ಪೆಟ್ರೋಲ್ ಡೀಸೆಲ್, ಸಿಎನ್ಜಿ ವಾಹನಗಳ ಬಳಿಕ ಎಲೆಕ್ಟ್ರಿಕ್ ವಾಹನಗಳ ಕ್ರೇಜ್ ಇತ್ತೀಚೆಗೆ ಹೆಚ್ಚಾಗಿದೆ. ಗೋ ಗ್ರೀನ್ ಎಂದು ದಿನದಿಂದ ದಿನಕ್ಕೆ ಎಲೆಕ್ಟ್ರಿಕ್ ವಾಹನಗಳು ಹೆಚ್ಚಾಗಿ ರಸ್ತೆಗೆ ಇಳಿಯುತ್ತಿವೆ. ಆದರೆ ಚಾರ್ಜಿಂಗ್ ಸ್ಟೇಶನ್ಗಳು ಮಾತ್ರ ಬೆಂಗಳೂರು ಸಹಿತ ರಾಜ್ಯದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಇಲ್ಲ. ಹೀಗಾಗಿಯೇ ದೂರದ ಪ್ರಯಾಣ ನಡೆಸುವ ಇವಿ ಚಾಲಕರಿಗೆ ಬೆಸ್ಕಾಂ ಸಿಹಿ ಸುದ್ದಿಯೊಂದನ್ನು ನೀಡಿದೆ.
2025-11-05
ನಂಜನಗೂಡು ತಾಲೂಕಿನ ಹುಸ್ಕೂರು ಕೆರೆಯಲ್ಲಿ ಮೊಸಳೆ ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.
2025-11-05
ಇಪಿಎಫ್ಒ ನೌಕರರ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಹಣ ದುರ್ಬಳಕೆ ಮಾಡಿಕೊಂಡ ಆರೋಪದ ಮೇಲೆ ಇಬ್ಬರನ್ನು ಪೊಲೀಸರು ಬಂಧನ ಮಾಡಿದ್ದಾರೆ.
2025-11-05
ಮಂಗಳವಾರ ನಡೆದ ನ್ಯೂಯಾರ್ಕ್ ನಗರದ ಮೇಯರ್ ಚುನಾವಣೆಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ರಾಜಕೀಯ ಪ್ರತಿಸ್ಪರ್ಧಿ ಜೋಹ್ರಾನ್ ಮಮ್ದಾನಿ ಐತಿಹಾಸಿಕ ಗೆಲುವು ಸಾಧಿಸಿದರು. ಮಾಜಿ ಗವರ್ನರ್ ಆಂಡ್ರ್ಯೂ ಕ್ಯುಮೊ ಮತ್ತು ರಿಪಬ್ಲಿಕನ್ ಕರ್ಟಿಸ್ ಸ್ಲಿವಾ ಅವರನ್ನು ಸೋಲಿಸಿದರು. 34 ವರ್ಷದ ಮಮ್ದಾನಿ ನ್ಯೂಯಾರ್ಕ್ ನಗರದ ಅತ್ಯಂತ ಕಿರಿಯ ಮತ್ತು ಮೊದಲ ಮುಸ್ಲಿಂ ಮೇಯರ್ ಆಗಲಿದ್ದಾರೆ. ಅವರ ಗೆಲುವಿನ ನಂತರ, ನ್ಯೂಯಾರ್ಕ್ ನಗರದ ಜೋಹ್ರಾನ್ ಮಮ್ದಾನಿ ಅವರ ಪ್ರಚಾರ ಕೇಂದ್ರ ಕಚೇರಿಯ ಹೊರಗೆ ನೂರಾರು ಬೆಂಬಲಿಗರು ಜಮಾಯಿಸಿ ಫ್ರೀ ಪ್ಯಾಲೆಸ್ತೀನ್ ಎಂದು ಘೋಷಣೆ ಕೂಗಿದರು.
2025-11-05
ಒಂದೇ ವರ್ಷ 65,000 ಕೋಟಿ ತೆರಿಗೆ ಹಾಕಿದರೂ ಇನ್ನೂ ಭಿಕ್ಷೆ ಬೇಡುವುದು ನಿಂತಿಲ್ಲ. ಹಿಮಾಚಲ ಪ್ರದೇಶ, ಕೇರಳದಂತೆ ಕರ್ನಾಟಕ ಸರ್ಕಾರವು ಪಾಪರ್ ಆಗಿದೆ ಎಂದು ಆರ್ ಅಶೋಕ್ ಲೇವಡಿ ಮಾಡಿದ್ದಾರೆ.
2025-11-05
ತಮ್ಮಿಂದ ಸರ್ಕಾರ ವಶಪಡಿಸಿಕೊಂಡ ಜಮೀನಿಗೆ ಪರಿಹಾರ ನೀಡಿಲ್ಲವೆಂದು ಆರೋಪಿಸಿ ಮಂಡ್ಯದಲ್ಲಿ ರೈತ ಆತ್ಮಹತ್ಯೆ ಪ್ರಕರಣದ ವಿಚಾರವಾಗಿ ಮಹತ್ವದ ದಾಖಲೆ ಬಹಿರಂಗಗೊಂಡಿದೆ. ಆ ಮೂಲಕ ಮೃತ ರೈತ ಮಾಡಿದ್ದ ಆರೋಪ ಹಾಗಿದ್ದರೆ ಸುಳ್ಳಾ ಎಂಬ ಪ್ರಶ್ನೆ ಉದ್ಭವಿಸಿದ್ದು, ಕುಟುಂಬಸ್ಥರು ತಮ್ಮ ಆರೋಪಗಳಿಗೆ ಸೂಕ್ತ ದಾಖಲೆ ನೀಡಿಲ್ಲ ಎಂಬ ವಿಷಯವೂ ಬೆಳಕಿಗೆ ಬಂದಿದೆ.
2025-11-05
ಕಬ್ಬಿಗೆ ಕನಿಷ್ಠ ಬೆಂಬಲ ಬೆಲೆಗೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಗುರ್ಲಾಪುರ ಗ್ರಾಮದಲ್ಲಿ ರೈತರ ಪ್ರತಿಭಟನೆ ಏಳನೇ ದಿನಕ್ಕೆ ಕಾಲಿಟ್ಟಿದೆ. ಸರ್ಕಾರದ ವಿರುದ್ಧ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
2025-11-05
ಕಬ್ಬು ಬೆಳೆಗಾರರು ನಡೆಸುತ್ತಿರುವ ಅಹೋರಾತ್ರಿ ಪ್ರತಿಭಟನೆಗೆ ಬೆಂಬಲ ನೀಡಿರುವ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು, ಇಲ್ಲಿನ ರಾಷ್ಟ್ರೀಯ ಹೆದ್ದಾರಿ ತಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
2025-11-05
ಕರ್ನಾಟಕ ಸರ್ಕಾರ ಯೋಜನೆಯೊಂದನ್ನು ಪಿಯು ವಿದ್ಯಾರ್ಥಿಗಳಿಗೂ ವಿಸ್ತರಿಸಲು ಚಿಂತನೆ ನಡೆಸಿದೆ. ಮಕ್ಕಳ ದಿನಾಚರಣೆಯಂದು ಈ ಬಗ್ಗೆ ಅಧಿಕೃತ ಘೋಷಣೆ ಮಾಡುವ ಸಾಧ್ಯತೆಯಿದ್ದು, ಇದರಿಂದ ಗ್ರಾಮೀಣ ಭಾಗದ 3 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ಹಾಗಾದ್ರೆ, ಏನದು ಯೋಜನೆ? ಎನ್ನುವ ಸಂಪೂರ್ಣ ವಿವರ ಈ ಕೆಳಗಿನಂತಿದೆ.
2025-11-05
ಮಂಡ್ಯ ಡಿಸಿ ಕಚೇರಿ ಬಳಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ರೈತ ಮಂಜೇಗೌಡ ಎಂಬುವರು ಚಿಕಿತ್ಸೆ ಫಲಿಸದೇ ಇಂದು ಮೃತಪಟ್ಟಿದ್ದು, ಮೃತ ರೈತನ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಲಾಗಿದೆ.
2025-11-05
ಬಾಂಗ್ಲಾದೇಶ ಮಹಿಳಾ ಕ್ರಿಕೆಟ್ ತಂಡದ ನಾಯಕಿಯ ವಿರುದ್ಧ ವೇಗದ ಬೌಲರ್ವೊಬ್ಬರು ಗಂಭೀರ ಆರೋಪಗಳನ್ನು ಮಾಡಿದ್ದಾರೆ.
2025-11-05
ಬೀದಿ ನಾಯಿಗಳ ಹಾವಳಿ ಕುರಿತು ಸುಪ್ರೀಂಕೋರ್ಟ್ ಸ್ವಯಂ ಪ್ರೇರಿತ ವಿಚಾರಣೆ ನಡೆಸುತ್ತಿದ್ದು, ಬೀದಿನಾಯಿಗಳ ಕಡಿವಾಣಕ್ಕೆ ರಾಜ್ಯಗಳು ಕೈಗೊಂಡ ಕ್ರಮಗಳ ಬಗ್ಗೆ ವರದಿ ಕೇಳಿತ್ತು. ಈ ಹಿನ್ನಲೆ ಕರ್ನಾಟಕ ಸರ್ಕಾರ ಮಾಹಿತಿ ನೀಡಿದ್ದು, ಬೀದಿ ನಾಯಿಗಳ ನಿಯಂತ್ರಣಕ್ಕಾಗಿ ಸಂತಾನ ಹರಣ ಚಿಕಿತ್ಸೆ, ರೇಬಿಸ್ ಲಸಿಕೆ, ಸಹಾಯವಾಣಿ ಮತ್ತು ಆಹಾರ ಸ್ಪಾಟ್ಗಳಂತಹ ಕ್ರಮಗಳನ್ನು ಕೈಗೊಂಡಿರೋದಾಗಿ ಕೋರ್ಟ್ಗೆ ತಿಳಿಸಿದೆ.
2025-11-05
ಬಿಎಂಟಿಸಿ ಕನ್ನಹಳ್ಳಿ ಡಿಪೋದಲ್ಲಿ ಕುಡಿದು ಕೆಲಸಕ್ಕೆ ಬರುತ್ತಿದ್ದ ಎಲೆಕ್ಟ್ರಿಕ್ ಬಸ್ ಚಾಲಕರಿಗೆ ಲಂಚ ಪಡೆದು ಡ್ಯೂಟಿ ನೀಡಿದ ಪ್ರಕರಣ ಸಂಬಂಧ 9 ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಬಿಎಂಟಿಸಿ ಅಧಿಕಾರಿಗಳ ಈ ನಡೆ ಪ್ರಯಾಣಿಕರ ಜೀವಕ್ಕೆ ಅಪಾಯ ತಂದೊಡ್ಡಿರುವ ಬಗ್ಗೆ ವರದಿ ಮಾಡಿತ್ತು. ಇದರಿಂದಾಗಿ ಎಚ್ಚೆತ್ತ ಬಿಎಂಟಿಸಿ, ಇಂತಹ ಘಟನೆಗಳನ್ನು ತಡೆಯಲು ಮುಂದಾಗಿದೆ.
2025-11-05
ನಂದಿನಿ ತುಪ್ಪದ ದರ ಏರಿಕೆ: ಕರ್ನಾಟಕ ರಾಜ್ಯದ ಜನತೆಗೆ ಕೆಎಂಎಫ್ ಮತ್ತೊಂದು ದರ ಏರಿಕೆಯ ಬಿಸಿ ಮುಟ್ಟಿಸಿದೆ. ದಿಢೀರ್ ಆಗಿ ನಂದಿನಿ ತುಪ್ಪದ ಬೆಲೆಯನ್ನು ಹೆಚ್ಚಳ ಮಾಡಲಾಗಿದೆ. ಜಿಎಸ್ಟಿ ಪರಿಷ್ಕರಣೆ ನಂತರ ದರದಲ್ಲಿ ತುಸು ಇಳಿಕೆ ಮಾಡಿದ್ದ ಕೆಎಂಎಫ್, ಇದೀಗ ಮತ್ತೆ ದರ ಏರಿಕೆ ಮಾಡಿ ಜನತೆಗೆ ಶಾಕ್ ನೀಡಿದೆ.
2025-11-05
ಮಾಜಿ ಕೇಂದ್ರ ಸಚಿವರೊಬ್ಬರು ರಾಷ್ಟ್ರೀಯ ಪಕ್ಷವನ್ನು ತ್ಯಜಿಸಿ ಪ್ರಾದೇಶಿಕ ಪಕ್ಷ ಸೇರಿದ್ದಾರೆ.
2025-11-05
ಸೋನಿಪತ್ನ ಪ್ರಿಯಾಂಶು ಅವರು ಸದ್ಯ ಫರಿದಾಬಾದ್ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದು, ಯುಪಿಎಸ್ಸಿ ಸಿಡಿಎಸ್ ಪರೀಕ್ಷೆಯಲ್ಲಿ 13ನೇ ಸ್ಥಾನದಲ್ಲಿ ಉತ್ತೀರ್ಣರಾಗಿ ಲೆಫ್ಟಿನೆಂಟ್ ಹುದ್ದೆಗೆ ಆಯ್ಕೆ ಆಗಿದ್ದಾರೆ.
2025-11-05
‘ರುಕ್ಮಿಣಿ ರಾಧಾಕೃಷ್ಣ’ ಸಿನಿಮಾಗೆ ಸುನಾದ ಗೌತಮ್ ಅವರು ಸಂಗೀತ ನೀಡಿದ್ದಾರೆ. ಸಿನಿಮಾದಲ್ಲಿ 6 ಹಾಡುಗಳು ಇರಲಿವೆ. ಭರತ್ ಕುಮಾರ್, ಮೋಕ್ಷಿತಾ ಪೈ, ರಿಯಾ ಸಚ್ದೇವ್ ಮುಂತಾದವರು ಈ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಸುನೀಲ್ ನರಸಿಂಹಮೂರ್ತಿ ಅವರು ಛಾಯಗ್ರಹಣ, ಎಂ. ಲಕ್ಷ್ಮಣರಾವ್ ಅವರು ಸಂಕಲನದ ಜವಾಬ್ದಾರಿ ನಿಭಾಯಿಸಲಿದ್ದಾರೆ.
2025-11-05
ಮಕ್ಕಳು ಎಂದಿನಂತೆ ಶಾಲೆಗೆ ಹೋಗಿ ಬಂದ ಬಳಿಕ ಟ್ಯೂಷನ್ ರೀತಿಯಲ್ಲಿ ಮಕ್ಕಳಿಗೆ ಮನಮುಟ್ಟುವ ರೀತಿಯಲ್ಲಿ ಅವರಿಗೆ ಕಲಿಕೆಗೆ ಸಹಾಯ ಮಾಡುವ ಕಾರ್ಯವನ್ನು ಈ ಟ್ರಸ್ಟ್ ಮಾಡುತ್ತಿದೆ.
2025-11-05
Yash's toxic movie: ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ಮುಂದಿನ ವರ್ಷ ಮಾರ್ಚ್ 19ರಂದು ಬಿಡುಗಡೆ ಆಗಲಿದೆ. ದೊಡ್ಡ ಸಿನಿಮಾಗಳು ‘ಟಾಕ್ಸಿಕ್’ ಜೊತೆಗೆ ಬಾಕ್ಸ್ ಆಫೀಸ್ ಕ್ಲ್ಯಾಷ್ ತಪ್ಪಿಸಿಕೊಳ್ಳಲು ಈಗಿನಿಂದಲೇ ಯೋಜನೆ ಹಾಕಿಕೊಳ್ಳುತ್ತಿದ್ದಾರೆ. ಆದರೆ ಇಲ್ಲೊಬ್ಬ ನಟ, ನನ್ನ ಸಿನಿಮಾವನ್ನು ‘ಟಾಕ್ಸಿಕ್’ ಎದುರೇ ಬಿಡುಗಡೆ ಮಾಡುತ್ತೀನಿ ಎಂದು ಹಠಕ್ಕೆ ಬಿದ್ದಂತಿದೆ.
2025-11-05
ಗದಗದಲ್ಲಿ ಬೆಳೆಹಾನಿ ಪರಿಹಾರ ಸಿಗದೆ ಮನನೊಂದ ರೈತನೊಬ್ಬ ನಾಡಕಚೇರಿಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮಳೆ ಮತ್ತು ಪ್ರವಾಹದಿಂದ ಬೆಳೆ ನಾಶವಾಗಿದ್ದರೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಈ ಬಗ್ಗೆ ಮಾಹಿತಿ ದಾಖಲಾಗಿರಲಿಲ್ಲ. ಸ್ಥಳದಲ್ಲಿದ್ದವರು ರೈತನನ್ನು ಆಸ್ಪತ್ರೆಗೆ ದಾಖಲಿಸಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಗೆ ರವಾನಿಸಲಾಗಿದೆ.
2025-11-05
India vs Pakistan Cricket: 2025ರ ನವೆಂಬರ್ನಲ್ಲಿ ಭಾರತ ಮತ್ತು ಪಾಕಿಸ್ತಾನ ಕ್ರಿಕೆಟ್ ತಂಡಗಳು 4 ಬಾರಿ ಮುಖಾಮುಖಿಯಾಗಲಿವೆ. ಹಾಂಗ್ ಕಾಂಗ್ ಸಿಕ್ಸಸ್ ಮತ್ತು ರೈಸಿಂಗ್ ಸ್ಟಾರ್ಸ್ ಏಷ್ಯಾಕಪ್ನಲ್ಲಿ ಈ ರೋಚಕ ಹಣಾಹಣಿ ನಡೆಯಲಿದೆ. ಐಸಿಸಿ ಈವೆಂಟ್ಗಳನ್ನು ಹೊರತುಪಡಿಸಿ ಈ ತಂಡಗಳು ಇಷ್ಟೊಂದು ಪಂದ್ಯಗಳನ್ನು ಆಡುವುದು ಅಪರೂಪ. ಕ್ರಿಕೆಟ್ ಅಭಿಮಾನಿಗಳಿಗೆ ಇದು ನಿಜಕ್ಕೂ ಹಬ್ಬ.
2025-11-05
IPL 2026 Trade Window: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2026) ಸೀಸನ್-19 ರ ಹರಾಜಿಗೂ ಮುನ್ನವೇ ಕೆಲ ಫ್ರಾಂಚೈಸಿಗಳು ಪ್ರಮುಖ ಆಟಗಾರರನ್ನು ಟ್ರೇಡ್ ಮಾಡಿಕೊಳ್ಳಲು ಮುಂದಾಗುತ್ತಿದೆ. ಈ ಮೂಲಕ ಮಿನಿ ಹರಾಜಿಗೂ ಮುನ್ನ ತಮ್ಮ ತಂಡಗಳನ್ನು ಬಲಿಷ್ಠಗೊಳಿಸಲು ಪ್ಲ್ಯಾನ್ ರೂಪಿಸುತ್ತಿದೆ
2025-11-05
ಹರಿಯಾಣ ಚುನಾವಣೆಯಲ್ಲಿ ಮತಕಳವು ಆರೋಪ: ಚುನಾವಣಾ ಆಯೋಗ ಬಿಜೆಪಿಯೊಂದಿಗೆ ಕೈಜೋಡಿಸಿದೆ ಎಂದು ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ರಾಜ್ಯ ಚುನಾವಣಾ ಪಟ್ಟಿಯಲ್ಲಿ 25 ಲಕ್ಷ ನಕಲಿ ನಮೂದುಗಳನ್ನು ಮಾಡಲಾಗಿದೆ ಎಂದು ಹೇಳಿದ್ದಾರೆ.
2025-11-05
West Indies vs New Zealand T20: ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ವೆಸ್ಟ್ ಇಂಡೀಸ್ 7 ರನ್ಗಳ ರೋಚಕ ಗೆಲುವು ಸಾಧಿಸಿದೆ. ಶಾಯ್ ಹೋಪ್ ನಾಯಕತ್ವದ ಇನ್ನಿಂಗ್ಸ್ ನೆರವಿನಿಂದ 164 ರನ್ ಗಳಿಸಿದ ವಿಂಡೀಸ್, ನ್ಯೂಜಿಲೆಂಡ್ ತಂಡವನ್ನು 157 ರನ್ಗಳಿಗೆ ಕಟ್ಟಿಹಾಕಿತು. ಮಿಚೆಲ್ ಸ್ಯಾಂಟ್ನರ್ 55* ರನ್ ಸಿಡಿಸಿ ಹೋರಾಟ ನಡೆಸಿದರೂ ತಂಡವನ್ನು ಗೆಲುವಿನತ್ತ ಕೊಂಡೊಯ್ಯಲು ಸಾಧ್ಯವಾಗಲಿಲ್ಲ. ಈ ಜಯದೊಂದಿಗೆ ವೆಸ್ಟ್ ಇಂಡೀಸ್ ಸರಣಿಯಲ್ಲಿ 1-0 ಮುನ್ನಡೆ ಗಳಿಸಿದೆ.
2025-11-05
ಅಮೆರಿಕದಲ್ಲಿ ಯುಪಿಎಸ್ ಸರಕು ಸೇವಾ ವಿಮಾನವು ದುರಂತಕ್ಕೀಡಾಗಿ ಸುಟ್ಟು ಕರಕಲಾಗಿದೆ. ಘಟನೆಯಲ್ಲಿ 7 ಮಂದಿ ಸಾವಿಗೀಡಾಗಿದ್ದಾರೆ.
2025-11-05
Lakhs_rupees_stolen_Bengaluru_man_cryptocurrency
Nitish_Kumar_take_oath_Bihar_CM
You_too_can_become_an_AI_expert
When_time_donate_kidney_father_son
Dr_Ahmed_imprisoned_Sabarmati_plotting_ricin_attack
© gokakica.in. All Rights Reserved. Designed by Image Computer Academy