿದೆ ಎಂದು ಹೇಳಿದ್ದಾರೆ. ಆಂಧ್ರಪ್ರದೇಶದ ಶ್ರೀ ಸತ್ಯಸಾಯಿ ಜಿಲ್ಲೆಯ ಪುಟ್ಟಪರ್ತಿಯಲ್ಲಿ ಸತ್ಯಸಾಯಿ ಬಾಬಾ ಅವರ ಶತಮಾನೋತ್ಸವ ಆಚರಣೆಯಲ್ಲಿ ಪ್ರಧಾನಿ ಮೋದಿ ಈ ಹೇಳಿಕೆ ನೀಡಿದ್ದಾರೆ.
2025-11-19
ಕಬ್ಬಿನ ಎಫ್ಆರ್ಪಿ ಹೆಚ್ಚಳ, ಸಕ್ಕರೆ ರಫ್ತು ನೀತಿಯಲ್ಲಿ ಸ್ಥಿರತೆ, ರಾಜ್ಯದ ಸಕ್ಕರೆ ಕಾರ್ಖಾನೆಗಳಿಗೆ ಕೇಂದ್ರದ ಸಹಾಯಧನ ಮತ್ತು ರೈತರ ಬಾಕಿ ಪಾವತಿಗೆ ತ್ವರಿತ ಕ್ರಮಗಳನ್ನು ಕೈಗೊಳ್ಳುವಂತೆ ಸಚಿವ ತಿಮ್ಮಾಪುರ ಒತ್ತಾಯಿಸಿದ್ದಾರೆ.
2025-11-19
ಬಾಬಾ ಸಿದ್ದಿಕಿ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಗ್ಯಾಂಗ್ಸ್ಟರ್ ಅನ್ಮೋಲ್ ಬಿಷ್ಣೋಯ್(Anmol Bishnoi)ನನ್ನು ಅಮೆರಿಕ ಗಡಿಪಾರು ಮಾಡಿದ್ದು, ದೆಹಲಿಯಲ್ಲಿ ಎನ್ಐಎ ಅಧಿಕಾರಿಗಳು ಆತನನ್ನು ವಶಕ್ಕೆ ಪಡೆದಿದ್ದಾರೆ. ಅನ್ಮೋಲ್ ಬಿಷ್ಣೋಯ್ನನ್ನು ವಿಮಾನ ನಿಲ್ದಾಣದಿಂದ ನೇರವಾಗಿ ಪಟಿಯಾಲ ಹೌಸ್ ನ್ಯಾಯಾಲಯಕ್ಕೆ ಕರೆದೊಯ್ಯಲಾಯಿತು. ವಿಮಾನ ನಿಲ್ದಾಣಕ್ಕೆ ಆಗಮಿಸುವ ಮುನ್ನ ಬುಧವಾರ ಇಂದಿರಾ ಗಾಂಧಿ ಅಂತರಾಷ್ಟ್ರೀಯ (ಐಜಿಐ) ವಿಮಾನ ನಿಲ್ದಾಣದಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿತ್ತು.
2025-11-19
ದಕ್ಷಿಣ ಕರ್ನಾಟಕದ ಶಾಸಕರು ಉತ್ತರ ಕರ್ನಾಟಕದ ಜನರ ಸಮಸ್ಯೆ ಚರ್ಚಿಸುತ್ತಾರೆ. ಆದರೆ ಉತ್ತರ ಕರ್ನಾಟಕದ ಶಾಸಕರು ಇಲ್ಲಿಯ ಸಮಸ್ಯೆ ಬಗ್ಗೆ ಚರ್ಚಿಸುವುದಿಲ್ಲ ಎಂದು ಬಸವರಾಜ್ ಹೊರಟ್ಟಿ ಹೇಳಿದರು.
2025-11-19
Lakhs_rupees_stolen_Bengaluru_man_cryptocurrency
Nitish_Kumar_take_oath_Bihar_CM
You_too_can_become_an_AI_expert
When_time_donate_kidney_father_son
Dr_Ahmed_imprisoned_Sabarmati_plotting_ricin_attack
© gokakica.in. All Rights Reserved. Designed by Image Computer Academy