2025ರ ಮೇ ತಿಂಗಳಿಂದ ಅಕ್ಟೋಬರ್ ತಿಂಗಳ ತನಕ ಕೇಂದ್ರ ಸರ್ಕಾರ ಎನ್ಎಫ್ಎಸ್ಎ ಕಮಿಷನ್ ಕೊಟ್ಟಿಲ್ಲ. ಅಲ್ಲದೆ ರಾಜ್ಯ ಸರ್ಕಾರ ಅನ್ನಭಾಗ್ಯ ಯೋಜನೆ ಅಡಿಯಲ್ಲೂ ಕಮಿಷನ್ ಮರೀಚಿಕೆಯಾಗಿದೆ.
2025-11-16
2020ರಲ್ಲಿ ಆಂಡ್ರೆ ರಸೆಲ್ಗೆ ಕೊಟ್ಟ ಮಾತನ್ನು ಕೋಲ್ಕತ್ತಾ ನೈಟ್ ರೈಡರ್ಸ್ ತಪ್ಪಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಫ್ಯಾನ್ಸ್ ಕಾಮೆಂಟ್ ಮಾಡುತ್ತಿದ್ದಾರೆ.
2025-11-16
ಆಂಧ್ರ ಪ್ರದೇಶ ರಾಜ್ಯಕ್ಕೆ ನಿರೀಕ್ಷೆಗೂ ಮೀರಿದ ಬಂಡವಾಳ ಹೂಡಿಕೆ ಹರಿದುಬಂದಿದ್ದು, ಕೈಗಾರಿಕಾ ಸಮ್ಮೇಳನ ಯಶಸ್ವಿಯಾಗಿದೆ. ಇದರಿಂದ ಉದ್ಯೋಗಾಕಾಂಕ್ಷಿಗಳಲ್ಲಿ ಹೊಸ ನಿರೀಕ್ಷೆಗಳು ಗರಿಗೆದರಿವೆ.
2025-11-16
ಹಿಂದುಗಳಿದ ವರ್ಗಗಳ ಮೀಸಲಾತಿಯಲ್ಲಿ ಕೆನೆಪದರ ವರ್ಗ ಹೊರಗಿಟ್ಟಂತೆ ಎಸ್ಸಿ-ಎಸ್ಟಿ ಮೀಸಲಾತಿಯಿಂದಲೂ ಹೊರಗಿಡುವುದಕ್ಕೆ ಸುಪ್ರೀಂ ಕೋರ್ಟ್ ಸಿಜೆಐ ಬಿ.ಆರ್.ಗವಾಯಿ ಬೆಂಬಲ ವ್ಯಕ್ತಪಡಿಸಿದ್ದಾರೆ.
2025-11-16
Karnataka Weather: ಇಂದು ಕರಾವಳಿಯ ಜಿಲ್ಲೆಗಳಲ್ಲಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಒಣ ಹವೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜಧಾನಿ ಬೆಂಗಳೂರಲ್ಲಿ ಮೋಡಕವಿದ ವಾತಾವರಣದ ಸಾಧ್ಯತೆ ಇದ್ದರೆ, ರಾಜ್ಯದಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
2025-11-15
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ ರಿಟೆನ್ಷನ್ಗೂ ಮುನ್ನ 10 ಫ್ರಾಂಚೈಸಿಗಳಿಗೆ ಆಟಗಾರರ ಟ್ರೇಡಿಂಗ್ಗೆ ಅವಕಾಶ ನೀಡಲಾಗಿದೆ. ಈ ಆಯ್ಕೆಯ ಮೂಲಕ ಇದೀಗ ಕೆಲ ಫ್ರಾಂಚೈಸಿಗಳು ಬೇರೆ ತಂಡಗಳಲ್ಲಿದ್ದ ಆಟಗಾರರನ್ನು ಖರೀದಿಸಿದೆ. ಹೀಗೆ ಟ್ರೇಡಿಂಗ್ ಪ್ರಕ್ರಿಯೆಯ ಮೂಲಕ ಹೊಸ ತಂಡಗಳಿಗೆ ಆಯ್ಕೆಯಾಗಿರುವ ಆಟಗಾರರ ಪಟ್ಟಿ ಈ ಕೆಳಗಿನಂತಿದೆ.
2025-11-15
India vs South Africa 1st Test Controversy: ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ನಲ್ಲಿ ಜಸ್ಪ್ರೀತ್ ಬುಮ್ರಾ ಅದ್ಭುತ ಬೌಲಿಂಗ್ ಮಾಡಿ ಐದು ವಿಕೆಟ್ಗಳನ್ನು ಪಡೆದು ಆಫ್ರಿಕಾದ ಬ್ಯಾಟಿಂಗ್ ಕ್ರಮಾಂಕವನ್ನು ಛಿದ್ರಗೊಳಿಸಿದರು. ಆದಾಗ್ಯೂ, ಪಂದ್ಯದ ಮಧ್ಯದಲ್ಲಿ ಡಿಆರ್ಎಸ್ ಸಮಯದಲ್ಲಿ, ಬುಮ್ರಾ ರಿಷಭ್ ಪಂತ್ ಅವರೊಂದಿಗಿನ ಸಂಭಾಷಣೆಯಲ್ಲಿ "ಡ್ವಾರ್ಫ್" ಎಂಬ ಪದವನ್ನು ಬಳಸಿದ್ದು ವಿವಾದಕ್ಕೆ ಕಾರಣವಾಗಿದೆ.
2025-11-15
Vaibhav Suryavanshi Century: ವೈಭವ್ ಸೂರ್ಯವಂಶಿ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಕೇವಲ 35 ಎಸೆತಗಳಲ್ಲಿ ಸೆಂಚುರಿ ಸಿಡಿಸಿ ದಾಖಲೆ ನಿರ್ಮಿಸಿದ್ದರು. ಇದೀಗ ಭಾರತ ಎ ಪರ ಕೂಡ ಅತೀ ಕಡಿಮೆ ಎಸೆತಗಳಲ್ಲಿ ಶತಕ ಬಾರಿಸಿದ ಸಾಧನೆ ಮಾಡಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ನಲ್ಲಿ ಹೊಸ ವಿಶ್ವ ದಾಖಲೆಯನ್ನು ಸಹ ನಿರ್ಮಿಸಿದ್ದಾರೆ.
2025-11-15
ಬಿಹಾರದಲ್ಲಿ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟವಾಗಿದೆ. ಎರಡು ಹಂತಗಳಲ್ಲಿ ನಡೆದ ಮತದಾನದಲ್ಲಿ ಎನ್ಡಿಎ 202 ಸ್ಥಾನಗಳನ್ನು ಗಳಿಸಿದ್ದರೆ ಮಹಾಘಟಬಂಧನ್ 35 ಸ್ಥಾನಗಳನ್ನು ಗಳಿಸಿದೆ. ಇತರೆ 6 ಸ್ಥಾನಗಳನ್ನು ಪಡೆದಿದೆ. ಬಿಜೆಪಿ ಬಿಹಾರದಲ್ಲಿ ಅತಿ ದೊಡ್ಡ ರಾಜಕೀಯ ಪಕ್ಷವಾಗಿ ಹೊರಹೊಮ್ಮಿದೆ. ಈ ಹೀನಾಯ ಸೋಲಿನ ಬಗ್ಗೆ ಕಾಂಗ್ರೆಸ್ ಯಾವ ರೀತಿಯ ಪ್ರತಿಕ್ರಿಯೆ ನೀಡಿದೆ? ಕಾಂಗ್ರೆಸ್ ನಾಯಕರ ಅಭಿಪ್ರಾಯವೇನು? ಎಂಬುದರ ಬಗ್ಗೆ ಮಾಹಿತಿ ಇಲ್ಲಿದೆ.
2025-11-15
ಬಿಹಾರದ ವಿಧಾನಸಭಾ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸುವುದಕ್ಕಿಂತ ಕೇವಲ ಒಂದು ದಿನ ಮೊದಲು ಪಕ್ಷಕ್ಕೆ ಸೇರ್ಪಡೆಯಾಗಿದ್ದ ಜಾನಪದ ಗಾಯಕಿ ಮೈಥಿಲಿ ಠಾಕೂರ್ ಅವರ ಹೆಸರೂ ಕೂಡ ಅಭ್ಯರ್ಥಿಗಳ ಪಟ್ಟಿಯಲ್ಲಿ ಕಾಣಿಸಿಕೊಂಡಿತ್ತು. ಹಲವು ಹಿರಿಯ ನಾಯಕರಿಗೇ ಟಿಕೆಟ್ ಸಿಗದಿದ್ದಾಗ ಕೇವಲ 25 ವರ್ಷದ ಈ ಹುಡುಗಿಗೆ ಟಿಕೆಟ್ ನೀಡಿದ್ದಕ್ಕೆ ಹಲವರಿಗೆ ಕೊಂಚ ಅಸಮಾಧಾನವೂ ಆಗಿತ್ತು. ಆದರೆ, ಅದೇ ಮೈಥಿಲಿ ಈಗ ಮೊದಲ ಪ್ರಯತ್ನದಲ್ಲೇ ಆರ್ಜೆಡಿ ಅಭ್ಯರ್ಥಿ ವಿರುದ್ಧ ಗೆದ್ದು ದೇಶದ ಅತಿ ಕಿರಿಯ ಶಾಸಕಿಯೆಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
2025-11-15
ಚಿಕ್ಕಬಳ್ಳಾಪುರದ ಬಾಗೇಪಲ್ಲಿ ತಾಲೂಕಿನ ದೇವಿರೆಡ್ಡಿಪಲ್ಲಿಯಲ್ಲಿ ಹಳೆಯ ದ್ವೇಷದ ಕಾರಣ ಒಂದೇ ಕುಟುಂಬದ 8 ಮಂದಿಗೆ ವಿಷ ನೀಡಲಾಗಿದ್ದು, ಕುಟುಂಬಸ್ಥರು ಅಸ್ವಸ್ಥಗೊಂಡಿದ್ದಾರೆ. ಸಾಂಬಾರಿಗೆ ವಿಷ ಬೆರೆಸಿ ಈ ಕೃತ್ಯ ಎಸಗಲಾಗಿದ್ದು, ಮೂವರ ಸ್ಥಿತಿ ಚಿಂತಾಜನಕವಾಗಿದೆ. ಪೊಲೀಸರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದು, ತನಿಖೆ ಮುಂದುವರೆದಿದೆ.
2025-11-15
ಕನ್ನಡ ನಟಿ ಕಿರುಕುಳ ಪ್ರಕರಣದಲ್ಲಿ ಎವಿಆರ್ ಗ್ರೂಪ್ ಸಂಸ್ಥಾಪಕ ಅರವಿಂದ್ ರೆಡ್ಡಿಯನ್ನು ಪೊಲೀಸರು ಬಂಧಿಸಿದ್ದಾರೆ. 2021ರಲ್ಲಿ ಪರಿಚಯ, ನಂತರ ಪ್ರೀತಿ-ಕಾಳಜಿ, ಬಳಿಕ ಸಂಪರ್ಕ ಕಡಿತಗೊಳಿಸಿ ಕಿರುಕುಳ ಶುರುಮಾಡಿದ್ದ. ಮದುವೆ ಭರವಸೆ, ನಟಿಯ ಆತ್ಮಹತ್ಯೆ ಯತ್ನ, ಆಸ್ಪತ್ರೆ ಸೇರಿದಾಗ ಹಲ್ಲೆ ಸೇರಿದಂತೆ ಹಲವು ಆರೋಪಗಳಿವೆ.
2025-11-15
ಶಂಕರ್ ನಾಗ್ ಜನ್ಮದಿನದಂದು ಉಪೇಂದ್ರ ಅವರು ಅವರ ಬಯೋಪಿಕ್ ಕುರಿತು ಮಾತನಾಡಿದ್ದಾರೆ. ಬಯೋಪಿಕ್ ನಿರ್ಮಾಣವು ಫಿಕ್ಷನ್ ಸಿನಿಮಾ ಮಾಡಿದಷ್ಟು ಸುಲಭವಲ್ಲ.ಅನಂತ್ ನಾಗ್ ಮತ್ತು ಗಾಯತ್ರಿ ಅವರ ಒಪ್ಪಿಗೆ, ಸ್ಕ್ರಿಪ್ಟ್ ತಯಾರಿ ಹಾಗೂ ವಾಣಿಜ್ಯಕ ಅಂಶಗಳ ಸಮತೋಲನ ಕಾಯ್ದುಕೊಳ್ಳುವುದು ಮುಖ್ಯ ಎಂದು ಅವರು ಹೇಳಿದ್ದಾರೆ.
2025-11-15
ಬಿಗ್ ಬಾಸ್ ಕನ್ನಡ 12ರ ಕಿರಿಯ ಸ್ಪರ್ಧಿ ರಕ್ಷಿತಾ ಶೆಟ್ಟಿ ವಯಸ್ಸಿನ ಬಗ್ಗೆ ಕಾವ್ಯಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಾವ್ಯಾ ಮತ್ತು ಸ್ಪಂದನಾ ನಡುವಿನ ಚರ್ಚೆಯಲ್ಲಿ, ರಕ್ಷಿತಾ ತನ್ನ ವಯಸ್ಸನ್ನು ಉಪಯೋಗಿಸಿಕೊಂಡು ಅನುಕೂಲ ಪಡೆಯುತ್ತಿದ್ದಾರೆಂದು ಕಾವ್ಯಾ ಆರೋಪಿಸಿದ್ದಾರೆ.ಈ ವಿಚಾರ ವಾರಾಂತ್ಯದಲ್ಲಿ ಚರ್ಚೆಗೆ ಬರುವ ಸಾಧ್ಯತೆಯಿದೆ.
2025-11-15
ಶ್ರೀನಗರದ ನೌಗಾಂ ಪೊಲೀಸ್ ಠಾಣೆಯಲ್ಲಿ ಸಂಭವಿಸಿದ ಭಾರಿ ಸ್ಫೋಟದಲ್ಲಿ 9 ಮಂದಿ ಸಾವನ್ನಪ್ಪಿ, 27 ಮಂದಿ ಗಾಯಗೊಂಡಿದ್ದಾರೆ. ಉಗ್ರರಿಂದ ವಶಪಡಿಸಿಕೊಂಡಿದ್ದ ಸ್ಫೋಟಕಗಳೇ ಇದಕ್ಕೆ ಕಾರಣ ಎನ್ನಲಾಗಿದ್ದು, ಅವುಗಳ ಸಂಗ್ರಹದಲ್ಲಿ ಲೋಪ ಅಥವಾ ಬೇರೆ ಕಾರಣಗಳ ಬಗ್ಗೆ ತನಿಖೆ ನಡೆಯುತ್ತಿದೆ. ಈ ಬಗ್ಗೆ ತಜ್ಞರು ಏನು ಹೇಳಿದ್ದಾರೆ ಎಂಬ ಮಾಹಿತಿ ಇಲ್ಲಿದೆ.
2025-11-15
Srinagar Blast: ಜಮ್ಮು ಮತ್ತು ಕಾಶ್ಮೀರದ ಶ್ರೀನಗರದ ನೌಗಾಮ್ ಪೊಲೀಸ್ ಠಾಣೆಯಲ್ಲಿ ಸ್ಫೋಟ ಸಂಭವಿಸಿ ಪೊಲೀಸರು ಸೇರಿದಂತೆ 9 ಮಂದಿ ಮೃತಪಟ್ಟು, 27 ಮಂದಿ ಗಾಯಗೊಂಡಿದ್ದಾರೆ. ಉಗ್ರರಿಂದ ವಶಪಡಿಸಿಕೊಂಡ ಸ್ಫೋಟಕಗಳು ಸ್ಫೋಟಗೊಂಡು ಈ ದುರಂತ ಸಂಭವಿಸಿದೆ ಎನ್ನಲಾಗಿದೆ. ಸದ್ಯ ಭದ್ರತಾ ಪಡೆಗಳು ಸ್ಥಳಕ್ಕೆ ದಾವಿಸಿದ್ದು, ತನಿಖೆ ನಡೆಸುತ್ತಿವೆ.
2025-11-15
ಬಿಗ್ ಬಾಸ್ ಹಿಂದಿ 'ವೀಕೆಂಡ್ ಕಾ ವಾರ್'ಗೆ ಸಲ್ಮಾನ್ ಖಾನ್ ಗೈರಾಗಿದ್ದಾರೆ. ಖತಾರ್ನಲ್ಲಿ ಕಾರ್ಯಕ್ರಮವಿರುವ ಕಾರಣ, ನಿರ್ದೇಶಕ ರೋಹಿತ್ ಶೆಟ್ಟಿ ಈ ವಾರ ನಿರೂಪಣೆ ಮಾಡಲಿದ್ದಾರೆ. ನವೆಂಬರ್ 15 ಮತ್ತು 16 ರಂದು ರೋಹಿತ್ ಶೆಟ್ಟಿ ಬಿಗ್ ಬಾಸ್ ಹಿಂದಿ ನಡೆಸಿಕೊಡಲಿದ್ದಾರೆ. ಕನ್ನಡದಲ್ಲಿ ಸುದೀಪ್ ಮಾತ್ರ ಬಿಗ್ ಬಾಸ್ ನಿರೂಪಿಸಿದ್ದಾರೆ. ಅವರ ಸ್ಥಾನವನ್ನು ಬೇರೆ ಯಾರೂ ತುಂಬಿಲ್ಲ.
2025-11-15
ಬೆಂಗಳೂರಿನ ಕಬ್ಬನ್ ಪಾರ್ಕ್ನಲ್ಲಿರುವ 'ಡಾಗ್ ಪಾರ್ಕ್' ದುರುಪಯೋಗವಾಗುತ್ತಿದ್ದು, ವಾಕರ್ಸ್ ಮತ್ತು ನಾಗರಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಕುಪ್ರಾಣಿ ಮಾಲೀಕರ ನಿರ್ಲಕ್ಷ್ಯ, ಸ್ವಚ್ಛತೆಯ ಕೊರತೆಯಿಂದ ಹಿರಿಯರು, ಮಕ್ಕಳಿಗೆ ಅಪಾಯ ಉಂಟಾಗಿದೆ ಎಂದು CPWA ಅಧ್ಯಕ್ಷ ಎಸ್. ಉಮೇಶ್ ಕುಮಾರ್ ತಿಳಿಸಿದ್ದಾರೆ. ಅದರೊಂದಿಗೆ ಸಾರ್ವಜನಿಕ ಸ್ಥಳಗಳ ಸುರಕ್ಷತೆ ಮತ್ತು ಸ್ವಚ್ಛತೆಯನ್ನು ಕಾಪಾಡಲು ಕ್ರಮಕ್ಕೆ ಒತ್ತಾಯಿಸಿದ್ದಾರೆ.
2025-11-15
ಯಾದಗಿರಿ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಅಂಜಲಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿತ್ತು. ಇದರಿಂದ ಗಂಭೀರ ಗಾಯಗೊಂಡಿದ್ದ ಅವರು ಕಲಬುರಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಚಿಕಿತ್ಸೆ ಫಲಿಸದೆ ಹೈದರಾಬಾದ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಈ ಹಿನ್ನೆಲೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದ್ದು, ಉಳಿದ ಇಬ್ಬರು ಪರಾರಿಯಾಗಿದ್ದಾರೆ.
2025-11-15
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19ರ ಮಿನಿ ಹರಾಜಿಗೂ ಮುನ್ನ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯು ನಾಲ್ವರು ವಿದೇಶಿ ಆಟಗಾರರನ್ನು ಬಿಡುಗಡೆ ಮಾಡಿದ್ದಾರೆ. ಇಲ್ಲಿ ಸ್ಯಾಮ್ ಕರನ್ ಅವರನ್ನು ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ ಜೊತೆ ಸ್ವಾಪ್ ಡೀಲ್ ಮಾಡಿಕೊಂಡರೆ, ಇನ್ನುಳಿದ ಮೂವರನ್ನು ತಂಡದಿಂದ ರಿಲೀಸ್ ಮಾಡಲು ನಿರ್ಧರಿಸಿದ್ದಾರೆ.
2025-11-15
ಬೆಳಗಾವಿ ಜಿಲ್ಲೆಯ ಕಿತ್ತೂರು ಚನ್ನಮ್ಮ ಕಿರು ಮೃಗಾಲಯದಲ್ಲಿ ಶನಿವಾರ ಒಂದೇ ದಿನ 20 ಕೃಷ್ಣಮೃಗಗಳು ಮೃತಪಟ್ಟಿವೆ. ಇದರೊಂದಿಗೆ ಕಳೆದ ಎರಡು ದಿನಗಳ ಅವಧಿಯಲ್ಲಿ ಒಟ್ಟು 28 ಕೃಷ್ಣಮೃಗಗಳು ಮೃತಪಟ್ಟಂತಾಗಿದ್ದು, ಮೃತದೇಹದ ಮಾದರಿಗಳನ್ನು ಪ್ರಯೋಗಾಲಯಕ್ಕೆ ಪರೀಕ್ಷೆಗಾಗಿ ಕಳುಹಿಸಿಕೊಡಲಾಗಿದೆ. ಬ್ಯಾಕ್ಟೀರಿಯಾ ಸೋಂಕಿನಿಂದ ಕೃಷ್ಣಮೃಗಗಳು ಸಾವನ್ನಪ್ಪಿರುವ ಶಂಕೆಯೂ ವ್ಯಕ್ತವಾಗಿದೆ.
2025-11-15
ಕಾಂಗ್ರೆಸ್ ಅವರು ಕೆರೆಗಳನ್ನು ಹಾಳುಮಾಡಿ, ಅವೈಜ್ಞಾನಿಕ ಮೇಲುಸೇತುವೆಗಳನ್ನು ನಿರ್ಮಿಸಿ, ಸ್ಯಾಂಕಿ ಕೆರೆಯ ನಾಶಕ್ಕೆ ಮುಂದಾಗಿದೆ ಎಂದು ಬಿಜೆಪಿ ನಾಯಕರು ಸಹಿ ಸಂಗ್ರಹ ಅಭಿಯಾನದ ವೇಳೆ ಆಕ್ರೋಶ ವ್ಯಕ್ತಪಡಿಸಿದರು.
2025-11-15
ಫ್ರೀಡಂ ಪಾರ್ಕ್ನಲ್ಲಿ ಮತ ಚೋರಿ ವಿರುದ್ಧ ರಾಜ್ಯ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿ, ಬಿಜೆಪಿ, ಪ್ರಧಾನಿ ಮೋದಿ ವಿರುದ್ಧ ಆಕ್ರೋಶ ಹೊರ ಹಾಕಿದರು.
2025-11-15
ಬೆಂಗಳೂರಿನಲ್ಲಿ ಇತ್ತೀಚೆಗೆ ನಕಲಿ ವಸ್ತುಗಳ ಹಾವಳಿ ಜೋರಾಗಿದೆ. ಇದೀಗ ನಂದಿನಿ ಬ್ರ್ಯಾಂಡ್ ಹೆಸರಲ್ಲಿ ಬೃಹತ್ ನಕಲಿ ತುಪ್ಪ ಮಾರಾಟ ಜಾಲವನ್ನು ಸಿಸಿಬಿ ಮತ್ತು ಕೆಎಂಎಫ್ ಜಂಟಿ ಕಾರ್ಯಾಚರಣೆ ನಡೆಸಿ ಭೇದಿಸಿದೆ. ತಮಿಳುನಾಡಿನಲ್ಲಿ ಕಲಬೆರಕೆ ಮಾಡಿ ಅದನ್ನ ಮತ್ತೆ ಕರ್ನಾಟಕಕ್ಕೆ ತಂದು ಮಾರಾಟ ಮಾಡುತ್ತಿದ್ದರು. ಸದ್ಯ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.
2025-11-15
ಸತೀಶ್ ಜಾರಕಿಹೊಳಿ ಅವರು ಬಿಹಾರ ಚುನಾವಣೆ ಫಲಿತಾಂಶದ ಕುರಿತು ಮಾತನಾಡಿದ್ದು, ತಮ್ಮ ಪಕ್ಷಕ್ಕೆ ಇದೊಂದು ದೊಡ್ಡ ಪಾಠ ಎಂದಿದ್ದಾರೆ.
2025-11-15
Lakhs_rupees_stolen_Bengaluru_man_cryptocurrency
Nitish_Kumar_take_oath_Bihar_CM
You_too_can_become_an_AI_expert
When_time_donate_kidney_father_son
Dr_Ahmed_imprisoned_Sabarmati_plotting_ricin_attack
© gokakica.in. All Rights Reserved. Designed by Image Computer Academy